ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ನಟ ಪ್ರಕಾಶ್ ರೈ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ನಟ ಪ್ರಕಾಶ್ ರೈ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಕೆಲಕಾಲ ವಾದ ಆಲಿಸಿದ ಪೀಠ, ಅರ್ಜಿದಾರರ ಕೋರಿಕೆಯನ್ನು ವಜಾಗೊಳಿಸಿ ಆದೇಶಿಸಿತು.
ಪ್ರಕರಣದ ಹಿನ್ನೆಲೆ: 2019ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ನಟ ಪ್ರಕಾಶ್ ರೈ ಯಾವುದೇ ಅನುಮತಿ ಇಲ್ಲದೆ ನಗರದ ಎಂಜಿ ರಸ್ತೆಯಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಮಾರಂಭದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು. ಈ ಸಂಬಂಧ ಬಿಬಿಎಂಪಿ ಫ್ಲೈಯಿಂಗ್ ಸ್ಕ್ವಾಡ್ ಪ್ರಕರಣ ದಾಖಲಿಸಿತ್ತು. ನಂತರ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಪ್ರಕಾಶ್ ರೈ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.