ಬೆಂಗಳೂರು: ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರನ್ನು ಭೇಟಿ ಮಾಡಿದ್ದಾರೆ.
ಪದ್ಮನಾಭನಗರದಲ್ಲಿರುವ ಗೌಡರ ನಿವಾಸಕ್ಕೆ ಆಗಮಿಸಿದ ಜೋಶಿ, ತಮ್ಮ ಪುತ್ರಿಯ ವಿವಾಹ ಮಹೋತ್ಸವದ ಆಮಂತ್ರಣ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದರು.
ಇದೇ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ರಾಜಕಾರಣದ ಬಗ್ಗೆಯೂ ಕೆಲಕಾಲ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.