ಬೆಂಗಳೂರು/ಗೋವಾ: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೋವಾ ಪ್ರವಾಸ ಕೈಗೊಳ್ಳುತ್ತಿದ್ದು, ಎರಡನೇ ಬಾರಿ ಮುಖ್ಯಮಂತ್ರಿ ಆಗುತ್ತಿರುವ ಡಾ.ಪ್ರಮೋದ್ ಸಾವಂತ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಈ ಸಮಾರಂಭಕ್ಕೆ ಪ್ರಧಾನಿ ಸೇರಿದಂತೆ ಹಲವು ರಾಜ್ಯಗಳ ಸಿಎಂಗಳ ಸಹ ಗೋವಾಕ್ಕೆ ಪ್ರಯಾಣ ಬೆಳಸುತ್ತಿದ್ದಾರೆ.
ಯೋಗಿ ಆಧಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಉತ್ತರ ಪ್ರದೇಶದ ಲಖನೌಗೆ ಸಾವಂತ್ ಜೊತೆ ಒಟ್ಟಿಗೆ ಪ್ರಯಾಣಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಇದೀಗ ಸಾವಂತ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ತೆರಳಿ ಶುಭ ಕೋರಲಿದ್ದಾರೆ.
ಓದಿ: SSLC ಪರೀಕ್ಷೆಗೆ ಕ್ಷಣಗಣನೆ: ಎಕ್ಸಾಂ ಬರೆಯಲಿದ್ದಾರೆ 8,73,846 ವಿದ್ಯಾರ್ಥಿಗಳು, ಹಿಜಾಬ್ಗೆ ನೋ ಎಂಟ್ರಿ!
ಇಂದು ಬೆಳಗ್ಗೆ 7 ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಯಾಣಿಸಲಿರುವ ಸಿಎಂ ಬೊಮ್ಮಾಯಿ, 8.15ಕ್ಕೆ ಗೋವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ. 9.15ಕ್ಕೆ ಡಾ. ಶಾಮ ಪ್ರಸಾದ್ ಮುಖರ್ಜಿ ಒಳಾಂಗಣ ಕ್ರೀಡಾಂಗಣಕ್ಕೆ ಪ್ರವೇಶಿಸಲಿರುವ ಸಿಎಂ ಬೊಮ್ಮಾಯಿ 11 ಗಂಟೆಗೆ ಪ್ರಮೋದ್ ಸಾವಂತ್ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ 1.30ಕ್ಕೆ ಗೋವಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಸಲಿರುವ ಬೊಮ್ಮಾಯಿ ಮಧ್ಯಾಹ್ನ 2.45ಕ್ಕೆ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ ವಿಧಾನಸಭೆಯ ಮಧ್ಯಾಹ್ನದ ಕಲಾಪದಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಈ ಪದಗ್ರಹಣ ಸಮಾರಂಭಕ್ಕೆ ಪ್ರಧಾನಿ ಮೋದಿ ಜೊತೆ ಹಲವು ರಾಜ್ಯಗಳ ಸಿಎಂಗಳು ಸಹ ಭಾಗಿಯಾಗಲಿದ್ದಾರೆ.