ETV Bharat / state

ಪೇಸಿಎಂ ಡಿಜಿಟಲ್ ಆ್ಯಪ್ ಶೀಘ್ರ ಅನುಷ್ಠಾನಕ್ಕೆ ತನ್ನಿ: ಸಿಎಂಗೆ ಮಾಜಿ ಉಪಸಭಾಪತಿ ಪ್ರಾಣೇಶ್ ಪತ್ರ

ನೆರವು ನೀಡಲು ಆಸಕ್ತ ಸಾರ್ವಜನಿಕರಿಗೆ, ಯುವ ಪೀಳಿಗೆಯವರಿಗೆ ಅನುಕೂಲವಾಗುವಂತೆ ಮತ್ತು ಮುಂದಿನ ಭವಿಷ್ಯದ ದೃಷ್ಟಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಯನ್ನು ಡಿಜಿಟಲ್ ವ್ಯಾಪ್ತಿಗೆ ತರಲು ಸರ್ಕಾರ ಕ್ರಮಕೈಗೊಂಡಲ್ಲಿ, ಹೆಚ್ಚಿನ ದೇಣಿಗೆ ಸಂಗ್ರಹಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.

Former Deputy Chairman MK Pranesh
ಮಾಜಿ ಉಪಸಭಾಪತಿ ಎಂ ಕೆ ಪ್ರಾಣೇಶ್
author img

By

Published : Sep 25, 2022, 6:44 AM IST

ಬೆಂಗಳೂರು: ಕಾಂಗ್ರೆಸ್ ಪೇ ಸಿಎಂ ಅಭಿಯಾನದ ಮೂಲಕ ಬಿಜೆಪಿ ಸರ್ಕಾರವನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿರುವ ಹಿನ್ನೆಲೆ "PayCM" Pay to Chief Minister Relief Fund ಹೆಸರಿನಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು ಡಿಜಿಟಲ್ ವ್ಯಾಪ್ತಿಗೆ ತರವಂತೆ ಮಾಜಿ ಉಪಸಭಾಪತಿ ಎಂ.ಕೆ ಪ್ರಾಣೇಶ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ತಮ್ಮ‌‌ ಪತ್ರದಲ್ಲಿ ಅವರು, ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು ಡಿಜಿಟಲ್ ಮಾಡುವ ಮುಖಾಂತರ "PayCM" Pay to Chief Minister Relief Fund (CMRF) ಎಂಬ ಹೆಸರಿನಲ್ಲಿ ಕಿಯೋನಿಕ್ಸ್​ನಂತಹ ಸಂಸ್ಥೆ ವತಿಯಿಂದ ಒಂದು ಡಿಜಿಟಲ್ ಪೇಮೆಂಟ್ ಆ್ಯಪ್‌ನ್ನು ಸಿದ್ಧಪಡಿಸನೇಕು. ಈ ಆ್ಯಪ್ ಮುಖಾಂತರ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರಾಜ್ಯದ ಸಾರ್ವಜನಿಕರು, ಸಂಘ-ಸಂಸ್ಥೆಗಳು ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಸಂಕಷ್ಟದಲ್ಲಿರುವ ರಾಜ್ಯದ ಬಡ ಕುಟುಂಬಗಳ ನೆರವಿಗೆ ಧಾವಿಸಲು ಅವಕಾಶ ಕಲ್ಪಿಸಿ ಕೊಡುವಂತೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸರ್ಕಾರ ನೊಂದ ಕುಟುಂಬಗಳಿಗೆ ನೆರವು ನೀಡುತ್ತಾ ಬಂದಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರಾಜ್ಯದ ಐಟಿ ಬಿಟಿ ಕಂಪನಿಗಳಿಂದ, ಸಿ.ಎಸ್‌.ಆರ್. ಫಂಡ್‌ನಿಂದ ಮತ್ತು ದಾನಿಗಳಿಂದ ದೇಣಿಗೆ ಸಂದಾಯವಾಗುತ್ತಿದ್ದು, ನೆರವು ನೀಡಲು ಆಸಕ್ತ ಸಾರ್ವಜನಿಕರಿಗೆ, ಯುವ ಪೀಳಿಗೆಯವರಿಗೆ ಅನುಕೂಲವಾಗುವಂತೆ ಮತ್ತು ಮುಂದಿನ ಭವಿಷ್ಯದ ದೃಷ್ಟಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಯನ್ನು ಡಿಜಿಟಲ್ ವ್ಯಾಪ್ತಿಗೆ ತರಲು ಸರ್ಕಾರ ಕ್ರಮಕೈಗೊಂಡಲ್ಲಿ, ಹೆಚ್ಚಿನ ದೇಣಿಗೆ ಸಂಗ್ರಹಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿ ಹೆಸರಿನಲ್ಲಿ "PayCM Pay to Chief Minister Relief Fund (CMRF) ಎಂಬ ಡಿಜಿಟಲ್ ಆ್ಯಪ್​ನ್ನು ಕೂಡಲೇ ಅನುಷ್ಠಾನಗೊಳಿಸುವಂತೆ ಈ ಮೂಲಕ ತಮ್ಮಲ್ಲಿ ಕೋರುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಡರ್ಟಿ ಪಾಲಿಟಿಕ್ಸ್​ ಮಾಡುತ್ತಿದೆ, ಅದರ ನೈತಿಕ ಅಧಪತನವೇ ಪಕ್ಷದ ಸೋಲಿಗೆ ಕಾರಣ : ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.