ETV Bharat / state

ಡಿಕೆಶಿ ಭೇಟಿ ಮಾಡಿ ಆಶೀರ್ವದಿಸಿದ ಪ್ರಸನ್ನಾನಂದಪುರಿ ಮಹಾಸ್ವಾಮಿ

ಪಕ್ಷ ಸಂಘಟನೆಯ ಮಹತ್ವದ ಜವಾಬ್ದಾರಿ ವಹಿಸಿಕೊಂಡಿರುವ ಡಿಕೆಶಿ ಎಲ್ಲಾ ಸಮುದಾಯಗಳ ಮುಖಂಡರು ಹಾಗೂ ಮಠಾಧಿಪತಿಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಮುಂದುವರಿದ ಭಾಗವಾಗಿ ಹರಿಹರದಲ್ಲಿರುವ ಶ್ರೀ ವಾಲ್ಮೀಕಿ ಮಹಾಸಂಸ್ಥಾನದ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮಿಗಳು ಭೇಟಿಯಾಗಿ ಆಶೀರ್ವಾದ ಮಾಡಿದ್ದಾರೆ.

author img

By

Published : May 12, 2020, 10:31 PM IST

Prasanna Nandapuri Mahaswamiji visited DK Shivakumar House
ಡಿಕೆಶಿ ಭೇಟಿ ಮಾಡಿ ಆಶೀರ್ವದಿಸಿದ ಪ್ರಸನ್ನಾನಂದಪುರಿ ಮಹಾಸ್ವಾಮಿ

ಬೆಂಗಳೂರು: ದಾವಣಗೆರೆಯ ಹರಿಹರದಲ್ಲಿರುವ ಶ್ರೀ ವಾಲ್ಮೀಕಿ ಮಹಾಸಂಸ್ಥಾನದ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಆಶೀರ್ವದಿಸಿದರು. ಸದಾಶಿವನಗರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿ ಆಶೀರ್ವಾದ ಮಾಡಿದರು.

ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಕಳೆದ ಎರಡು ತಿಂಗಳ ಅವಧಿಯಲ್ಲಿ ಸಾಕಷ್ಟು ರಾಜಕೀಯ ನಾಯಕರು ಹಾಗೂ ಮಠಾಧಿಪತಿಗಳು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಅಲ್ಲದೆ ಖುದ್ದು ಡಿಕೆಶಿ ಕೂಡ ಹಲವು ರಾಜಕೀಯ ನಾಯಕರನ್ನು ಹಾಗೂ ಮಠಾಧೀಶರನ್ನು ಭೇಟಿ ಮಾಡಿ ಸಮಾಲೋಚಿಸಿದ್ದರು.

ಕಾಂಗ್ರೆಸ್ ಪಕ್ಷದ ಪ್ರಮುಖ ಒಕ್ಕಲಿಗ ನಾಯಕರಾಗಿ ಗುರುತಿಸಿಕೊಂಡಿರುವ ಶಿವಕುಮಾರ್ ಪಕ್ಷ ಸಂಘಟನೆಯ ಮಹತ್ವದ ಜವಾಬ್ದಾರಿ ವಹಿಸಿಕೊಂಡಿದ್ದು, ಎಲ್ಲಾ ಸಮುದಾಯಗಳ ಮುಖಂಡರು ಹಾಗೂ ಮಠಾಧಿಪತಿಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪದೊಂದಿಗೆ ಅಧಿಕಾರ ವಹಿಸಿಕೊಂಡಿರುವ ಶಿವಕುಮಾರ್, ಹೈಕಮಾಂಡ್​​ಗೂ ಇದೇ ಭರವಸೆಯನ್ನು ನೀಡಿದ್ದಾರೆ.

ವಿಧಾನಸಭೆ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಪಕ್ಷ ಕಟ್ಟುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ.

ದಿನಸಿ ಕಿಟ್ ವಿತರಣೆ

ಬೆಂಗಳೂರಿನ ಶಾಂತಿನಗರದಲ್ಲಿ ಎನ್.ಎ.ಹ್ಯಾರಿಸ್ ಫೌಂಡೇಶನ್ ವತಿಯಿಂದ ಬಡವರಿಗೆ ನೀಡಲಾದ 3,000 ದಿನಸಿ ಪದಾರ್ಥಗಳ ಕಿಟ್​​ಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳವಾರ ವಿತರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.