ಬೆಂಗಳೂರು: ನಟ ಹಾಗೂ ಬಿಗ್ ಬಾಸ್ ವಿನ್ನರ್ ಪ್ರಥಮ್ ಡಿಜೆ ಹಳ್ಳಿ ಪ್ರಕರಣದ ಕುರಿತು ಟ್ವೀಟ್ ಮಾಡಿದ್ದರು. ಈ ಟ್ವೀಟ್ಗೆ ಆಕ್ರೋಶ ವ್ಯಕ್ತವಾದ ಕಾರಣ, ಆ ಪೋಸ್ಟ್ನ್ನು ಅವರು ಡಿಲೀಟ್ ಮಾಡಿದ್ದಾರೆ.
ಪ್ರಥಮ್ ಅವರ ಟ್ವೀಟ್ ಸಮಾಜದಲ್ಲಿ ಶಾಂತಿ ಕದಡುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಸಮುದಾಯವನ್ನು ಅವಹೇಳನ ಮಾಡುವ ರೀತಿ ಪೋಸ್ಟ್ ಹಾಕಲಾಗಿದೆ ಎಂದು ಹಲವರು ಕಿಡಿ ಕಾರಿದ್ದಾರೆ. ಜಾಲತಾಣದಲ್ಲಿ ವಿರೋಧ ವ್ಯಕ್ತವಾಗುತ್ತಿದ್ದಂತೆ ಪ್ರಥಮ್ ತಮ್ಮ ಪೋಸ್ಟ್ ಡಿಲೀಟ್ ಮಾಡಿದ್ದಾರೆ.
ಸದ್ಯ ಪ್ರಥಮ್ಗೆ ಮೆಸೇಜ್ ಮಾಡಿ ಕಾಲ್ ಮಾಡಿ ಕೆಲವರು ಕ್ಲಾಸ್ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲ ಅಶ್ಲೀಲ ಸಂದೇಶಗಳು ಹಾಗೂ ವಾಟ್ಸ್ಆ್ಯಪ್ ಮೂಲಕ ವಾರ್ನ್ ಮಾಡಿದ್ದಾರೆ. ಪ್ರಥಮ್ ಕೂಡ ಇದಕ್ಕೆ ಪ್ರತ್ಯುತ್ತರ ನೀಡಿ ನಾನು ಆ ಸಮುದಾಯದ ಕೆಲ ಸ್ನೇಹಿತರಿಗೆ ಬೆಲೆ ಕೊಟ್ಟು ಪೋಸ್ಟ್ ಡಿಲೀಟ್ ಮಾಡಿದ್ದೇನೆ. ನನಗೂ ಶಾಸಕರ ಮನೆ ಹಾಗೂ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆ ಬಗ್ಗೆ ನೋವಿದೆ. ಆದರೆ, ಹೆಚ್ಚು ಕಮ್ಮಿ 200 ಜನ ರಾತ್ರಿ, ಅಶ್ಲೀಲ ಸಂದೇಶ ಹಾಗೂ ಕರೆ ಮಾಡಿ ಬೆದರಿಕೆ ಹಾಕ್ತಿದ್ದಾರೆ. ಇದು ಹೀಗೆ ಮುಂದುವರಿದರೆ ಕಮಿಷನರ್ ಮತ್ತು ಗೃಹ ಸಚಿವರಿಗೆ ದೂರು ನೀಡುತ್ತೇನೆ ಎಂದು ಪ್ರಥಮ ಎಚ್ಚರಿಕೆ ಸಹ ನೀಡಿದ್ದಾರೆ.