ETV Bharat / state

ಇತರರಿಗೆ ಪಾಠವಾಗುವಂತೆ ಪ್ರವೀಣ್ ನೆಟ್ಟಾರು ಹಂತಕರಿಗೆ ಶಿಕ್ಷೆಯಾಗಬೇಕು: ಪ್ರಹ್ಲಾದ್ ಜೋಷಿ

author img

By

Published : Jul 27, 2022, 6:58 PM IST

Updated : Jul 27, 2022, 7:17 PM IST

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿದ್ದಾರೆ.

Prahlad Joshi
ಹ್ಲಾದ್ ಜೋಷಿ

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಕೃತ್ಯ ಎಸಗಿದವರನ್ನು ಯಾವುದೇ ಮುಲಾಜಿಲ್ಲದೇ ಬಂಧಿಸಬೇಕು. ಕೃತ್ಯದಲ್ಲಿ ಭಾಗಿಯಾದವರಿಗೆ ಎಲ್ಲರಿಗೂ ಪಾಠವಾಗುವಂತೆ ಶಿಕ್ಷೆ ಆಗಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಆಗ್ರಹಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿದರು. ಪ್ರಕರಣದ ಕುರಿತು ಆರಂಭಿಕ ವರದಿಗಳು ಮತ್ತು ಕೆಲವು ಮಾಧ್ಯಮ ವರದಿಗಳು ಎಸ್​ಡಿಪಿಐ ಮತ್ತು ಪಿಎಫ್ಐ ಲಿಂಕ್‌ಗಳಿರೋದನ್ನ ಸೂಚಿಸುತ್ತಿದೆ. ಕೇರಳದಲ್ಲಿ ಅವರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಕೂಡ ಇಂಥವರನ್ನ ಪ್ರೋತ್ಸಾಹಿಸುತ್ತಿದೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪಿಎಫ್​​ಐ ಕಾರ್ಯಕರ್ತರ ಮೇಲಿನ ಕೇಸ್​​ಗಳನ್ನೆಲ್ಲ ಹಿಂಪಡೆದರು. ಈ ರೀತಿ, ಕಾಂಗ್ರೆಸ್ ಪಿಎಫ್ಐಗೆ ಪ್ರೋತ್ಸಾಹ ನೀಡುತ್ತಿದೆ. ಬಿಜೆಪಿ ಯುವಮೋರ್ಚಾ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಕರ್ನಾಟಕ ಸರ್ಕಾರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

ಇದನ್ನೂ ಓದಿ: Praveen Murder.. ಕೇಸ್ ಎನ್ಐಎಗೆ ವಹಿಸಲು ಹಿಂದೆ ಮುಂದೆ ನೋಡಲ್ಲ: ಸಿಎಂ

ಇದೇ ವೇಳೆ, ಪ್ರವೀಣ್ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಕೇಂದ್ರ ಸಚಿವರು, ದುಷ್ಕರ್ಮಿಗಳು ನಡೆಸಿದ ದಾಳಿಯಿಂದ ನಮ್ಮ ಕಾರ್ಯಕರ್ತನ ಹತ್ಯೆಯಾಗಿದೆ‌. ಈ ಕೃತ್ಯ ಎಸಗಿದವರನ್ನು ಯಾವುದೇ ಮುಲಾಜಿಲ್ಲದೇ ಬಂಧಿಸಬೇಕು. ಎಲ್ಲರಿಗೂ ಪಾಠವಾಗುವಂತೆ ಶಿಕ್ಷೆ ಆಗಬೇಕು. ಆ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು.

Last Updated : Jul 27, 2022, 7:17 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.