ETV Bharat / state

ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಬಗ್ಗೆ ಮುನ್ನೆಚ್ಚರಿಕೆ ಕ್ರಮ: ಬಿಬಿಎಂಪಿ ಮುಖ್ಯ ಆಯುಕ್ತ - ಬಿಬಿಪಿಎಂ ವ್ಯಾಪ್ತಿಯಲ್ಲಿ ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಪ್ರಸ್ತಾವನೆ

ಬಿಬಿಪಿಎಂ ವ್ಯಾಪ್ತಿಯಲ್ಲಿ ಮಂಕಿಪಾಕ್ಸ್ ಕುರಿತು ಮುನ್ನೆಚ್ಚರಿಕೆ- ಅಗತ್ಯ ಚಿಕಿತ್ಸೆಗೆ ಸಿದ್ಧತೆ-ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

precautionary-measures-taking-for-monkeypox-in-bengaluru-says-tushar-girinath
ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಬಗ್ಗೆ ಮುನ್ನೆಚ್ಚರಿಕೆ ಕ್ರಮ: ಬಿಬಿಎಂಪಿ ಮುಖ್ಯ ಆಯುಕ್ತ
author img

By

Published : Jul 20, 2022, 3:33 PM IST

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದುವರೆಗೆ ಮಂಕಿಪಾಕ್ಸ್ ಪ್ರಕರಣ ವರದಿಯಾಗಿಲ್ಲ. ಆದರೂ, ವೈರಲ್​ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

ನಗರದ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಬಿಪಿಎಂ ವ್ಯಾಪ್ತಿಯಲ್ಲಿ ಮಂಕಿಪಾಕ್ಸ್ ಕುರಿತಂತೆ ಮುನ್ನೆಚ್ಚರಿಕೆಗಳನ್ನು ವಹಿಸಲಾಗುತ್ತಿದೆ. ಜೊತೆಗೆ ತಕ್ಷಣಕ್ಕೆ ಚಿಕಿತ್ಸೆ ಸಿಗುವಂತಹ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಸರ್ಕಾರ ಸೂಚನೆ ಪ್ರಕಾರ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು‌.

ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಬಗ್ಗೆ ಮುನ್ನೆಚ್ಚರಿಕೆ ಕ್ರಮ: ಬಿಬಿಎಂಪಿ ಮುಖ್ಯ ಆಯುಕ್ತ

ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಪ್ರಸ್ತಾವನೆ: ವಾರ್ಡ್ ಮರುವಿಂಡಗಣೆ ಈಗಾಗಲೇ ಪೂರ್ಣಗೊಂಡಿದ್ದು, ವಾರ್ಡ್​ಗಳಿಗೆ ಬಜೆಟ್ ಪರಿಷ್ಕರಣೆ ಮಾಡಲಾಗುವುದು. ಅಲ್ಲದೇ, ಚುನಾವಣೆ ಸಂಬಂಧ 1993ರಿಂದ ಇಲ್ಲಿಯವರೆಗೆ ಗೆದ್ದ ಅಭ್ಯರ್ಥಿಗಳು ಹಾಗೂ ಮೀಸಲಾತಿ ವಿವರವನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಪ್ರತಿ ವಾರ್ಡ್​ಗೆ ಎರಡೂವರೆ ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ. ವಾರ್ಡ್ ಕಚೇರಿ ಆರಂಭಿಸಲ ಸಹ ಸೂಚಿಸಿದ್ದು, ವಾರ್ಡ್ ನಕಾಶೆ ಆಧಾರದ ಮೇಲೆ ಕಚೇರಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ವಾರ್ಡ್​ಗಳ ಸಂಖ್ಯೆ ಏರಿಕೆ‌ಯಾದ ಹಿನ್ನೆಲೆಯಲ್ಲಿ 400 ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ ಎಂದು ತುಷಾರ್ ಗಿರಿನಾಥ್ ವಿವರಿಸಿದರು.

ಅನಧಿಕೃತ ಫ್ಲೆಕ್ಸ್ ವಿರುದ್ದ ಕಾನೂನು ಕ್ರಮ: ನಗರದಲ್ಲಿನ ಅನಧಿಕೃತ ಫ್ಲೆಕ್ಸ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ದಿನ ಸಾವಿರಾರು ಫ್ಲೆಕ್ಸ್​ಗಳನ್ನು ತೆರವು ಮಾಡಲಾಗುತ್ತಿದೆ. ಇನ್ಮುಂದೆ ತಪ್ಪು ಮಾಡುವವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು ತೀರ್ಮಾನ ಮಾಡಲಾಗಿದೆ. ಅಲ್ಲದೇ, ಏಕ ಬಳಕೆಯ ಪ್ಲಾಸ್ಟಿಕ್ ಕಡಿವಾಣಕ್ಕೆ ದಾಳಿ ಮುಂದುವರೆಸಲಾಗುವುದು ಎಂದ ಹೇಳಿದರು.

ಇದನ್ನೂ ಓದಿ: ಯಾವುದೇ ಸರ್ಕಾರಿ ಶಾಲೆ ಮುಚ್ಚಲ್ಲ, ಅಗತ್ಯ ಬಿದ್ದರೆ ಎರಡು ಮೂರು ಶಾಲೆ ಸಂಯೋಜನೆ: ಸಚಿವ ನಾಗೇಶ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.