ETV Bharat / state

ಪುನೀತ್ ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ವಾಣಿಜ್ಯ ಮಂಡಳಿ ಸಿದ್ಧತೆ - ಪುನೀತ್ ರಾಜ್​​ಕುಮಾರ್

ದಿ.ಪುನೀತ್ ರಾಜ್​​ಕುಮಾರ್ ಅವರಿ​​ಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವನ್ನು ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸುತ್ತಿದೆ.

ಪುನೀತ್ ರಾಜ್​​ಕುಮಾರ್
ಪುನೀತ್ ರಾಜ್​​ಕುಮಾರ್
author img

By

Published : Nov 3, 2021, 4:46 PM IST

ಬೆಂಗಳೂರು: ಪವರ್‌ಸ್ಟಾರ್ ಪುನೀತ್ ರಾಜ್​​ಕುಮಾರ್ ಸಮಾಧಿ ಸ್ಥಳ ವೀಕ್ಷಣೆಗೆ ಸಾರ್ವಜನಿಕರಿಗೆ ಈಗಾಗಲೇ ಅವಕಾಶ ನೀಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆಯತನಕ ಸಮಾಧಿ ವೀಕ್ಷಿಸಬಹುದು. ಇಂದು ಬೆಳಗ್ಗೆಯಿಂದಲೇ ಅಭಿಮಾನಿಗಳು, ಅಪ್ಪು ಸಮಾಧಿ ಸ್ಥಳಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಶ್ರದ್ಧಾಂಜಲಿ ಕಾರ್ಯಕ್ರಮ:

ಪುನೀತ್ ರಾಜ್​​ಕುಮಾರ್​​ಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವನ್ನು ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸ್ಯಾಂಡಲ್‌ವುಡ್, ಟಾಲಿವುಡ್, ಕಾಲಿವುಡ್, ಬಾಲಿವುಡ್‌ ನಟ-ನಟಿಯರು ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರ ಹಾಗೂ ಗ್ರಾಮಗಳಲ್ಲಿ ವೃತ್ತ ಹಾಗೂ ರಸ್ತೆಗಳಿಗೆ ಪುನೀತ್ ರಾಜ್​​​ಕುಮಾರ್ ಹೆಸರು ನಾಮಕರಣ ಮಾಡಲಾಗುತ್ತಿದೆ. ನಗರದ ವೃತ್ತಗಳಲ್ಲಿ ಪುನೀತ್ ಕಂಚಿನ ಪ್ರತಿಮೆ ನಿರ್ಮಿಸಲು ಶಿಲ್ಪ ಕಲಾವಿದರಿಗೆ ಆರ್ಡರ್ ನೀಡಲಾಗುತ್ತಿದೆ. ಬೆಂಗಳೂರಿನ ಹಲವು ಶಿಲ್ಪ ಕಲಾವಿದರು ಅಪ್ಪುವಿನ ಕಂಚಿನ ಪ್ರತಿಮೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.