ETV Bharat / state

ಏರುತ್ತಿರುವ ಶಿರಾ, ಆರ್‌ಆರ್‌ನಗರ​ ಉಪಚುನಾವಣೆ ಕಾವು.. ಮೂರು ಪಕ್ಷಗಳಿಂದ ತಂತ್ರ-ಪ್ರತಿತಂತ್ರ - ಉಪಚುನಾವಣೆಗೆ ರಾಜಕೀಯ ಪಕ್ಷಗಳಿಂದ ಸಿದ್ದತೆ

ಶಿರಾ ಮತ್ತು ಆರ್​.ಆರ್​ ನಗರ ಉಪಚುನಾವಣೆ ಕಾಂಗ್ರೆಸ್​, ಬಿಜೆಪಿ ಮತ್ತು ಜೆಡಿಎಸ್​ ಮೂರೂ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಹೀಗಾಗಿ, ಹೇಗಾದರು ಮಾಡಿ ಚುನಾವಣೆ ಗೆಲ್ಲಬೇಕೆಂಬ ಪಣ ತೊಟ್ಟಿರುವ ಪಕ್ಷಗಳ ನಾಯಕರು ಸತತ ಸಭೆಗಳು, ತಂತ್ರ-ಪ್ರತಿ ತಂತ್ರ ಮತ್ತು ಪ್ರಭಲ ನಾಯಕರ ಓಲೈಕೆಯಲ್ಲಿ ತೊಡಗಿದ್ದಾರೆ..

Preparation from political parties for Shira and RR Nagar By Poll
ಶಿರಾ, ಆರ್. ಆರ್​ ನಗರದ ಉಪಚುನಾವಣೆ
author img

By

Published : Oct 5, 2020, 10:36 PM IST

ಬೆಂಗಳೂರು : ಶಿರಾ ಹಾಗೂ ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪಚುನಾವಣೆ ರಂಗೇರಿದೆ. ನವೆಂಬರ್ 3ರಂದು ನಡೆಯಲಿರುವ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ರಣತಂತ್ರ ರೂಪಿಸುತ್ತಿವೆ. ಮೂರು ಪಕ್ಷಗಳು ಸದ್ದಿಲ್ಲದೆ ಪ್ರಚಾರ ಕಾರ್ಯದಲ್ಲಿ ತೊಡಗಿವೆ.

ಈಗಾಗಲೇ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಎರಡು ಬಾರಿ ಶಿರಾಕ್ಕೆ ಭೇಟಿ ನೀಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳನ್ನು ಮಣಿಸಲು ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರು ಸಹ ಆ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದು, ಅ.7ರಂದು ಮಾಜಿ ಸಿಎಂ ಸಿದ್ದರಾಮಯ್ಯ ಶಿರಾದಲ್ಲಿ ಮುಖಂಡರ ಸಭೆ ನಡೆಸಲಿದ್ದಾರೆ. ಹಾಗೆಯೇ ಬಿಜೆಪಿ ನಾಯಕರು ಕೂಡ ಈಗಾಗಲೇ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದಾರೆ.

ಮೂರೂ ಪಕ್ಷಗಳಿಗೂ ಪ್ರತಿಷ್ಠೆಯ ಸವಾಲಾಗಿರುವ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ನಾಯಕರು ಈಗಾಗಲೇ ಅಖಾಡಕ್ಕಿಳಿದಿದ್ದಾರೆ. ಎರಡೂ ಕ್ಷೇತ್ರಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಕ್ಷೇತ್ರಗಳಲ್ಲಿನ ಹಲವು ಮುಖಂಡರನ್ನು ತಮ್ಮ ತಮ್ಮ ಪಕ್ಷಗಳತ್ತ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಕಾಂಗ್ರೆಸ್ ತನ್ನ ಕ್ಷೇತ್ರ ಉಳಿಸಿಕೊಳ್ಳಲು ರಣತಂತ್ರ ಹೆಣೆಯುತ್ತಿದ್ರೆ, ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ತನ್ನ ಕ್ಷೇತ್ರ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದೆ. ಆಡಳಿತಾರೂಢ ಬಿಜೆಪಿ ಈ ಎರಡೂ ಕ್ಷೇತ್ರಗಳನ್ನು ತನ್ನದಾಗಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸುತ್ತಿದೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಿಂದ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಆಯ್ಕೆಯಾಗಿದ್ದ ಮುನಿರತ್ನ ನಾಯ್ಡು ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ನೆರವಾಗಿದ್ದ ಹಿನ್ನೆಲೆ, ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಬಹುತೇಕ ಅವರಿಗೇ ಟಿಕೆಟ್ ಸಿಗುವುದು ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.

ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ತನ್ನ ನೆಲೆ ಮತ್ತಷ್ಟು ಭದ್ರಪಡಿಸಿಕೊಳ್ಳುವ ಯತ್ನ ನಡೆಸುತ್ತಿದೆ. ಆರ್‌ಆರ್‌ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಐಎಎಸ್ ಅಧಿಕಾರಿಯಾಗಿದ್ದ ದಿ. ಡಿ ಕೆ ರವಿ ಅವರ ಪತ್ನಿ ಕುಸುಮಾ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿರುವ ಕಾಂಗ್ರೆಸ್, ಅವರಿಗೆ ಟಿಕೆಟ್ ನೀಡಲು ನಿರ್ಧರಿಸಿದೆ. ರಾಜರಾಜೇಶ್ವರಿ ನಗರದಲ್ಲಿ ಒಕ್ಕಲಿಗ ಮತಗಳು ನಿರ್ಣಾಯಕವಾಗಿರುವುದರಿಂದ ಡಿ ಕೆ ರವಿ ಅವರ ಪತ್ನಿಯನ್ನು ಕಣಕ್ಕಿಳಿಸಿ ಅನುಕಂಪದ ಮತಗಳನ್ನು ಪಡೆಯಲು ಕಾಂಗ್ರೆಸ್ ತಂತ್ರ ರೂಪಿಸಿದೆ. ಬಿಜೆಪಿ ನಾಯಕರು ಕೂಡ ಈ ಕ್ಷೇತ್ರದಲ್ಲಿ ಪ್ರತಿತಂತ್ರ ರೂಪಿಸುತ್ತಿದ್ದಾರೆ.

ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಮಾಜಿ ಸಂಸದ ಮೂಡಲಗಿರಿಯಪ್ಪ ಅವರ ಪುತ್ರ ಡಾ.ರಾಜೇಶ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಉಪಚುನಾವಣೆಯಲ್ಲಿ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ. ಉಪಚುನಾವಣೆಯಲ್ಲಿ ಮೂರೂ ಪಕ್ಷಗಳು ಸಮಬಲದ ಪೈಪೋಟಿ ನಡೆಸುತ್ತಿದ್ದು, ತಂತ್ರ-ರಣತಂತ್ರ ರೂಪಿಸುತ್ತಿವೆ. ಎರಡು-ಮೂರು ದಿನಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳ್ಳಲಿದ್ದು, ನಾಯಕರುಗಳು ಸಮಾಲೋಚನಾ ಸಭೆಗಳನ್ನು ನಿರಂತರವಾಗಿ ನಡೆಸುತ್ತಿದ್ದಾರೆ.

ಕಳೆದ ಬಾರಿ ಪಡೆದ ಮತಗಳು, ಜಾತಿ-ಮತಗಳ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಮತದಾರರನ್ನು ಸೆಳೆಯಲು ವಿವಿಧ ಆಮಿಷಗಳನ್ನು ಒಡ್ಡುತ್ತಿದ್ದಾರೆ. ರಾಜ್ಯಮಟ್ಟದ ನಾಯಕರು ಈಗಾಗಲೇ ಸ್ಥಳೀಯ ನಾಯಕರ ಜತೆ ಹಲವು ಸುತ್ತಿನ ಮಾತುಕತೆ ನಡೆಸಿ ಮತಗಳು ಕೈತಪ್ಪದಂತೆ ಎಚ್ಚರ ವಹಿಸುತ್ತಿದ್ದಾರೆ. ಇದರ ಮಧ್ಯೆ ಮೂರು ಪಕ್ಷಗಳ ನಾಯಕರು ಆರೋಪ- ಪ್ರತ್ಯಾರೋಪಗಳು ಕೂಡ ಜೋರಾಗಿಯೇ ಮಾಡುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.