ETV Bharat / state

ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ತಯಾರಿ: ವಿಧೇಯಕದಲ್ಲಿ ಏನಿರಲಿದೆ? - belagavi session

ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆಗೆ ಸರ್ಕಾರ ಎಲ್ಲಾ ತಯಾರಿಗಳನ್ನು ನಡೆಸುತ್ತಿದೆ. ಕಾನೂನು ಇಲಾಖೆಯೂ ಇತರೆ ರಾಜ್ಯಗಳ ಕಾಯ್ದೆಯಲ್ಲಿನ ಕಾನೂನಾತ್ಮಕ ಅಂಶಗಳ ಬಗ್ಗೆ ಪರಿಶೀಲನೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

belagavi session
ಬೆಳಗಾವಿ ಅಧಿವೇಶನ
author img

By

Published : Dec 10, 2021, 5:09 AM IST

ಬೆಂಗಳೂರು: ವಿವಾದಿತ ಮತಾಂತರ ನಿಷೇಧ ಮಸೂದೆಯನ್ನು ಬೆಳಗಾವಿ ಅಧಿವೇಶನದಲ್ಲೇ ಮಂಡಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ಈಗಾಗಲೇ ಬಿಜೆಪಿ ಶಾಸಕರು, ಸಚಿವರು ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯ ಅಗತ್ಯತೆಯ ಬಗ್ಗೆ ಪ್ರಬಲವಾಗಿ ವಾದಿಸುತ್ತಿದ್ದಾರೆ.

ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ಮಸೂದೆ ತರುವುದು ಅನುಮಾನ ಎನ್ನಲಾಗಿತ್ತು. ಆದರೆ, ಮೂಲಗಳ ಪ್ರಕಾರ ಬೆಳಗಾವಿ ಅಧಿವೇಶನದಲ್ಲೇ ವಿಧೇಯಕ ‌ಮಂಡನೆಗೆ ಸರ್ಕಾರ ತಯಾರಿ ನಡೆಸುತ್ತಿದೆ.

ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಿದ್ಧತೆ:

ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಮಸೂದೆ ಮಂಡನೆಗೆ ಸರ್ಕಾರ ಎಲ್ಲಾ ತಯಾರಿಗಳನ್ನು ನಡೆಸುತ್ತಿದೆ. ಈಗಾಗಲೇ ಕರಡು ವಿಧೇಯಕ ಸಿದ್ಧವಾಗಿದ್ದು, ಕರಡು ವಿಧೇಯಕವನ್ನು ಎರಡು ಬಾರಿ ಸ್ಕ್ರುಟಿನಿಗೂ ಕಳುಹಿಸಲಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗಾವಿ ಅಧಿವೇಶನದಲ್ಲೇ ವಿವಾದಿತ ಮತಾಂತರ ನಿಷೇಧ ವಿಧೇಯಕ ಮಂಡನೆಗೆ ತಯಾರಿಗಳನ್ನು ನಡೆಸಲಾಗಿದೆ. ಈ ಮುಂಚೆ ಕೊನೆ ಕ್ಷಣದಲ್ಲಿ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಹಾಗೂ ಕರ್ನಾಟಕ ಧಾರ್ಮಿಕ ಕಟ್ಟಡ (ಸಂರಕ್ಷಣೆ) ವಿಧೇಯಕ 2021ನ್ನು ಮಂಡಿಸಲಾಗಿತ್ತು. ಅದೇ ರೀತಿ ಸರ್ಕಾರ ಬೆಳಗಾವಿ ಅಧಿವೇಶನಲ್ಲೇ ಮತಾಂತರ ನಿಷೇಧ ವಿಧೇಯಕ ಮಂಡಿಸಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಉತ್ತರ ಪ್ರದೇಶ, ಉತ್ತರಾಖಂಡ, ಗುಜರಾತ್, ಹಿಮಾಚಲ ಪ್ರದೇಶ, ಮಧ್ಯ ಪ್ರದೇಶ ಸೇರಿ 8 ವಿವಿಧ ರಾಜ್ಯಗಳಲ್ಲಿನ ಮತಾಂತರ ನಿಷೇಧ ಕಾಯ್ದೆಯನ್ನು ತರಿಸಿ ಶಾಸನ ರಚನೆ ಇಲಾಖೆ ಪರಿಶೀಲನೆ ನಡೆಸಿದೆ. ಕಾನೂನು ಇಲಾಖೆಯೂ ಇತರೆ ರಾಜ್ಯಗಳ ಕಾಯ್ದೆಯಲ್ಲಿನ ಕಾನೂನಾತ್ಮಕ ಅಂಶಗಳ ಬಗ್ಗೆ ಪರಿಶೀಲನೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಧೇಯಕದಲ್ಲಿ ಯಾವೆಲ್ಲಾ ಅಂಶ ಇರಲಿದೆ?:

ರಾಜ್ಯ ಮಂಡಿಸಲಿರುವ ಮತಾಂತರ ನಿಷೇಧ ವಿಧೇಯಕ ಕೆಲ ಕಠಿಣ ನಿಯಮಗಳನ್ನು ಹೊಂದಿರಲಿದೆ ಎಂದು ಮೂಲಗಳು ತಿಳಿಸಿವೆ.

ವಿಧೇಯಕದಲ್ಲಿ ಬಲವಂತದ ಮತಾಂತರವನ್ನು ಅಸಿಂಧು ಎಂದು ಘೋಷಿಸಲಾಗುವುದು. ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಮತಾಂತರ ಮಾಡುವವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳುವ ಅಂಶವನ್ನು ವಿಧೇಯಕದಲ್ಲಿ ಸೇರಿಸಲಾಗಿದೆ ಎಂದು ತಿಳಿದುಬಂದಿದೆ.

ಜೊತೆಗೆ ಮತಾಂತರ ಸಿಂಧುವಾಗಲು ಮ್ಯಾಜಿಸ್ಟ್ರೇಟ್​​ಗೆ ನಿಗದಿತ ಕಲಾವಧಿಯ ಮುಂಚೆಯೇ ಮತಾಂತರದ ಉದ್ದೇಶವನ್ನು ಘೋಷಿಸಬೇಕಾದ ಅಂಶವನ್ನೂ ಸೇರಿಸುವ ಬಗ್ಗೆ ಪರಿಶೀಲನೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಮ್ಯಾಜಿಸ್ಟ್ರೇಟ್ ಮತಾಂತರದ ವಾಸ್ತವ ಉದ್ದೇಶವನ್ನೂ ಅರಿಯಲು ಪೊಲೀಸ್ ತನಿಖೆ ನಡೆಸುವ ಅಂಶವೂ ವಿಧೇಯಕದಲ್ಲಿ ಇರುವ ಸಾಧ್ಯತೆ ಇದೆ‌ ಎಂದು ಹೇಳಲಾಗಿದೆ.

ವಿಧೇಯಕದಲ್ಲಿ ಬಲವಂತದ ಮತಾಂತರ ಆಗಿಲ್ಲ ಎಂಬುದನ್ನು ಸಾಬೀತು ಪಡಿಸುವ ಹೊಣೆಗಾರಿಕೆ ಮತಾಂತರಗೊಂಡ ವ್ಯಕ್ತಿಯ ಮೇಲಿರಲಿದೆ ಎಂದು ಹೇಳಲಾಗಿದೆ. ಮತಾಂತರ ನಿಷೇಧ ಕಾನೂನಿನಡಿ ಎಸಗುವ ಅಪರಾಧ ಜಾಮೀನು ರಹಿತವಾಗಿರಲಿದೆ. ಕಾನೂನು ಬಾಹಿರವಾಗಿ ಮತಾಂತರ ಮಾಡಿದವರನ್ನು 1-5 ವರ್ಷ ಸೆರೆಮನೆವಾಸ ಶಿಕ್ಷೆ ವಿಧಿಸುವ ಹಾಗೂ ಒಂದು ವೇಳೆ ಬಲವಂತದ ಮತಾಂತರಗೊಂಡ ವ್ಯಕ್ತಿ ಮಹಿಳೆ, ಅಪ್ರಾಪ್ತ, ಎಸ್​​ಸಿ, ಎಸ್​​ಟಿ ಸಮುದಾಯಕ್ಕೆ ಸೇರಿದವರಾದರೆ ಶಿಕ್ಷೆಯ ಪ್ರಮಾಣ ಗರಿಷ್ಠ 10 ವರ್ಷದವರೆಗೆ ಇರಲಿದೆ ಎಂಬ ಅಂಶವನ್ನೂ ವಿಧೇಯಕದಲ್ಲಿ ಸೇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮಂಗಳೂರು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ​​: ಆರೋಪಿ ನ್ಯಾಯವಾದಿಯ ಪತ್ನಿ ಸಹಿತ ಮತ್ತೋರ್ವನ ಬಂಧನ, ಜಾಮೀನು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.