ETV Bharat / state

ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರಕ್ಕೆ ವಿಧಾನಸೌಧದಲ್ಲಿ ಸಿದ್ಧತೆ: ಮೇ 24ಕ್ಕೆ ನೂತನ ಸ್ಪೀಕರ್ ಆಯ್ಕೆ - etv bharat kannada

ನಾಳೆಯಿಂದ ಮೂರು ದಿನಗಳ ಕಾಲ ವಿಧಾನಸಭೆ ಅಧಿವೇಶನ ನಡೆಯಲಿದ್ದು, ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

preparations-in-the-assembly-for-the-swearing-in-of-new-mla
ನೂತನ ಶಾಸಕರ ಪ್ರಮಾಣವಚನ ಸ್ವೀಕಾರಕ್ಕೆ ವಿಧಾನಸಭೆಯಲ್ಲಿ ಸಿದ್ಧತೆ: ಮೇ 24 ರಂದು ನೂತನ ಸ್ಪೀಕರ್ ಆಯ್ಕೆ
author img

By

Published : May 21, 2023, 6:12 PM IST

ಬೆಂಗಳೂರು: ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎಲ್ಲ ಪಕ್ಷಗಳ ನೂತನ ಶಾಸಕರ ಪ್ರಮಾಣವಚನಕ್ಕೆ ವಿಧಾನಸಭೆ ಸಚಿವಾಲಯ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ಅವರ ಸಮ್ಮುಖದಲ್ಲಿ ಎಲ್ಲ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ನಂತರ ನೂತನ ಸದಸ್ಯರಿಗೆ ಸಂವಿಧಾನ, ವಿಧಾನಸಭೆಯ ನಿಯಮಾವಳಿಗಳ ಪುಸ್ತಕ ಇರುವ ಬ್ಯಾಗ್​ಗಳನ್ನು ನೀಡಲಾಗುತ್ತದೆ.

ವಿಧಾನಸಭೆ ನಡೆಯುವ ಮೊಗಸಾಲೆ, ಲಾಂಚ್ ಸುತ್ತ ಮುತ್ತಲೂ ಸ್ವಚ್ಛಗೊಳಿಸಿರುವ ಸಿಬ್ಬಂದಿ ನಾಳೆಗೆ ಎಲ್ಲ ರೀತಿಯಲ್ಲೂ ಸಿದ್ಧತೆ ಮಾಡಿದೆ. ನಾಳೆಯಿಂದ ಮೂರು ದಿನಗಳ ವಿಧಾನಸಭೆ ಅಧಿವೇಶನ ಕರೆಯುವ ಕುರಿತು ಅಧಿಕೃತ ಆದೇಶ ಈಗಾಗಲೇ ಹೊರಡಿಸಲಾಗಿದೆ. ಮೇ 24 ರಂದು ವಿಧಾನಸಭೆಯ ನೂತನ ಸ್ಪೀಕರ್ ಆಯ್ಕೆಗೆ ಚುನಾವಣೆ ನಿಗದಿಯಾಗಿದೆ. ಎರಡು ದಿನ ನೂತನ ಸದಸ್ಯರ ಪ್ರಮಾಣವಚನ ಸ್ವೀಕಾರ ಕಲಾಪ ನಡೆಯಲಿದೆ. ಶಾಸಕರ ಪ್ರಮಾಣವಚನ ಕಲಾಪದ ಬಗ್ಗೆ 16ನೇ ವಿಧಾನಸಭೆಗೆ ಆಯ್ಕೆಯಾಗಿರುವ ಎಲ್ಲ ಸದಸ್ಯರಿಗೂ ಮಾಹಿತಿ ನೀಡಲಾಗಿದೆ.

ಕಾಂಗ್ರೆಸ್​ನ ಹಿರಿಯ ಸದಸ್ಯ ಆರ್. ವಿ. ದೇಶಪಾಂಡೆ ಅವರು ಹಂಗಾಮಿ ಸ್ಪೀಕರ್​ರಾಗಿ ಕಾರ್ಯನಿರ್ವಹಿಸಲಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ಹೆಚ್.ಕೆ. ಪಾಟೀಲ್, ಕೆ. ಎನ್. ರಾಜಣ್ಣ, ಆರ್.ವಿ. ದೇಶಪಾಂಡೆ, ಟಿ.ಬಿ. ಜಯಚಂದ್ರ ಅವರ ಹೆಸರುಗಳು ಕೇಳಿ ಬರುತ್ತಿವೆ. ಅಂತಿಮವಾಗಿ ಹೈಕಮಾಂಡ್ ಜೊತೆಗೆ ಚರ್ಚಿಸಿ ಇವರಲ್ಲಿ ಒಬ್ಬರನ್ನು ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಿದ್ದು, ನಿನ್ನೆಯಷ್ಟೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಮತ್ತು ಎಂಟು ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ನಿನ್ನೆಯೇ ಮೊದಲ ಸಚಿವ ಸಂಪುಟ ಸಭೆ ಕೂಡ ನಡೆದು ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ನೀಡಲಾಗಿತ್ತು. ನಾಳೆಯಿಂದ ಆಡಳಿತ ಯಂತ್ರ ಚುರುಕುಗೊಳ್ಳಲಿದೆ.

ಕಾಂಗ್ರೆಸ್​ನಲ್ಲಿ ಹೆಚ್ಚಿದ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ: ಇನ್ನು, ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಬಾಕಿ ಉಳಿದಿರುವ 24 ಸಚಿವ ಸ್ಥಾನಗಳಿಗೆ 80ಕ್ಕೂ ಹೆಚ್ಚು ಶಾಸಕರಿಂದ ಲಾಬಿ ಆರಂಭವಾಗಿದೆ. ದಿನಕ್ಕೊಬ್ಬರು ಸಿ ಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಹೈಕಮಾಂಡ್ ನಾಯಕರ ಮನೆ ಮುಂದೆ ತಮ್ಮದೇ ಆದ ಮಟ್ಟದಲ್ಲಿ ಲಾಬಿ ನಡೆಸಿದ್ದಾರೆ. ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿರುವ ಶಾಸಕರಲ್ಲಿ ಪ್ರಮುಖರಲ್ಲಿ ಸದ್ಯ ಕೆ ಜೆ ಜಾರ್ಜ್, ಎಂ. ಬಿ. ಪಾಟೀಲ್, ಜಮೀರ್ ಅಹ್ಮದ್ ಖಾನ್, ಸತೀಶ್ ಜಾರಕಿಹೊಳಿ ಸಚಿವರಾಗಿದ್ದಾರೆ.

ಆದರೆ ಪಟ್ಟಿ ಇನ್ನೂ ದೊಡ್ಡದಿದ್ದು ಎಚ್. ಸಿ. ಮಹದೇವಪ್ಪ, ಬಸವರಾಜ ರಾಯರೆಡ್ಡಿ, ದಿನೇಶ್ ಗುಂಡೂರಾವ್, ಈ ತುಕಾರಾಂ, ರಹೀಮ್ ಖಾನ್, ಎಸ್ ಎಸ್ ಮಲ್ಲಿಕಾರ್ಜುನ, ಕೆ ಎಂ. ಶಿವಲಿಂಗೇಗೌಡ, ಈಶ್ವರ ಖಂಡ್ರೆ, ಅಜಯ್ ಸಿಂಗ್, ಕೃಷ್ಣ ಬೈರೇಗೌಡ, ವಿನಯ್ ಕುಲಕರ್ಣಿ, ಯು. ಟಿ. ಖಾದರ್, ಸಂತೋಷ್ ಲಾಡ್, ವಿಜಯಾನಂದ ಕಾಶಪ್ಪನವರ್, ಕೆ. ಎನ್. ರಾಜಣ್ಣ, ಶಾಮನೂರು ಶಿವಶಂಕರಪ್ಪ , ಎಂ ಕೃಷ್ಣಪ್ಪ, ಕೆ ಎನ್‍ ರಾಜಣ್ಣ, ಶಿವರಾಜ್​ ತಂಗಡಗಿ, ಶ್ರೀನಿವಾಸ್ ಮಾನೆ, ರಿಜ್ವಾನ್ ಅರ್ಷದ್, ಎಚ್‍.ವೈ. ಮೇಟಿ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.

ಇದನ್ನೂ ಓದಿ:ದ್ವೇಷದ ರಾಜಕಾರಣ ಕೊನೆಗಾಣಿಸಿದರೆ ಅದೇ ರಾಜೀವ್ ಗಾಂಧಿಗೆ ಸಲ್ಲಿಸುವ ನಿಜವಾದ ಗೌರವ: ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.