ETV Bharat / state

ಪೇಜಾವರ ಶ್ರೀಗಳ ಇಚ್ಛೆಯಂತೆ ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತ್ಯಕ್ರಿಯೆ... ಸಕಲ ಸಿದ್ಧತೆ - ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳು ಬೃಂದಾವನಸ್ಥ

ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳು ಬೃಂದಾವನಸ್ಥರಾದ ಹಿನ್ನೆಲೆ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ಸಂಸ್ಕೃತ ಗುರುಕುಲದಲ್ಲಿ ಸಕಲ ಸಿದ್ಧತೆ ನಡೆದಿದೆ.

Preparing for the funeral of pejavar shri  Vidyapeeth in Bangalore
ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ
author img

By

Published : Dec 29, 2019, 11:11 AM IST

ಬೆಂಗಳೂರು: ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳ ಇಚ್ಛೆಯಂತೆ ಅವರ ಬೃಂದಾವನವನ್ನು ನಗರದ ಪೂರ್ಣಪ್ರಜ್ಞ ವಿದ್ಯಾಪೀಠ ಸಂಸ್ಕೃತ ಗುರುಕುಲದಲ್ಲಿ ನೆರವೇರಿಸಲು ಸಕಲ ಸಿದ್ಧತೆ ನಡೆದಿದೆ. ಈಗಾಗಲೇ ಶ್ರೀಗಳ 150 ಶಿಷ್ಯರು ಉಡುಪಿಯಿಂದ ಬೆಂಗಳೂರಿನ ಮಠದ ಕಡೆ ಬಂದಿದ್ದು, ಅಂತಿಮ ವಿಧಿ ವಿಧಾನಕ್ಕೆ ಬೇಕಾದ ವ್ಯವಸ್ಥೆಗೆ ತಯಾರಿ ನಡೆಯುತ್ತಿದೆ.

ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ

ಬೆಂಗಳೂರಿನ ವಿದ್ಯಾಪೀಠಕ್ಕೆ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ ಆಗಮಿಸಿದ್ದು, ಅಂತಿಮ ವ್ಯವಸ್ಥೆಯ ಕಾರ್ಯವನ್ನು ಪರಿಶೀಲಿಸುತ್ತಿದ್ದಾರೆ. ಈಗಾಗಲೇ ಮಠದ ಸುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಮಠದ ಒಳಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಇನ್ನು ಶ್ರೀಗಳ ಪಾರ್ಥಿವ ಶರೀರದ ದರ್ಶನಕ್ಕಾಗಿ ಬಸವನಗುಡಿ ನ್ಯಾಷನಲ್ ಕಾಲೇಜು ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

ನ್ಯಾಷನಲ್ ಕಾಲೇಜ್ ಮೈದಾನಕ್ಕೆ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ, ಸಂಸದ ಪಿ.ಸಿ.ಮೋಹನ್, ಮೇಯರ್ ಗೌತಮ್ ಆಗಮಿಸಿ ಸಿದ್ಧತೆ ಪರಿಶೀಲಿಸಿದರು. ಇನ್ನು ಸ್ಥಳದಲ್ಲಿ ಪೊಲೀಸರು ಭದ್ರತೆ ಒದಗಿಸಿದ್ದಾರೆ.

Intro:ಉಡುಪಿಯ ಶ್ರೀಕೃಷ್ಣ ಮಠದ ಹಿರಿಯ ಶ್ರೀಗಳಾದ ವಿಶ್ವೇಶ ತೀರ್ಥ ಪೇಜಾವರ ಶ್ರೀಗಳು ಇಂದು ಬೃಂದಾವನಸ್ಥರಾದ ಹಿನ್ನೆಲೆ. ಶ್ರೀಗಳ ಇಚ್ಛೆಯಂತೆ ಶ್ರೀಗಳ ಬೃಂದಾವನವನ್ನು
ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ಸಂಸ್ಕೃತ ಗುರುಕುಲದಲ್ಲಿ ನೆರವೇರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಉಡುಪಿ ಶ್ರೀಕೃಷ್ಣ ಮಠದ ಶ್ರೀಗಳ 150 ಶಿಷ್ಯರು ಬೆಂಗಳೂರಿನ ಮಠದ ಕಡೆ ಹೊರಟಿದ್ದ ಅಂತಿಮ ವಿಧಿ ವಿಧಾನಕ್ಕೆ ಬೇಕಾದ ಎಲ್ಲ ವ್ಯವಸ್ಥೆಯನ್ನು ವಿದ್ಯಾಪೀಠ ಮಠದಲ್ಲಿ ತಯಾರಿ ಮಾಡಿಕೊಳ್ಳಲಾಗುತ್ತಿದೆ.

Body:ಈಗಾಗಲೇ ಬೆಂಗಳೂರಿನ ವಿದ್ಯಾಪೀಠ ಮಟ್ಟಕ್ಕೆ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್. ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ ಆಗಮಿಸಿದ್ದು ಅಂತಿಮ ವ್ಯವಸ್ಥೆಯ ಕಾರ್ಯವನ್ನು ಪರಿಶೀಲಿಸುತ್ತಿದ್ದಾರೆ. ಅಲ್ಲದೆ ಈಗಾಗಲೇ ಮಠದ ಸುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು. ಮಠದ ಒಳಗೆ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ. ಇನ್ನು ಶ್ರೀಗಳ ಪಾರ್ಥಿವ ಶರೀರವನ್ನು ಬಸವನಗುಡಿ ನ್ಯಾಷನಲ್ ಕಾಲೇಜು ಆವರಣದಲ್ಲಿ ಸಾರ್ವಜನಿಕರಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು ನನ್ನ ಕಾಲೇಜು ಆವರಣದಲ್ಲಿ ಅಂತಿಮ ದರ್ಶನದ ಕೈಗೊಳ್ಳಲಾಗಿದೆ.

ಸತೀಶ ಎಂಬಿ

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.