ETV Bharat / state

ನೂತನ ಸಿಎಂ ಪ್ರಮಾಣವಚನ ಸ್ವೀಕಾರಕ್ಕೆ ರಾಜಭವನದಲ್ಲಿ ಸಿದ್ಧತೆ..!

ಯಡಿಯೂರಪ್ಪನವರ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ವಿಳಂಬ ಮಾಡದೇ ಸೂಕ್ತ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ. ಒಂದೆರಡು ದಿನಗಳಲ್ಲಿ ಹೊಸ ಮಂತ್ರಿಮಂಡಲ ರಚನೆಗೆ ಚಾಲನೆ ದೊರೆಯಲಿದೆ.

ceremony
ರಾಜಭವನದಲ್ಲಿ ಪ್ರಮಾಣವಚನಕ್ಕೆ ಸಿದ್ಧತೆ
author img

By

Published : Jul 27, 2021, 7:18 PM IST

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕುತೂಹಲದ ಬೆಳವಣಿಗೆ ನಡೆಯುತ್ತಲೇ ಇದೆ. ಒಂದೆಡೆ ಮುಖ್ಯಮಂತ್ರಿ ಆಯ್ಕೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದರೆ, ನೂತನ ಸಿಎಂ ಪ್ರಮಾಣವಚನ ಸಮಾರಂಭಕ್ಕೆ ರಾಜಭವನ ಸಿದ್ಧಗೊಂಡಿದೆ.

ನಾಳೆ ಅಥವಾ ನಾಡಿದ್ದು ಬಹುತೇಕವಾಗಿ ಹೊಸ ಮುಖ್ಯಮಂತ್ರಿ ಮತ್ತು ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ರಾಜ್ಯಪಾಲರ ನಿರ್ದೇಶನದ ಪ್ರಕಾರ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ರಾಜಭವನದ ಆವರಣದಲ್ಲಿ ಹೊಸ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಕಲ ಸಿದ್ಧತೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆ ಪ್ರಕಾರ ಗಾಜಿನ ಮನೆಯಲ್ಲಿ ಭರದ ಸಿದ್ಧತೆ ಮಾಡಲಾಗುತ್ತಿದೆ.

ಇದನ್ನೂ ಓದಿ:ಲಿಂಗಾಯತರಿಗೆ ಸಿಎಂ ಸ್ಥಾನ ನೀಡಲು ಹೆಚ್ಚಿದ ಒತ್ತಡ: ಬೊಮ್ಮಾಯಿ ಮೇಲೆ ಬಿಎಸ್‌ವೈ ಒಲವು, ಬೆಲ್ಲದ್‌ಗೆ RSS ಬೆಂಬಲ

ಯಡಿಯೂರಪ್ಪನವರ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಹೈಕಮಾಂಡ್ ವಿಳಂಬ ಮಾಡದೇ ಸೂಕ್ತ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ. ಒಂದೆರಡು ದಿನಗಳಲ್ಲಿ ಹೊಸ ಮಂತ್ರಿಮಂಡಲ ರಚನೆಗೆ ಚಾಲನೆ ದೊರೆಯಲಿದೆ.

ಇದನ್ನೂ ಓದಿ:ಕೇಂದ್ರದಿಂದ ಮೂವರು ವೀಕ್ಷಕರ ತಂಡ ರಾಜ್ಯಕ್ಕೆ ಆಗಮನ: ನಾಳೆ ಮಧ್ಯಾಹ್ನದ ವೇಳೆಗೆ ಮುಂದಿನ ಸಿಎಂ ಘೋಷಣೆ

ಬಿ ಎಸ್​ ಯಡಿಯೂರಪ್ಪ ಅವರು ಜುಲೈ 26, 2021ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ಚುರುಕಿನಿಂದ ಸಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.