ETV Bharat / state

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ದಸರಾ ಉದ್ಘಾಟನೆ: ಸಿಎಂ ಬೊಮ್ಮಾಯಿ ಘೋಷಣೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ದಸರಾ ಉದ್ಘಾಟನೆ

author img

By

Published : Sep 10, 2022, 6:55 PM IST

Updated : Sep 10, 2022, 8:34 PM IST

ಬೆಂಗಳೂರು: ಈ ಬಾರಿ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ನಾಡಹಬ್ಬ ದಸರಾ ಉದ್ಘಾಟಿಸಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ದಸರಾ ಉದ್ಘಾಟನೆ: ಉತ್ತರ ಕರ್ನಾಟಕ ಸಂಘ-ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ಗಾಂಧಿ ಭವನದಲ್ಲಿ ಇಂದು ಸಂಜೆ ಆಯೋಜಿಸಿದ್ದ ದಿ. ಹೆಚ್.ಬಿ. ಗುರುಲಿಂಗಸ್ವಾಮಿ ಹೊಳಿಮಠ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳ ಜೊತೆ ಸಿಎಂ ಮಾತನಾಡಿದರು. ಸೆಪ್ಟೆಂಬರ್ 26 ರಿಂದ ದಸರಾ ಆರಂಭ ಆಗಲಿದೆ. ದಸರಾ ಉದ್ಘಾಟನೆಗೆ ಯಾರನ್ನು ಕರೆಯಬೇಕೆಂದು ಸಭೆ ನಡೆಸಿ ಚರ್ಚೆ ಮಾಡಿದ್ದೆವು. ಸಭೆ ಬಳಿಕ ರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗಿತ್ತು. ನಮ್ಮ ಪತ್ರಕ್ಕೆ ಸಮ್ಮತಿಸಿ ಇಂದು ಪತ್ರ ಬಂದಿದೆ. ಹೀಗಾಗಿ ಈ ಬಾರಿ ರಾಷ್ಟ್ರದ ಪ್ರಥಮ ಪ್ರಜೆ ದ್ರೌಪದಿ ಮರ್ಮು ದಸರಾ ಉದ್ಘಾಟನೆ ಮಾಡಲಿದ್ದಾರೆ ಎಂದು ಹೇಳಿದರು.

ಸಿಎಂ ಬೊಮ್ಮಾಯಿ ಘೋಷಣೆ

ಜನಸ್ಪಂದನೆ ಕಾರ್ಯಕ್ರಮ ಅಭೂತಪೂರ್ವವಾಗಿ ಯಶಸ್ವಿಯಾಗಿದೆ. ದೊಡ್ಡ ಸಂಖ್ಯೆಯಲ್ಲಿ ಜನ ಬಂದಿದ್ದರು. ಮುಂದಿನ ದಿನಗಳಲ್ಲಿ ಇನ್ನೂ ಉತ್ತಮ ಕೆಲಸಗಳನ್ನು ಮಾಡುತ್ತೇವೆ ಎಂದರು.

ಇದನ್ನು ಓದಿ:ಇಂದಿನಿಂದ 14 ಆನೆಗಳ ತಾಲೀಮು ಆರಂಭ!

Last Updated : Sep 10, 2022, 8:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.