ಬೆಂಗಳೂರು: ಇದೇ ತಿಂಗಳು ವಿಶೇಷ ಕಾರ್ಯಕ್ರಮಗಳ ಸಲುವಾಗಿ ರಾಜ್ಯ ರಾಜಧಾನಿ ಬೆಂಗಳೂರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಐಬಿ ಹಾಗೂ ಐಎಸ್ಡಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದಾರೆ. ಜೂ.14ರಂದು ಬೆಂಗಳೂರಿಗೆ ರಾಮನಾಥ್ ಕೋವಿಂದ್ ಹಾಗೂ 21ರಂದು ಯೋಗ ದಿನಾಚರಣೆಗೆ ಮೋದಿ ಆಗಮಿಸುವರು.
ವಿಮಾನ ನಿಲ್ದಾಣ, ರೈಲು, ಬಸ್ ನಿಲ್ದಾಣಗಳಿಂದ ರಾಜಧಾನಿಗೆ ಬಂದು ಹೋಗುವ ಪ್ರಯಾಣಿಕರ ಬಗ್ಗೆ ನಿಗಾ ವಹಿಸಲಾಗುತ್ತಿದೆ. ರಾಜ್ಯ ಆಂತರಿಕಾ ಭದ್ರತಾ ಪಡೆ (ಐಎಸ್ಡಿ), ರಾಜ್ಯ ಗುಪ್ತಚರ ಇಲಾಖೆ ಸೇರಿದಂತೆ ಸ್ಥಳೀಯ ಪೊಲೀಸರು ಮಫ್ತಿಯಲ್ಲಿ ಭದ್ರತೆ ನೋಡಿಕೊಳ್ಳುತ್ತಿದ್ದಾರೆ. ಹೊರದೇಶದಿಂದ ಬಂದಿರುವ ಪ್ರಯಾಣಿಕರ ಚಲನವಲನದ ಮೇಲೂ ನಿಗಾ ವಹಿಸಲಾಗುತ್ತಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿದ್ದಾರೆ.
ಇದನ್ನೂ ಓದಿ: 'ನಾನು ಬಜೆಪಿ ನಾಯಕರನ್ನು ಟೀಕಿಸಿದರೆ ನಮ್ಮ ಪಕ್ಷದವರೇ ನನ್ನನ್ನು ಸಮರ್ಥಿಸಿಕೊಳ್ಳುವುದಿಲ್ಲ'