ಬೆಂಗಳೂರು: ಬೆಂಗಳೂರಿನ ವಸಂತ ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾ ಪಾಲ್ಗೊಂಡು ಕಾಂಗ್ರೆಸ್ ಶಾಸಕರಲ್ಲಿ ಮತಯಾಚಿಸಿದರು.
ರಾಷ್ಟ್ರದ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಶಾಸಕರಿಂದ ಮತಯಾಚಿಸುತ್ತಿರುವ ಅವರು, ಈಗಾಗಲೇ ತಮಿಳುನಾಡಿಗೆ ತೆರಳಿ ನಿನ್ನೆ ಹೈದರಾಬಾದ್ ಮೂಲಕ ಬೆಂಗಳೂರಿಗೆ ಆಗಮಿಸಿದ್ದಾರೆ. ಸಂಜೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯಸಭೆ ಹಾಗೂ ಲೋಕಸಭೆ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಸಿನ್ಹಾರಿಗೆ ತಮ್ಮ ಮತವನ್ನು ನೀಡುವ ಭರವಸೆಯನ್ನು ಕಾಂಗ್ರೆಸ್ ನಾಯಕರು ನೀಡಿದ್ದಾರೆ.
ಸಭೆಗೆ ಗೈರು : ಕಾಂಗ್ರೆಸ್ ಶಾಸಕಾಂಗ ಸಭೆಗೆ ಜಿ.ಪರಮೇಶ್ವರ್, ರಾಮಲಿಂಗಾರೆಡ್ಡಿ, ರಮೇಶ್ ಕುಮಾರ್, ಸತೀಶ್ ಜಾರಕಿಹೊಳಿ, ಆರ್.ವಿ ದೇಶಪಾಂಡೆ, ಹೆಚ್ಕೆ ಪಾಟೀಲ್, ಎಂ.ಬಿ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ರೂಪಾ ಶಶಿಧರ್, ಡಿ.ಕೆ ಸುರೇಶ್, ಜೈರಾಂ ರಮೇಶ್ ಸೇರಿದಂತೆ ಕೆಲ ಮುಖಂಡರು ಗೈರು ಹಾಜರಾಗಿದ್ದಾರೆ.
ಇದನ್ನೂ ಓದಿ: ಬೆಳಗಾವಿ ಯುವಕನ ಕೊಲೆ ಪ್ರಕರಣ: ಐವರ ಬಂಧನ