ಬೆಂಗಳೂರು: ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಜುಲೈ 10ರಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಬಿಜೆಪಿ ಶಾಸಕರು, ಸಂಸದರ ಮತ ಯಾಚನೆ ಮಾಡಲಿದ್ದಾರೆ. ಇದೇ ವೇಳೆ, ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರನ್ನು ಖುದ್ದಾಗಿ ಭೇಟಿ ಮಾಡಿ ಬೆಂಬಲ ಕೇಳುವ ಸಾಧ್ಯತೆ ಇದೆ.
ಜುಲೈ 18ರಂದು ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆಯಲಿದೆ. ಪ್ರತಿಪಕ್ಷಗಳ ಅಭ್ಯರ್ಥಿಯಾದ ಯಶವಂತ ಸಿನ್ಹಾ ರಾಜ್ಯ ಭೇಟಿ ಬೆನ್ನಲ್ಲೆ ಆಡಳಿತಾರೂಢ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಜುಲೈ 10ರಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ.
ಅಂದು ಸಂಜೆ 5 ಗಂಟೆಗೆ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರ ಸಭೆ ಆಯೋಜನೆ ಮಾಡಲಾಗಿದ್ದು, ಈ ಸಭೆಯಲ್ಲಿ ಭಾಗಿಯಾಗಿ ಮುರ್ಮು ಮತ ಯಾಚಿಸಲಿದ್ದಾರೆ. ಇತ್ತ, ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಕೇಳಿರುವ ಅವರು ಬೆಂಗಳೂರಿಗೆ ಆಗಮಿಸಿದಾಗ ಖುದ್ದಾಗಿ ಭೇಟಿಯಾಗುವ ನಿರೀಕ್ಷೆ ಇದೆ.
ಇದನ್ನೂ ಓದಿ: ಪಿಎಸ್ಐ ನೇಮಕಾತಿ ಹಗರಣ.. ಗೃಹ ಸಚಿವರ ವಜಾ, ಬೊಮ್ಮಾಯಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ