ETV Bharat / state

ಫೊರೆನ್ಸಿಕ್ ಲ್ಯಾಬ್ ಹೆಚ್ಚಿಸಿ, ಮಧ್ಯಮ ಹಂತದ ಪೊಲೀಸರಿಗೆ ವಿಶೇಷ ತರಬೇತಿ ನೀಡಿ: ಬಸವರಾಜ ಬೊಮ್ಮಾಯಿ ಸೂಚನೆ

ರಾಜಭವನದಲ್ಲಿ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು 90 ಮಂದಿ ಪೊಲೀಸರಿಗೆ ಪದಕ ಪ್ರದಾನ ಮಾಡಿದರು.

presidents-police-medal-ceremony-held-at-rajabhavan-in-bengaluru
ಅಧಿಕಾರಿಗಳಿಗೆ ರಾಷ್ಟ್ರಪತಿ ಪೊಲೀಸ್​ ಪದಕ ಪ್ರದಾನ
author img

By

Published : Dec 11, 2022, 4:00 PM IST

ಬೆಂಗಳೂರು : ರಾಜಭವನದಲ್ಲಿ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು 90 ಮಂದಿ ಪೊಲೀಸರಿಗೆ ಪದಕ ಪ್ರದಾನ ಮಾಡಿದರು.

ಉತ್ಕೃಷ್ಟ ಅಪರಾಧ ತನಿಖೆಗಾಗಿ ರಾಷ್ಟ್ರಪತಿ ಶಾಘ್ಲನೀಯ ಪದಕವನ್ನು ಪ್ರತಿ ವರ್ಷ ನೀಡಲಾಗುತ್ತದೆ. ಆದರೆ ಕಳೆದ ಐದು ವರ್ಷಗಳಿಂದ ಪದಕ ಪ್ರದಾನ ಸಮಾರಂಭ ವಿವಿಧ ಕಾರಣಗಳಿಂದ ನಡೆದಿರಲಿಲ್ಲ. ಸಾಮಾನ್ಯವಾಗಿ ಗಣರಾಜೋತ್ಸವ ಅಥವಾ ಸ್ವಾತಂತ್ರ್ಯ ದಿನಾಚರಣೆಯ ದಿನ ಪದಕ ಪ್ರದಾನ ಮಾಡಲಾಗುತ್ತಿತ್ತು.‌

90 ಮಂದಿ‌ ಅಧಿಕಾರಿಗಳಿಗೆ ಪದಕ ಪ್ರದಾನ : ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖಾಧಿಕಾರಿ ಎಂ.ಎನ್.ಅನುಚೇತ್, ಶೃಂಗೇರಿಯಲ್ಲಿ ನಡೆದಿದ್ದ ಯುವತಿ ಮೇಲಿನ ಆ್ಯಸಿಡ್ ಕೇಸ್ ಬೇಧಿಸಿದ್ದ ಸುಧೀರ್ ಹೆಗಡೆ, ಜ್ಞಾನಭಾರತಿಯಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಕೇಸ್ ತನಿಖಾಧಿಕಾರಿ ಬಾಲರಾಜ್ ಸೇರಿದಂತೆ‌ ಒಟ್ಟು 90 ಮಂದಿ‌ ಅಧಿಕಾರಿಗಳಿಗೆ ಪದಕ ಪ್ರದಾನ ಮಾಡಲಾಯಿತು.

ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಇತ್ತೀಚಿನ ದಿನಗಳಲ್ಲಿ ತಾಂತ್ರಿಕವಾಗಿ ಅಪರಾಧ ಎಸಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸೈಬರ್ ಕ್ರೈಂ ನಡೆದ ಕೂಡಲೇ ಅಪರಾಧ ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸುವ ಕೆಲಸವಾಗಬೇಕು ಎಂದು ಹೇಳಿದರು.

presidents-police-medal-ceremony-held-at-rajabhavan-in-bengaluru
ಅಧಿಕಾರಿಗಳಿಗೆ ರಾಷ್ಟ್ರಪತಿ ಪೊಲೀಸ್​ ಪದಕ ಪ್ರದಾನ

ಎನ್ ಡಿಎ ಮಾದರಿಯಲ್ಲಿ ವಿಶೇಷ ತರಬೇತಿ : ಇನ್ನು, ಎನ್ ಡಿಎ ಮಾದರಿಯಲ್ಲಿ ಮಧ್ಯಮ ಹಂತದ ಪೊಲೀಸರಿಗೆ ತರಬೇತಿ ನೀಡುವ ವ್ಯವಸ್ಥೆ ಜಾರಿಯಾಗಬೇಕು. ರಾಜ್ಯದಲ್ಲಿ ವಿಧಿ ವಿಜ್ಞಾನ ಪ್ರಯೋಗಾಲಯಗಳ ಸಂಖ್ಯೆಯೂ ಹೆಚ್ಚಿಸಬೇಕು ಎಂದು ಸೂಚನೆ ನೀಡಿದರು. ತಳ ಹಂತ ಪೊಲೀಸರು ಹಾಗೂ ಐಪಿಎಸ್ ಗಳ ತರಬೇತಿ ಚೆನ್ನಾಗಿ ಆಗುತ್ತಿದೆ. ಆದರೆ ಮಧ್ಯಮ ಹಂತದಲ್ಲಿ ಪೊಲೀಸರ ತರಬೇತಿ ಇನ್ನೂ ಪರಿಣಾಮಕಾರಿಯಾಗಿ ಆಗಬೇಕಿದೆ. ಇದಕ್ಕೆ ಪ್ರತ್ಯೇಕ ತರಬೇತಿ ಸಂಸ್ಥೆ, ಪಠ್ಯ ಹಾಗೂ ವಿವಿಧ ಕೋರ್ಸುಗಳ ಮೂಲಕ ಅವರು ದಕ್ಷತೆಯಿಂದ ಕರ್ತವ್ಯ ನಿರ್ವಹಿಸಲು ಸಹಾಯವಾಗುತ್ತದೆ ಎಂದರು.

ಪೊಲೀಸರು ಬಳಸುವ ತಂತ್ರಜ್ಞಾನ ಬಲಪಡಿಸುವ ಕಾರ್ಯಕ್ರಮ : ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಜವಾಬ್ದಾರಿಯಾಗಿದೆ. ತಂತ್ರಜ್ಞಾನದ ಮೂಲಕ ಅಪರಾಧಗಳು ಹೆಚ್ಚಾಗುತ್ತಿವೆ. ಅದೇ ತಂತ್ರಜ್ಞಾನದಲ್ಲಿ ಸಾಕ್ಷಿಗಳನ್ನು ಬಿಟ್ಟು ಹೋಗಿರುತ್ತಾರೆ. ಗೃಹ ಇಲಾಖೆ ಪೊಲೀಸರು ಬಳಸುವ ತಂತ್ರಜ್ಞಾನವನ್ನು ಇನ್ನಷ್ಟು ಬಲಪಡಿಸುವ ಕಾರ್ಯಕ್ರಮವನ್ನು ಮಾಡಬೇಕು. ಅದಕ್ಕೆ ಬೇಕಾದ ಪರಿಣಿತರನ್ನು ಬಳಸಿಕೊಂಡು, ಬೇಕಾದ ಅನುದಾನ ಮುಂದಿನ ಬಜೆಟ್ ನಲ್ಲಿ ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯದ ಪ್ರತಿ ಪ್ರದೇಶದಲ್ಲಿ ಎರಡು ಫೊರೆನ್ಸಿಕ್ ಲ್ಯಾಬ್ : ಪೊಲೀಸ್ ವ್ಯವಸ್ಥೆಯನ್ನು ಬಹಳ ಆಧುನೀಕರಣ ಮಾಡಿದ್ಧೇವೆ. ಫೊರೆನ್ಸಿಕ್ ಲ್ಯಾಬ್ ಆಧುನೀಕರಣ ಮಾಡಲಾಗಿದೆ. ಅಪರಾಧ ಶೋಧನೆಯಲ್ಲಿ ಆಧುನಿಕ ಫೊರೆನ್ಸಿಕ್ ಲ್ಯಾಬ್ ನ ಅವಶ್ಯಕತೆಯಿದ್ದು, ಹುಬ್ಬಳ್ಳಿ ಮತ್ತು ಬಳ್ಳಾರಿಯಲ್ಲಿ ಈ ಪ್ರಯೋಗಾಲಯಗಳನ್ನು ಮಾಡಲಾಗಿದೆ. ರಾಜ್ಯದ ಪ್ರತಿಯೊಂದು ಪ್ರದೇಶದಲ್ಲಿ ಕನಿಷ್ಟ ಎರಡು ಫೊರೆನ್ಸಿಕ್ ಲ್ಯಾಬ್ ಸ್ಥಾಪಿಸಬೇಕು. ಶೀಘ್ರ ಅಪರಾಧ ಪತ್ತೆಗೆ ಈ ಕ್ರಮ ಆಗಲೇಬೇಕು ಎಂದು ಅಭಿಪ್ರಾಯಪಟ್ಟರು.

ಪೊಲೀಸ್ ನೇಮಕಾತಿ ಅಪರಾಧ ತಡೆಯಲು ಕಠಿಣ ಕ್ರಮ : ಪೊಲೀಸ್ ನೇಮಕಾತಿಯಲ್ಲಿ ಆಗುತ್ತಿರುವ ಅಪರಾಧ ತಡೆಯಲು ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲೇಬೇಕು. ಪೊಲಿಸ್ ನೇಮಕಾತಿಯಲ್ಲಿಯೇ ಅಕ್ರಮ ನಡೆದರೆ ಬೇರೆ ಅಪರಾಧ ತಡೆಯುವುದು ಸಾಧ್ಯವಿದೆಯೇ?. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಗಮನಹರಿಸಬೇಕು. ಅದಕ್ಕೆ ಬೇಕಾದ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ದೇಶದಲ್ಲಿಯೇ ಕರ್ನಾಟಕ ಪೊಲೀಸ್ ನಂಬರ್ ಒನ್ : ಪೊಲೀಸ್ ಸೇವೆ ವಿಶಿಷ್ಟ ಸೇವೆಯಾಗಿದ್ದು, ಅವರು ತಮ್ಮ ಬದುಕಿನಲ್ಲಿ ಬಹಳ ರಾಜಿ ಮಾಡಿಕೊಳ್ಳಬೇಕಾಗುತ್ತದೆ. ಹತ್ತು ಹಲವಾರು ಒತ್ತಡಗಳ ನಡುವೆ ಕೆಲಸ ಮಾಡಬೇಕಾಗುತ್ತದೆ. ಎಲ್ಲ ಒತ್ತಡಗಳ ನಡುವೆ ಕರ್ನಾಟಕ ಪೊಲೀಸ್ ಉತ್ತಮ ಕೆಲಸ ಮಾಡುತ್ತಿದೆ. ದೇಶದಲ್ಲಿಯೇ ಕರ್ನಾಟಕ ಪೊಲೀಸ್ ನಂಬರ್ ಒನ್ ಆಗಿದ್ದು, ಶ್ರೇಷ್ಠ ಸೇವೆಯನ್ನು ಸಲ್ಲಿಸುತ್ತಿದೆ ಎಂಬ ಹೆಮ್ಮೆ ಇದೆ.

ಪೊಲೀಸರಿಗೆ ಕಾನೂನು ತಂದೆ ಇದ್ದಂತೆ, ಕರ್ತವ್ಯ ತಾಯಿ ಇದ್ದಂತೆ. ಕರ್ನಾಟಕ ಪೊಲೀಸರು ಯಾವುದೇ ಹೊಸ ತಂತ್ರಜ್ಞಾನದಿಂದ ಹೊರಗುಳಿಯಬಾರದು. ಈ ನಿಟ್ಟಿನಲ್ಲಿ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸುದೀರ್ಘ ಸೇವೆಯಲ್ಲಿ ರಾಷ್ಟ್ರಪತಿಗಳನ್ನು ನಿಮ್ಮನ್ನು ಗುರುತಿಸುವುದು ರಾಜ್ಯಕ್ಕೆ ಹೆಮ್ಮೆಯ ವಿಷಯ. ತಾವು ಉತ್ತಮ ಕೆಲಸ ಮಾಡಿದಾಗ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಗುರುತಿಸುತ್ತವೆ‌. ಪ್ರಶಸ್ತಿ ಪಡೆದವರೆಲ್ಲರೂ ಈ ಪದಕಗಳಿಗೆ ಅರ್ಹರಾಗಿದ್ದು, ಪದಕ ವಿಜೇತರಿಗೆ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ : ಪಕ್ಷ ಒಪ್ಪಿದ್ರೆ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ: ಬಿ ವೈ ವಿಜಯೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.