ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬೆನ್ನಲ್ಲೇ ದೊಡ್ಡಬಳ್ಳಾಪುರದಲ್ಲಿ ಆಯೋಜನೆಗೊಂಡಿದ್ದ ಜನೋತ್ಸವ ಕಾರ್ಯಕ್ರಮ ರದ್ದುಗೊಂಡಿದೆ. ಇದರ ಬೆನ್ನಲ್ಲೇ, ಸಿಎಂ ಆಗಿ ಒಂದು ವರ್ಷ ಹಾಗು ಸರ್ಕಾರಕ್ಕೆ 3 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಳಗ್ಗೆ 10.30ಕ್ಕೆ ಬಸವರಾಜ ಬೊಮ್ಮಾಯಿ ಅವರು ಸುದ್ದಿಗೋಷ್ಠಿ ನಡೆಸಿ, ಬಡ ಜನರು, ಎಸ್ಸಿ-ಎಸ್ಟಿ, ಮಹಿಳೆಯರು ಯುವಕರ ಕಲ್ಯಾಣ ಕಾರ್ಯಕ್ರಮಗಳ ಕುರಿತಂತೆ ಯೋಜನೆಗಳನ್ನು ಪ್ರಕಟಿಸುವರು.
ಬುಧವಾರ ರಾತ್ರಿ 12.25ಕ್ಕೆ ಬೆಂಗಳೂರಿನ ಆರ್.ಟಿ.ನಗರ ನಿವಾಸದಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಸಿಎಂ ಈ ಬಗ್ಗೆ ಮಾಹಿತಿ ನೀಡಿದರು. ಹತ್ಯೆಯಾದ ಪ್ರವೀಣ್ ತಾಯಿ ಹಾಗು ಪತ್ನಿಯ ಆಕ್ರಂದನ, ನೋವನ್ನು ಕಂಡು ನಾವು ಯಾವುದೇ ಕಾರ್ಯಕ್ರಮ ಮಾಡುವುದು ಸೂಕ್ತವಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದೇವೆ. ಹೀಗಾಗಿ ದೊಡ್ಡಬಳ್ಳಾಪುರದ ಕಾರ್ಯಕ್ರಮ ರದ್ದು ಮಾಡಲಾಗಿದೆ. ವಿಧಾನಸೌಧದಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮಗಳೂ ಕೂಡ ರದ್ದು ಮಾಡಿದ್ದೇವೆ ಎಂದು ತಿಳಿಸಿದರು.
ಇದನ್ನೂ ಓದಿ: ಬಿಜೆಪಿ ಸಾಧನಾ ಸಮಾವೇಶ ರದ್ದು, ರಾಜ್ಯದಲ್ಲಿ ಭಯೋತ್ಪಾದಕ ನಿಗ್ರಹ ದಳ ರಚನೆಗೆ ಸರ್ಕಾರ ನಿರ್ಧಾರ