ETV Bharat / state

ಕೋವಿಡ್​-19.. ಚಿಕಿತ್ಸಾ ವೆಚ್ಚದ ಮರುಪಾವತಿ ಕ್ಲೇಮ್​ಗಳಿಗೆ ಸರ್ಕಾರದಿಂದ ದರ ನಿಗದಿ - Government Employees Claims

ತುರ್ತು ಮತ್ತು ಅನಿವಾರ್ಯ ಸನ್ನಿವೇಶದಲ್ಲಿ ಸರ್ಕಾರಿ ನೌಕರರು ಅಥವಾ ಅವರ ಕುಟುಂಬದ ಅವಲಂಬಿತ ಸದಸ್ಯರು ಸಾರ್ವಜನಿಕ ಆರೋಗ್ಯ ಪ್ರಾಧಿಕಾರದ ರೆಫರಲ್‌ ಇಲ್ಲದೆ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದಿರುತ್ತಾರೆ. ಈ ಪ್ಯಾಕೇಜ್‌ ದರದಲ್ಲಿ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರು ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ಚಿಕಿತ್ಸಾ ವೆಚ್ಚ ಮರುಪಾವತಿಸಲು ಸೂಚಿಸಿದೆ..

Price fixed from the government to getting claims
ಸಂಗ್ರಹ ಚಿತ್ರ
author img

By

Published : May 29, 2021, 6:07 PM IST

ಬೆಂಗಳೂರು : ತುರ್ತು ಮತ್ತು ಅನಿವಾರ್ಯ ಪರಿಸ್ಥಿತಿಗಳಲ್ಲಿ ಸರ್ಕಾರದ ಸಕ್ಷಮ ಪ್ರಾಧಿಕಾರದ ಶಿಫಾರಸು ಇಲ್ಲದೆ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದ ಸರ್ಕಾರಿ ನೌಕರರು ಅಥವಾ ಅವರ ಕುಟುಂಬ ಸದಸ್ಯರ ಚಿಕಿತ್ಸಾ ವೆಚ್ಚ ಮರುಪಾವತಿ ಮಾಡಲಾಗುತ್ತದೆ.

ಸಯರ್ಕಾರಿ ನೌಕರರು ಮತ್ತು ಅವರ ಕುಟುಂಬ ಸದಸ್ಯರು ಚಿಕಿತ್ಸಾ ವೆಚ್ಚವನ್ನು ಮರುಪಾವತಿ ಕ್ಲೇಮ್​ಗಳಿಗೆ ಸರ್ಕಾರದಿಂದ ಪ್ಯಾಕೇಜ್ ದರ ಈ ಕೆಳಕಂಡಂತೆ ನಿಗದಿ ಮಾಡಲಾಗಿದೆ.

ಜನರಲ್ ವಾರ್ಡ್​ನಲ್ಲಿ ಚಿಕಿತ್ಸೆ ಪಡೆದರೆ ದಿನಕ್ಕೆ 10 ಸಾವಿರ ರೂ., ಹೆಚ್​ಡಿಯು ವಾರ್ಡ್​ನಲ್ಲಿ ಚಿಕಿತ್ಸೆ ಪಡೆದರೆ ದಿನಕ್ಕೆ 12,000 ರೂ., ವೆಂಟಿಲೇಟರ್ ರಹಿತ ಐಸೋಲೇಷನ್ ಐಸಿಯುನಲ್ಲಿ ಚಿಕಿತ್ಸೆ ಪಡೆದರೆ ದಿನಕ್ಕೆ 15,000 ರೂ., ವೆಂಟಿಲೇಟರ್ ಸಹಿತ ಐಸೋಲೇಶನ್ ಐಸಿಯುನಲ್ಲಿ ದಿನಕ್ಕೆ 25 ಸಾವಿರ ರೂಪಾಯಿ ನಿಗದಿ ಮಾಡಲಾಗಿದೆ.

ಪಿಪಿಕೆ ಕಿಟ್ ಸೇರಿ ಇತರೆ ಪರಿಕರ ಒಳಗೊಂಡಂತೆ ಮರು ಪಾವತಿ ಕ್ಲೇಮ್​ಗಳಿಗೆ ಸರ್ಕಾರದಿಂದ ದರ ನಿಗದಿ ಮಾಡಲಾಗಿದೆ. ಆಸ್ಪತ್ರೆಯಲ್ಲಿನ ಚಿಕಿತ್ಸಾ ದರ ಪ್ಯಾಕೇಜ್ ದರಕ್ಕಿಂತ ಕಡಿಮೆ ಇದ್ದರೆ ಕಡಿಮೆ ಮೊತ್ತ ಮರು ಪಾವತಿಸಲಾಗುವುದು. ಚಿಕಿತ್ಸೆಗೆ ವೈದ್ಯಕೀಯ ಮುಂಗಡ ಪಾವತಿಸಲು ಅವಕಾಶ ಇರುವುದಿಲ್ಲ ಎಂದು ಹೇಳಲಾಗಿದೆ.

ತುರ್ತು ಮತ್ತು ಅನಿವಾರ್ಯ ಸನ್ನಿವೇಶದಲ್ಲಿ ಸರ್ಕಾರಿ ನೌಕರರು ಅಥವಾ ಅವರ ಕುಟುಂಬದ ಅವಲಂಬಿತ ಸದಸ್ಯರು ಸಾರ್ವಜನಿಕ ಆರೋಗ್ಯ ಪ್ರಾಧಿಕಾರದ ರೆಫರಲ್‌ ಇಲ್ಲದೆ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದಿರುತ್ತಾರೆ. ಈ ಪ್ಯಾಕೇಜ್‌ ದರದಲ್ಲಿ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರು ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ಚಿಕಿತ್ಸಾ ವೆಚ್ಚ ಮರುಪಾವತಿಸಲು ಸೂಚಿಸಿದೆ.

ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು, ನಿಯಮ 1963 ರ ಅನ್ವಯ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರು ಸರ್ಕಾರಿ ಆಸ್ಪತ್ರೆ ಹಾಗೂ ಸರ್ಕಾರದ ಮಾನ್ಯತೆ ಹೊಂದಿದ ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ಚಿಕಿತ್ಸೆಯ ವೆಚ್ಚದ ಮರುಪಾವತಿಯನ್ನು ಸಿ.ಜಿ.ಹೆಚ್.ಎಸ್. ದರಪಟ್ಟಿಯನ್ನಯ ಆಯಾ ಇಲಾಖಾ ಹಂತದಲ್ಲಿ ಕ್ರಮ ತೆಗೆದುಕೊಳ್ಳಲು/ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದೆ.

ಕೆಲ ತುರ್ತು ಸಂದರ್ಭಗಳಲ್ಲಿ ಸರ್ಕಾರದ ಮಾನ್ಯತೆ ಹೊಂದಿಲ್ಲದ ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ಉಲ್ಲೇಖ(3)ರ ಅನುಸಾರ ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಇವರಿಂದ ಅರ್ಹತಾ ಮೊತ್ತದ ಅಭಿಪ್ರಾಯವನ್ನು ಪಡೆದು ಮರುಪಾವತಿಸಲು ಅವಕಾಶವಿರುತ್ತದೆ.

ಇದಲ್ಲದೆ, ಜ್ಯೋತಿ ಸಂಜೀವಿನಿ ಯೋಜನೆಯಡಿಯಲ್ಲಿ ಗುರುತಿಸಿರುವ 7 ಮಾರಣಾಂತಿಕ ಕಾಯಿಲೆಗಳಿಗೆ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ನಗದುರಹಿತ ಚಿಕಿತ್ಸಾ ಸೌಲಭ್ಯವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ತುರ್ತು ಸಂದರ್ಭದಲ್ಲಿ ಹಾಗೂ ಅನಿವಾರ್ಯ ಸನ್ನಿವೇಶದಲ್ಲಿ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರು Public Health Authority ಶಿಫಾರಸ್ಸು (Referral) ಇಲ್ಲದ ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ಚಿಕಿತ್ಸಾ ವೆಚ್ಚದ ಮರುಪಾವತಿಯನ್ನು ಪರಿಗಣಿಸಲು ಸರ್ಕಾರವು ತೀರ್ಮಾನಿಸಿದೆ.

ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ಆರಂಭದಲ್ಲಿ ಕೋವಿಡ್ ಚಿಕಿತ್ಸೆಗಾಗಿ ದಾಖಲಾಗಿದ್ದು ಅಥವಾ ಬೇರೆ ಇತರೆ ಕಾರಣಕ್ಕಾಗಿ ದಾಖಲಾಗಿ ತರುವಾಯ ಕೋವಿಡ್ ಕಾಯಿಲೆಗೆ ಒಳಗಾದ ಸಂದರ್ಭಗಳಲ್ಲಿ ಅನಿರೀಕ್ಷಿತ ಕ್ಲಿಷ್ಟಕರ ಚಿಕಿತ್ಸಾ ಸಂದರ್ಭಗಳು/ಶಸ್ತ್ರಚಿಕಿತ್ಸೆಗಳು/ಗರ್ಭಿಣಿಯರಿಗೆ ಸಂಬಂಧಿತ ಹಾಗೂ ಇನ್ನಿತರ ಅಸ್ಮ ಪರಿಸ್ಥಿತಿಗಳು ಮುಂತಾದ ಸಂದರ್ಭಗಳಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಅನ್ವಯವಾಗುವ ನಿಯಮಗಳಂತೆ ಮರುಪಾವತಿಸಬಹುದಾದ ವೈದ್ಯಕೀಯ ವೆಚ್ಚದ ಅರ್ಹತಾದಾಯಕ ಮೊತ್ತವನ್ನು SAST ಸಂಸ್ಥೆಯಿಂದ ಪಡೆದು ಮರುಪಾವತಿಸಬೇಕಾಗುತ್ತದೆ.

ಇನ್ನು ಸರ್ಕಾರಿ ನೌಕರರು ಮಾನ್ಯತೆ ಹೊಂದಿರದ ರಾಜ್ಯದ ಹಾಗೂ ಹೊರರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ವೈದ್ಯಕೀಯ ವೆಚ್ಚವನ್ನು ಮರುಪಾವತಿಸಲು ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳಿಗೆ ಅಧಿಕಾರ ಪ್ರತ್ಯಾಯೋಜಿಸಿರುವ ಅರ್ಹತಾ ಮೊತ್ತದ ಮಿತಿಯನ್ನು ರೂ. 2.00 ಲಕ್ಷ ರೂ.ಗಳಿಂದ 3.00 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ.

ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು, 1963ರ ನಿಯಮ 8 ಮತ್ತು ನಿಯಮ 14(3)ಕ್ಕೆ ಸಂಬಂಧಪಟ್ಟಂತೆ, ಸೂಚಿಸಿರುವ ಸರ್ಕಾರದ ಮಾನ್ಯತೆ ಹೊಂದಿರುವ ಆಸ್ಪತ್ರೆಗಳನ್ನು ಹೊರತುಪಡಿಸಿ, ಮಾನ್ಯತೆ ಹೊಂದಿರದ ರಾಜ್ಯದಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ನೌಕರರು ಪಡೆಯುವ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಲಾಗುತ್ತೆ.

ಅರ್ಹತಾ ಮೊತ್ತ ಒಂದು ಲಕ್ಷ ರೂ.ವರೆಗಿನ ವೈದ್ಯಕೀಯ ವೆಚ್ಚವನ್ನು ಮರುಪಾವತಿಸಲು ಸರ್ಕಾರದ ಆದೇಶದಲ್ಲಿ ಸಂಬಂಧಪಟ್ಟ ಆಡಳಿತ ಇಲಾಖೆಯ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಗಳಿಗೆ ಅಧಿಕಾರವನ್ನು ಪ್ರತ್ಯಾಯೋಜಿಸಲಾಗಿರುತ್ತದೆ. ಸರ್ಕಾರದ ಆದೇಶಗಳಲ್ಲಿ, ಈ ಆರ್ಥಿಕ ಅಧಿಕಾರದ ಮಿತಿಯನ್ನು 2.00 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿರುತ್ತದೆ. ಹಾಗೂ ಈ ಅಧಿಕಾರ ಪ್ರತ್ಯಾಯೋಜನೆಯನ್ನು ಹೊರ ರಾಜ್ಯದಲ್ಲಿರುವ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಪ್ರಕರಣಗಳಿಗೂ ವಿಸ್ತರಿಸಲಾಗಿದೆ.

ಪ್ರಸ್ತುತ, ವೈದ್ಯಕೀಯ ಚಿಕಿತ್ಸಾ ವೆಚ್ಚಗಳು ದುಬಾರಿಯಾಗಿದ್ದು, ಮಾನ್ಯತೆ ಪಡೆಯದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡದ ಅರ್ಹತಾ ಮೊತ್ತ 2.00 ಲಕ್ಷ ರೂ.ಗಳನ್ನು ಮೀರಿದ ಮರುಪಾವತಿ ಪ್ರಕರಣಗಳು ನಿಯಮ ಸಡಿಲಿಕೆಗಾಗಿ ಆಡಳಿತ ಇಲಾಖೆಗಳ ಮೂಲಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಬರುತ್ತಿರುವ ಪ್ರಸ್ತಾವನೆಗಳು ಹೆಚ್ಚಾಗಿವೆ.

ಇದರಿಂದಾಗಿ ವೈದ್ಯಕೀಯ ವೆಚ್ಚದ ಮರುಪಾವತಿಯು ವಿಳಂಬವಾಗಿ ಸರ್ಕಾರಿ ನೌಕರರಿಗೆ ಅನಾನುಕೂಲವಾಗುತ್ತಿರುವ ಹಿನ್ನೆಲೆಯಲ್ಲಿ, ಆಡಳಿತ ಇಲಾಖೆಗಳ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ಪ್ರತ್ಯಾಯೋಜಿಸಿರುವ 2,00 ಲಕ್ಷ ರೂ.ಗಳವರೆಗಿನ ಅಧಿಕಾರ ಮಿತಿಯನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ.

ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್.ಪಿ.ಎಸ್)ಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಸರ್ಕಾರವು ಘೋಷಿಸಿರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಎಲ್ಲಾ ರೀತಿಯ ಶಸ್ತ್ರಚಿಕಿತ್ಸೆಗಳಿಗೆ ನಗದುರಹಿತ ಚಿಕಿತ್ಸೆ ಸೌಲಭ್ಯ ಒದಗಿಸುವುದು ಸೇರಿದಂತೆ ಸರ್ಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಶೀಘ್ರವಾಗಿ ಅನುಷ್ಟಾನಗೊಳಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರು ಸರ್ಕಾರವನ್ನು ಒತ್ತಾಯಿಸಿದ್ದರು.

ಕಳೆದ ವರ್ಷ ನಡೆದ ರಾಜ್ಯ ಮಟ್ಟದ ಜಂಟಿ ಸಮಾಲೋಚನಾ ಸಮಿತಿಯ ಸಭೆಯಲ್ಲಿ ನೌಕರರ ದಶಕಗಳ ಬೇಡಿಕೆಗಳನ್ನು ಅನುಷ್ಟಾನಗೊಳಿಸುವಲ್ಲಿ ಅನುಸರಿಸುತ್ತಿರುವ ಅನಗತ್ಯ ವಿಳಂಬದಿಂದಾಗಿ ನೌಕರರು ಎದುರಿಸುತ್ತಿರುವ ಸಂಕಷ್ಟಗಳನ್ನು ಮುಂದೆ ಮಂಡಿಸಿದ್ದರು. ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಬೇಡಿಕೆಗಳು ಈಡೇರುವ ವಿಶ್ವಾಸ ವ್ಯಕ್ತಪಡಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.