ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಆನ್ಲೈನ್ ಮೂಲಕ ಶಿಕ್ಷಣ ನೀಡಲಾಗುತ್ತಿದೆ. ಆನ್ಲೈನ್ ಶಿಕ್ಷಣ ಶುರುವಾದ ಹಿನ್ನೆಲೆಯಲ್ಲಿ ಕಂಪ್ಯೂಟರ್ ಹಾಗೂ ಲ್ಯಾಪ್ಟಾಪ್ಗಳ ಬೆಲೆ ಹೆಚ್ಚಳವಾಗಿದೆ.
50,000 ರೂ. ಬೆಲೆಯ ಲ್ಯಾಪ್ಟಾಪ್ಗೆ ಮಾರುಕಟ್ಟೆಯಲ್ಲಿ ಸದ್ಯದ ಬೆಲೆ 75,000 ರೂ. ಸದ್ಯ ದೇಶದಲ್ಲಿ ಉತ್ಪಾದನೆ ಕ್ಷೀಣಿಸಿದ ಹಿನ್ನೆಲೆಯಲ್ಲಿ ಬೆಲೆ ಹೆಚ್ಚಳ ಆಗಿದೆ ಎಂದು ಪೀಣ್ಯ ಕೈಗಾರಿಕಾ ಸಂಘದ ಕಾರ್ಯದರ್ಶಿ ವಿಜಯ್ ಮಾಕಲ್ ಈಟಿವಿ ಭಾರತ್ಗೆ ತಿಳಿಸಿದ್ದಾರೆ.
ಇನ್ನು ಬಡ ಸರ್ಕಾರಿ ಶಾಲಾ ಮಕ್ಕಳಿಗೆ ಇಷ್ಟೊಂದು ಹಣ ಖರ್ಚು ಮಾಡಿ ಲ್ಯಾಪ್ಟಾಪ್ ಖರೀದಿ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸರ್ಕಾರ ಇದರ ಹೊಣೆಗಾರಿಕೆ ತೆಗೆದುಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ಮತ್ತೆ ಲಾಕ್ಡೌನ್ ಹೇರಿಕೆ ಮಾಡಿದರೆ ಚೇತರಿಕೆ ಕಾಣುತ್ತಿದ್ದ ಕಂಪ್ಯೂಟರ್ ಉಪಕರಣ ಸಂಬಂಧಿತ ಕೈಗಾರಿಕೆಗಳು ಕಾರ್ಯವನ್ನು ನಿಲ್ಲಿಸುತ್ತದೆ. ಇದರಿಂದ ಮತ್ತಷ್ಟು ಬೆಲೆ ಏರಿಕೆ ಆಗಲಿದೆ. ಲ್ಯಾಪ್ಟಾಪ್ ಕೇವಲ ಶಿಕ್ಷಣಕ್ಕೆ ಮಾತ್ರವಲ್ಲದೇ, ನೌಕರರು ಸಹ ಉಪಯೋಗಿಸುತ್ತಿದ್ದಾರೆ. ಪ್ರಸ್ತುತ ಕೊಂಚ ಬೇಡಿಕೆ ಹೆಚ್ಚಾಗಿದೆ. ಉತ್ಪನ್ನ ಕಡಿಮೆಯಾಗಿದೆ. ಇದರಿಂದ ದಿನಕ್ಕೆ ಕೋಟ್ಯಂತರ ರೂ. ವಹಿವಾಟು ನಡೆಸುತ್ತಿದ್ದ ಉದ್ಯಮಿಗಳಿಗೆ ಪೆಟ್ಟುಬಿದ್ದಿದೆ ಎಂದರು.