ETV Bharat / state

ಸೇವಾ ಭದ್ರತೆ, ಕನಿಷ್ಠ ವೇತನ ನಿಗದಿಗೆ ಆಗ್ರಹ: ಫ್ರೀಡಂ ಪಾರ್ಕ್​ನಲ್ಲಿ ಪ್ರಾಥಮಿಕ - ಪ್ರೌಢಶಾಲಾ ಅತಿಥಿ ಶಿಕ್ಷಕರಿಂದ ಪ್ರತಿಭಟನೆ

ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರಾಥಮಿಕ - ಪ್ರೌಢಶಾಲಾ ಅತಿಥಿ ಶಿಕ್ಷಕರು ಸೇವಾ ಭದ್ರತೆ, ಕನಿಷ್ಠ ವೇತನ ನಿಗದಿ ಸೇರಿ ಇತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ.

ಫ್ರೀಡಂ ಪಾರ್ಕ್​ನಲ್ಲಿ ಪ್ರಾಥಮಿಕ-ಪ್ರೌಢಶಾಲಾ ಅತಿಥಿ ಶಿಕ್ಷಕರಿಂದ ಪ್ರತಿಭಟನೆ

author img

By

Published : Jul 20, 2023, 10:01 PM IST

ಫ್ರೀಡಂ ಪಾರ್ಕ್​ನಲ್ಲಿ ಪ್ರಾಥಮಿಕ-ಪ್ರೌಢಶಾಲಾ ಅತಿಥಿ ಶಿಕ್ಷಕರಿಂದ ಪ್ರತಿಭಟನೆ

ಬೆಂಗಳೂರು : ಸೇವಾ ಭದ್ರತೆ, ಕನಿಷ್ಠ ವೇತನ ನಿಗದಿ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಸರ್ಕಾರ ತಮಗೆ ಬೇಕಾದ ಸಂದರ್ಭದಲ್ಲಿ ನೇಮಕ ಮಾಡಿಕೊಂಡು ಆರ್ಥಿಕ ವರ್ಷ ಮುಗಿಯುತ್ತಿದ್ದಂತೆ ಕರ್ತವ್ಯದಿಂದ ಬಿಡುಗಡೆ ಮಾಡುತ್ತಿದೆ. ಕೇವಲ 8-10 ತಿಂಗಳ ಬಳಿಕ ಪುನಃ ಬೇರೆಡೆ ಕೆಲಸಕ್ಕಾಗಿ ಅಲೆಯಬೇಕಾದ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಸರ್ಕಾರ ಈ ಧೋರಣೆ ಕೈಬಿಡಬೇಕು ಎಂದು ಆಗ್ರಹಿಸಿದರು.

ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತ ಎಚ್. ಎಸ್ ಮಾತನಾಡಿ, ರಾಜ್ಯದಲ್ಲಿ 33,159 ಅತಿಥಿ ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ. ಸತತ 8-10 ವರ್ಷಗಳಿಂದ ಇದೇ ವೃತ್ತಿಯಲ್ಲಿದ್ದವರಿಗೂ ಸೇವಾ ಭದ್ರತೆ ಇಲ್ಲವಾಗಿದೆ. ಕೇವಲ 10 ರಿಂದ 11 ಸಾವಿರ ವೇತನಕ್ಕಾಗಿ ದುಡಿಯುತ್ತಿದ್ದು, ಜೀವನ ನಿರ್ವಹಣೆ ಕಷ್ಟವಾಗಿದೆ ಎಂದರು.

ನೇಮಕಾತಿಯಲ್ಲಿ ಶೇ.5 ಕೃಪಾಂಕ ನೀಡಬೇಕು: ಪ್ರತಿವರ್ಷ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಾಗ ಸೇವಾ ಹಿರಿತನ ಪರಿಗಣಿಸಬೇಕು. ಜೊತೆಗೆ ಮೆರಿಟ್ ಪದ್ಧತಿ ತೆಗೆದುಹಾಕಬೇಕು. ಎಲ್ಲ ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ನೀಡಬೇಕು. ದೆಹಲಿ, ಉತ್ತರಪ್ರದೇಶದಂತೆ ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಬೇಕು. ಒಮ್ಮೆ ನೇಮಕ ಮಾಡಿಕೊಂಡರೆ ಬೇಸಿಗೆ ರಜೆ ಸೇರಿ 12 ತಿಂಗಳ ವೇತನ ನೀಡಬೇಕು. ಹಾಗೂ ನೇಮಕಾತಿಯಲ್ಲಿ ಶೇ.5 ಕೃಪಾಂಕ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯ ಶಾಲೆಗಳಲ್ಲಿ ಟಿಇಟಿ ಅರ್ಹತೆ ಆಧರಿಸಿ ಹಲವು ಹಲವರಿಗೆ ಗೇಟ್​ಪಾಸ್: ಶಿಕ್ಷಕರ ಅಸಮಾಧಾನ

ಶಿಕ್ಷಕರ ಪರ ಸದನದಲ್ಲಿ ಧ್ವನಿ ಎತ್ತುವುದಾಗಿ ಭರವಸೆ: ಧರಣಿ ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯರಾದ ಕೆ. ಟಿ ಶ್ರೀಕಂಠೇಗೌಡ, ಭೋಜೆಗೌಡ್ರು, ಅರುಣ ಶಹಾಪುರ, ಶಶಿಲ್ ನಮೋಸಿ, ಎ. ವೈ ನಾರಾಯಣಸ್ವಾಮಿ, ಮರಿಸಿದ್ಧೇಗೌಡ, ಹನುಮಂತ ನಿರಾಣಿ, ಆರ್. ದೇವೇಗೌಡ, ಎಸ್.ವಿ ಸಂಕನೂರು ಸ್ಥಳಕ್ಕೆ ಆಗಮಿಸಿ ಶಿಕ್ಷಕರ ಪರ ಸದನದಲ್ಲಿ ಧ್ವನಿ ಎತ್ತುವುದಾಗಿ ಭರವಸೆ ನೀಡಿದ್ದಾರೆ. ಈ ವೇಳೆ ಚಿತ್ರಲೇಖ ಕೆ. ತಿಪ್ಪಣ್ಣ ಹತ್ತಿಗುಡೂರು, ಸುಬ್ರಹ್ಮಣ್ಯ ಸೇರಿ ಇತರರಿದ್ದರು.

ಸರ್ಕಾರದ ವಿರುದ್ಧ ಪ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆಗಿಳಿದ ಶಿಕ್ಷಕರು: ಇನ್ನೊಂದೆಡೆ ಹೊಸ ಸರ್ಕಾರದ ಜಂಟಿ ಹಾಗೂ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ ಮತ್ತೊಂದೆಡೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫ್ರೀಡಂ ಪಾರ್ಕ್​ನಲ್ಲಿ (ಜುಲೈ 3-2023) ಪ್ರತಿಭಟನೆಗಳ ಕಾವು ಜೋರಾಗಿತ್ತು. ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ ಆದೇಶ ಪ್ರತಿ ನೀಡದ ಸರ್ಕಾರದ ವಿರುದ್ಧ ಅಭ್ಯರ್ಥಿಗಳು ಪ್ರತಿಭಟನೆ ಆರಂಭಿಸಿದ್ದರು. ಮತ್ತೊಂದೆಡೆ ರಾಜ್ಯದಲ್ಲಿ ಮಳೆಯ ಅಭಾವವಾಗಿರುವುದರಿಂದ ರಾಜ್ಯದಲ್ಲಿ ಬರಗಾಲ ಎಂದು ಘೋಷಿಸುವ ಮೂಲಕ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿದ್ದವು.

ಇದನ್ನೂ ಓದಿ: ರಾಜ್ಯ ಸರ್ಕಾರದ ವಿರುದ್ಧ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಗಿಳಿದ ಶಿಕ್ಷಕರು, ರೈತರು: ಬೇಡಿಕೆಗಳ ಈಡೇರಿಕೆಗೆ ಒತ್ತಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.