ಬೆಂಗಳೂರು: ಕೋವಿಡ್ ಲಾಕ್ಡೌನ್ ನಂತರ ಮೊದಲ ಬಾರಿಗೆ ಪ್ರಾಥಮಿಕ ಶಾಲೆಗಳು ಇಂದಿನಿಂದ ಪುನಾರಂಭಗೊಳ್ಳುತ್ತಿವೆ. 6 ನೇ ತರಗತಿಯಿಂದ 8 ನೇ ತರಗತಿವರೆಗಿನ ಎರಡನೇ ಹಂತದಲ್ಲಿ ಶಾಲೆಗಳಿಗೆ ಆಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಭ ಕೋರುವುದರೊಂದಿಗೆ ಎಚ್ಚರ ತಪ್ಪದಂತೆ ಸಲಹೆಯನ್ನೂ ಸಹ ನೀಡಿದ್ದಾರೆ.
-
ನಾಳೆಯಿಂದ 6 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಾಲೆ ಆರಂಭವಾಗುತ್ತಿದೆ. ಪೋಷಕರು ಹಾಗೂ ವಿದ್ಯಾರ್ಥಿಗಳು ಮುನ್ನೆಚ್ಚರಿಕೆ ವಹಿಸಿ ಸರ್ಕಾರದೊಂದಿಗೆ ಸಹಕರಿಸಿ.
— BJP Karnataka (@BJP4Karnataka) September 5, 2021 " class="align-text-top noRightClick twitterSection" data="
- ಶ್ರೀ @BSBommai#ಮರಳಿಶಾಲೆಗೆ pic.twitter.com/ZuOfurwqCT
">ನಾಳೆಯಿಂದ 6 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಾಲೆ ಆರಂಭವಾಗುತ್ತಿದೆ. ಪೋಷಕರು ಹಾಗೂ ವಿದ್ಯಾರ್ಥಿಗಳು ಮುನ್ನೆಚ್ಚರಿಕೆ ವಹಿಸಿ ಸರ್ಕಾರದೊಂದಿಗೆ ಸಹಕರಿಸಿ.
— BJP Karnataka (@BJP4Karnataka) September 5, 2021
- ಶ್ರೀ @BSBommai#ಮರಳಿಶಾಲೆಗೆ pic.twitter.com/ZuOfurwqCTನಾಳೆಯಿಂದ 6 ರಿಂದ 8 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶಾಲೆ ಆರಂಭವಾಗುತ್ತಿದೆ. ಪೋಷಕರು ಹಾಗೂ ವಿದ್ಯಾರ್ಥಿಗಳು ಮುನ್ನೆಚ್ಚರಿಕೆ ವಹಿಸಿ ಸರ್ಕಾರದೊಂದಿಗೆ ಸಹಕರಿಸಿ.
— BJP Karnataka (@BJP4Karnataka) September 5, 2021
- ಶ್ರೀ @BSBommai#ಮರಳಿಶಾಲೆಗೆ pic.twitter.com/ZuOfurwqCT
ರಾಜ್ಯಾದ್ಯಂತ ಇಂದಿನಿಂದ 6 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಪುನಾರಂಭವಾಗಿದ್ದು, ಸರ್ಕಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮಕ್ಕಳು, ಶಿಕ್ಷಕರು ಹಾಗೂ ಪೋಷಕರು, ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸಿ, ಆತಂಕ ಪಡದೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗಷ್ಟೇ 9ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ತರಗತಿಗಳು ಪ್ರಾರಂಭವಾಗಿದ್ದು, ಖುದ್ದಾಗಿ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಸಿಎಂ ಬೊಮ್ಮಾಯಿ, ಶಿಕ್ಷಣ ಇಲಾಖೆ ಮಾಡಿಕೊಂಡಿದ್ದ ಸಿದ್ಧತೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಶಾಲೆಗಳ ಆರಂಭದ ಕುರಿತು ವಿದ್ಯಾರ್ಥಿಗಳಿಂದ ಅಭಿಪ್ರಾಯ ಪಡೆದಿದ್ದರು. ವಿದ್ಯಾರ್ಥಿಗಳ ಫೀಡ್ಬ್ಯಾಕ್ ಗೆ ಸಿಎಂ ಸಂತಸ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: ಶಾಲೆಗಳು ಪುನಾರಂಭ: ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ ಶಿಕ್ಷಣ ಸಚಿವ
ಅದರ ಬೆನ್ನಲ್ಲೇ ಇದೀಗ 6 ನೇ ತರಗತಿಯಿಂದ 8 ನೇ ತರಗತಿವರೆಗಿನ ಶಾಲೆಗಳು ಆರಂಭಗೊಂಡಿದ್ದು, ವಿದ್ಯಾರ್ಥಿಗಳಿಗೆ ಸಿಎಂ ಆಲ್ ದಿ ಬೆಸ್ಟ್ ಹೇಳಿ ಶಾಲೆಗಳಿಗೆ ಸ್ವಾಗತಿಸಿದ್ದಾರೆ.