ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದು (ಬುಧವಾರ) ಕರಾವಳಿ, ಕಿತ್ತೂರು ಕರ್ನಾಟಕದಲ್ಲಿ ನಡೆಯುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಬೇಟೆ ನಡೆಸುವರು.
ಎಲ್ಲೆಲ್ಲಿ?: ಬೆಳಗ್ಗೆ 11 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ. ಇದಾದ ನಂತರ ಉತ್ತರ ಕನ್ನಡ ಜಿಲ್ಲೆಗೆ ತೆರಳಿ ಅಂಕೋಲಾದಲ್ಲಿ ಮಧ್ಯಾಹ್ನ 1.15 ಗಂಟೆಗೆ ಜರುಗಲಿರುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು. ಸಂಜೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ 3.45ಕ್ಕೆ ನಡೆಯಲಿರುವ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
-
PM Shri @narendramodi's Public Programs in Karnataka on 3rd May 2023.
— BJP (@BJP4India) May 2, 2023 " class="align-text-top noRightClick twitterSection" data="
Watch live:
📺https://t.co/ZFyEVlesOi
📺https://t.co/vpP0MIos7C
📺https://t.co/lcXkSnOnsV
📺https://t.co/4XQ2GzrhRl pic.twitter.com/WddUviQgjq
">PM Shri @narendramodi's Public Programs in Karnataka on 3rd May 2023.
— BJP (@BJP4India) May 2, 2023
Watch live:
📺https://t.co/ZFyEVlesOi
📺https://t.co/vpP0MIos7C
📺https://t.co/lcXkSnOnsV
📺https://t.co/4XQ2GzrhRl pic.twitter.com/WddUviQgjqPM Shri @narendramodi's Public Programs in Karnataka on 3rd May 2023.
— BJP (@BJP4India) May 2, 2023
Watch live:
📺https://t.co/ZFyEVlesOi
📺https://t.co/vpP0MIos7C
📺https://t.co/lcXkSnOnsV
📺https://t.co/4XQ2GzrhRl pic.twitter.com/WddUviQgjq
ಮೇ 6ರಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಗೋವಿಂದರಾಜನಗರ, ವಿಜಯನಗರ, ಚಿಕ್ಕಪೇಟೆ, ಬಸನಗುಡಿ, ಪದ್ಮನಾಭನಗರ, ಬಿಟಿಎಂ ಲೇಔಟ್, ಜಯನಗರ, ಬೊಮ್ಮನಹಳ್ಳಿ ಕ್ಷೇತ್ರಗಳ ಕಾರ್ಯಕರ್ತರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಇದಾದ ಬಳಿಕ ಮೇ 7ರಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸುವರು.
ಹಳೇ ಮೈಸೂರು ಭಾಗದಲ್ಲಿ ಪ್ರಚಾರ: ಜೆಡಿಎಸ್ ಪ್ರಾಬಲ್ಯವಿರುವ ಈ ಭಾಗದ ಹಲವು ಜಿಲ್ಲೆಗಳಲ್ಲಿ ಮೊದಲ ಹಂತದ ಪ್ರಚಾರದಲ್ಲಿ ಮೋದಿ ಈಗಾಗಲೇ ಭರ್ಜರಿ ಕ್ಯಾಂಪೇನ್ ಮಾಡಿದ್ದಾರೆ. ಏಪ್ರಿಲ್ 29 ಮತ್ತು 30 ರಂದು ಮೈಸೂರು, ಚನ್ನಪಟ್ಟಣ, ಹಾಸನ, ಕೋಲಾರ, ಬೆಂಗಳೂರಿನಲ್ಲಿ ರೋಡ್ ಶೋ ನಡೆಸಿ ಜನರನ್ನು ಆಕರ್ಷಿಸಿದ್ದರು.
ಏಪ್ರಿಲ್ 29 ರಂದು ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಬೆಂಗಳೂರಿನಲ್ಲಿ ಪ್ರಚಾರ ನಡಸಿದ್ದ ಮೋದಿ, ಏಪ್ರಿಲ್ 30 ರಂದು ಹಳೆ ಮೈಸೂರು ಭಾಗದ ಕೆಲವೆಡೆ ಅದ್ಧೂರಿಯಾಗಿ ಮತಯಾಚಿಸಿದ್ದರು. ಸಿದ್ದರಾಮಯ್ಯ ಸ್ಪರ್ಧಿಸುವ ವಿಚಾರವಾಗಿ ಪ್ರಚಾರಕ್ಕೆ ಬಂದಿದ್ದ ಕೋಲಾರ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಕ್ಷೇತ್ರ ಚನ್ನಪಟ್ಟಣ, ಪಕ್ಷದ ಹಿಡಿತವಿರುವ ಹಾಸನ ಮತ್ತು ಮೈಸೂರಿನಲ್ಲಿ ಪ್ರಧಾನಿ ಈಗಾಗಲೇ ಭರ್ಜರಿ ರೋಡ್ ಶೋ ನಡೆಸಿದ್ದಾರೆ.
ಮೇ 2ರಂದು ಚಿತ್ರದುರ್ಗ, ವಿಜಯನಗರ ಜಿಲ್ಲಾ ಕೇಂದ್ರವಾದ ಹೊಸಪೇಟೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಂಡಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿಯಲ್ಲಿ ಮಂಗಳವಾರ ಸಂಜೆ ಬೃಹತ್ ರೋಡ್ ಶೋ ನಡೆಸಿದ್ದಾರೆ.
20 ಕಡೆ ಮೋದಿ ರ್ಯಾಲಿ: ನರೇಂದ್ರ ಮೋದಿ ಹಲವು ಹಂತಗಳಲ್ಲಿ 20 ಕಡೆ ಚುನಾವಣಾ ರ‍್ಯಾಲಿ ನಡೆಸಲಿದ್ದಾರೆ. ಸ್ಟಾರ್ ಕ್ಯಾಂಪೇನರ್ ಮೋದಿ ಜನಪ್ರಿಯತೆ ಮತ್ತು ವರ್ಚಸ್ಸನ್ನು ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಮತ ಎಣಿಕೆ ಮೇ 13ರಂದು ನಡೆಯಲಿದೆ.
ಇದನ್ನೂಓದಿ: ಭ್ರಷ್ಟಾಚಾರದ ಹಣದಿಂದ ಬಿಜೆಪಿ ಸರ್ಕಾರ ರಚನೆಯಾಗಿದೆ: ರಾಹುಲ್ ಗಾಂಧಿ