ETV Bharat / state

ಫೆಬ್ರವರಿ 27 ಕ್ಕೆ ಮೋದಿ ಭೇಟಿ: ಸಿದ್ಧತೆಗಳ ಕುರಿತು ಸಿಎಂ ಸಭೆ - ಕಾಫಿ ಪ್ಲಾಂಟೇಷನ್

ಶಿವಮೊಗ್ಗದ ವಿಮಾನ ನಿಲ್ದಾಣ ಹಾಗೂ ಬೆಳಗಾವಿ ರೈಲ್ವೆ ನಿಲ್ದಾಣ ಉದ್ಘಾಟನೆ ನೆರವೇರಿಸಲು ಫೆಬ್ರವರಿ 27 ಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಇದರ ಪೂರ್ವ ತಯಾರಿಗಾಗಿ ಮುಖ್ಯಮಂತ್ರಿ ಬೊಮ್ಮಾಯಿ ಪರಿಶೀಲನೆಯ ಸಭೆ ನಡೆಸಿದ್ದಾರೆ.

cm meeting
ಸಭೆ ನಡೆಸಿದ ಸಿಎಂ
author img

By

Published : Feb 21, 2023, 7:15 AM IST

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಹಾಗು ಬೆಳಗಾವಿ ರೈಲ್ವೆ ನಿಲ್ದಾಣ ಉದ್ಘಾಟನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27 ರಂದು ಒಂದು ದಿನದ ಮಟ್ಟಿಗೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮೋದಿ ಕಾರ್ಯಕ್ರಮ ಸಿದ್ಧತೆಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಪರಿಶೀಲನೆ ನಡೆಸಿದರು.

ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಹಾಗು ಬೆಳಗಾವಿಗೆ ಆಗಮಿಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ​ ಬೊಮ್ಮಾಯಿ ಅವರು ಬೆಳಗಾವಿ ಜಿಲ್ಲಾ ಮುಖಂಡರ ಜೊತೆ ಪೂರ್ವಭಾವಿ ಸಭೆ ನಡೆಸಿದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತಿಯಲ್ಲಿ ಬೆಳಗಾವಿ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಿದರು.

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮ ಹಿಂದೆಯೇ ನಿಗದಿಯಾಗಿದ್ದು, ಎಲ್ಲಾ ಸಿದ್ಧತೆಗಳು ನಡೆದಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಬಿಟ್ಟು ಬೆಳಗಾವಿ ಕಾರ್ಯಕ್ರಮಗಳಿಗೆ ಸೀಮಿತವಾಗಿ ಸಿಎಂ ಸಭೆ ನಡೆಸಿದರು. ಮೊದಲು ಶಿವಮೊಗ್ಗ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಧಾನಿ ನರೇಂದ್ರ ಮೋದಿ ನಂತರ ಬೆಳಗಾವಿಗೆ ತೆರಳಲಿದ್ದಾರೆ. 27 ರ ಮಧ್ಯಾಹ್ನ 2.15 ರಿಂದ 3.30ರವರೆಗೆ ಬೆಳಗಾವಿಯಲ್ಲಿ ಬೃಹತ್ ಬಹಿರಂಗ ಸಮಾವೇಶ ನಡೆಸಲು ನಿರ್ಧರಿಸಿದ್ದು. ಸಾವಗಾವ್, ಜಿಲ್ಲಾ ಕ್ರೀಡಾಂಗಣ, ಮಾಲಿನಿ ಗಾರ್ಡನ್, ಸಿಪಿಎಡ್ ಮೈದಾನಗಳಲ್ಲಿ ಯಾವ ಜಾಗದಲ್ಲಿ ಸಮಾವೇಶ ನಡೆಸಬೇಕು ಎನ್ನುವ ಕುರಿತು ಚರ್ಚಿಸಲಾಯಿತು.

ಈ ಭೇಟಿಯ ವೇಳೆಯಲ್ಲೇ ಬೆಳಗಾವಿ ರೈಲು ನಿಲ್ದಾಣ ಉದ್ಘಾಟಿಸಲಿರುವ ಪ್ರಧಾನಿ ನರೇಂದ್ರ ಮೋದಿ‌ ರೈತ ಸನ್ಮಾನ ನಿಧಿಯ ಎರಡನೇ ಕಂತಿನ ಹಣ ಬಿಡುಗಡೆಗೂ ಚಾಲನೆ ನೀಡಲಿದ್ದಾರೆ ಹಾಗಾಗಿ ಈ ಕಾರ್ಯಕ್ರಮಗಳ ಸಿದ್ದತೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ‌ ಪರಿಶೀಲನೆ ನಡೆಸಿದರು.

ಹಡಪದ ಅಭಿವೃದ್ಧಿ ನಿಗಮ ಸ್ಥಾಪನೆ, ಸಿಎಂಗೆ ಅಭಿನಂದನೆ: ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಕ್ರಮ ಸಂಖ್ಯೆ 8 (ಜೆ) ನಲ್ಲಿ ಬರುವ ಹಡಪದ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ 'ಕರ್ನಾಟಕ ಹಡಪದ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಹಡಪದ ಅಭಿವೃದ್ಧಿ ನಿಗಮ‌ ಸ್ಥಾಪನೆ ಮಾಡಿ ಆದೇಶ ಹೊರಡಿಸಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ​ ಬೊಮ್ಮಾಯಿಯವರಿಗೆ ಹಡಪದ ಸಮಾಜದ ಮುಖಂಡರು ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಜರಿದ್ದರು.

A meeting was held with the Coffee Growers Union
ಕಾಫಿ ಬೆಳೆಗಾರರ ಒಕ್ಕೂಟದ ಜೊತೆ ನಡೆದ ಸಭೆ

ಕಾಫಿ ಪ್ಲಾಂಟೇಷನ್ ಒತ್ತುವರಿ ಕಂದಾಯ ಜಮೀನು ಗುತ್ತಿಗೆ ನಿಯಮ: ಕಾಫಿ ಪ್ಲಾಂಟೇಷನ್ ಬೆಳೆಗಾರರಿಗೆ ರಾಜ್ಯ ಸರ್ಕಾರ ಒತ್ತುವರಿ ಕಂದಾಯ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡಲು ನಿಯಮ ರೂಪಿಸಲು ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.

ಈ ಸಂಬಂಧ ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಕಾಫಿ ಬೆಳೆಗಾರರ ಒಕ್ಕೂಟದ ಜೊತೆ ನಡೆದ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಒಂದು ವರ್ಷದ ಅವಧಿಗೆ ಒಂದರಿಂದ ಹತ್ತು ಎಕರೆವರೆಗೆ 2000ರೂ., ಹತ್ತರಿಂದ ಇಪ್ಪತ್ತು ಎಕರೆವರೆಗೆ 2500ರೂ., ಇಪ್ಪತ್ತರಿಂದ ಇಪ್ಪತೈದು ಎಕರೆವರೆಗೆ 3000ರೂ. ಗುತ್ತಿಗೆ ಶುಲ್ಕ ವಿಧಿಸುವ ಬಗ್ಗೆ ಕಂದಾಯ ಸಚಿವರು ಸಭೆಯಲ್ಲಿ ಒಪ್ಪಿಗೆ ಸೂಚಿಸಿದ್ದಾರೆ.

ಜೊತೆಗೆ ಪರಿಶಿಷ್ಟ ಜಾತಿ, ಪಂಗಡದವರಿಗೆ ಶುಲ್ಕದ ಶೇ.50 ಭಾಗ ವಿಧಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿ ಒಪ್ಪಿಗೆ ನೀಡಲಾಗಿದೆ. ಗುತ್ತಿಗೆ ಆಧಾರದಲ್ಲಿ ಮೇಲೆ ನೀಡಿದ ಜಮೀನುಗಳಿಗೆ ಸಾಲ ಸೌಲಭ್ಯವನ್ನು ರಾಷ್ಟ್ರೀ ಕೃತ, ವಾಣಿಜ್ಯ ಮತ್ತು ಸಹಕಾರಿ ಬ್ಯಾಂಕ್ ಗಳಿಂದ ಕೊಡುವ ಕುರಿತು ಹಾಗೂ ಕಾಫಿ ಮತ್ತು ಇತರ ಬೆಳೆಗಾರನಿಗೆ ಗುತ್ತಿಗೆ ಆಧಾರದ ಮೇಲೆ ಒತ್ತುವರಿ ಜಮೀನನ್ನು ನೀಡಿದ ಮೇಲೆ ಅವರ ಮರಣ ನಂತರ ವಾರಸುದಾರರಿಗೆ ಗುತ್ತಿಗೆ ವರ್ಗಾವಣೆ ಮಾಡಬೇಕು ಹಾಗೂ ಬೆಳೆಗಾರ ಮೂಲ ಕಾಫಿ ಜಮೀನು ಮಾರಿದರೆ ಅದರ ಜೊತೆಯಲ್ಲಿ ಬರುವ ಗುತ್ತಿಗೆ ಜಮೀನನ್ನು ಖರೀದಿಗಾರನಿಗೆ ಸರ್ಕಾರದ ಕರಾರಿನಂತೆ ಮುಂದುವರೆಸಿಕೊಂಡು ಹೋಗುವ ಬಗ್ಗೆ ತೀರ್ಮಾನಕ್ಕೆ ಬರಲಾಗಿದೆ.

ಹಳೆಯ ಅರೇಬಿಕಾ ಮತ್ತು ರೊಬೊಸ್ಟಾ ಗಿಡಗಳನ್ನು ತೆಗೆದು, ಹೊಸಗಿಡಗಳನ್ನು ತೆಗೆದು, ಹೊಸಗಿಡ ಮರುನಾಟಿ ಮಾಡಿದ ಹಾಗೂ ಶೀಘ್ರ ಫಸಲಿಗೆ ಬರುವ ತಳಿಗಳನ್ನು ಬೆಳೆದಿರುವುದನ್ನು ಪರಿಗಣಿಸಿ ಗುತ್ತಿಗೆ ಆಧಾರದ ಮೇಲೆ, ಕಾಫಿ ಬೆಳೆದಿರುವ ಭೂಮಿ ಅಂದರೆ ಮೀಸಲು ಅರಣ್ಯ ಹೊರತು ಪಡಿಸಿ ಬೇರೆ ಯಾವುದೇ ವರ್ಗಕ್ಕೆ ಸೇರಿದ್ದರೆ ಅದನ್ನು ಸಹ ಗುತ್ತಿಗೆ ನೀಡಲು ಒಪ್ಪಿಗೆ ಸೂಚಿಸಲಾಗಿದೆ.

ಪ್ಲಾಂಟೇಷನ್ ಬೆಳೆಗಾರರಿಗೆ ಒತ್ತುವರಿ ಕಂದಾಯ ಜಮೀನನ್ನು ಗುತ್ತಿಗೆ ಆಧಾರದಲ್ಲಿ ನೀಡುವ ಕುರಿತು ರಾಜ್ಯ ಸರ್ಕಾರ ಒಪ್ಪಿಗೆ ನೀಡಿರುವುದು ಅತ್ಯಂತ ಸ್ವಾಗತಾರ್ಹವಾಗಿದೆ. ವಿಶೇಷವಾಗಿ ಕಂದಾಯ ಸಚಿವ ಆರ್. ಅಶೋಕ್​ ಅವರನ್ನು ಚಿಕ್ಕಮಗಳೂರು ಜಿಲ್ಲೆಗೆ ಕರೆದು ಅಭಿನಂದಿಸಲಾಗುವುದು. ಜೊತೆಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಜೀವರಾಜ್, ಶಾಸಕರಾದ ಎಚ್.ಕೆ.ಕುಮಾರಸ್ವಾಮಿ, ಎಂ.ಪಿ.ಕುಮಾರಸ್ವಾಮಿ, ಟಿ.ಡಿ. ರಾಜೇಗೌಡ ಸಹಕಾರ ನೀಡಿದ ಎಲ್ಲ ಜನಪ್ರತಿನಿಧಿಗಳನ್ನು ಅಭಿನಂದಿಸುವುದಾಗಿ ಒಕ್ಕೂಟ ತಿಳಿಸಿದೆ.

ಸಭೆಯಲ್ಲಿ ಒಕ್ಕೂಟದ ಅಧ್ಯಕ್ಷ ಡಾ.ಹೆಚ್.ಟಿ. ಮೋಹನ್ ಕುಮಾರ್, ಮಾಜಿ ಅಧ್ಯಕ್ಷ ಬಿ.ಎಸ್. ಜಯರಾಂ, ಪ್ರಧಾನ ಕಾರ್ಯದರ್ಶಿ ಕೆ.ಬಿ. ಕೃಷ್ಣಪ್ಪ, ಕಾಫಿ ಪ್ಲಾಂಟರ್ಸ್ ಫೆಡರೇಶನ್ ಅಧ್ಯಕ್ಷ ಪ್ರಕಾಶ್ ಮತ್ತಿತರರು ಹಾಜರಿದ್ದರು.

ಇದನ್ನೂ ಓದಿ: ಇಬ್ಬರು ಮಹಿಳಾ ಅಧಿಕಾರಿಗಳಿಗೆ ಕಾನೂನು ಪಾಲಿಸಲು ಸೂಚನೆ: ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.