ETV Bharat / state

ಇಂದು ಬೆಂಗಳೂರಿಗೆ ಮೋದಿ... ಕಾರ್ಯಕ್ರಮಗಳ ಡಿಟೇಲ್ಸ್... ಶಿಕ್ಷಣ ಸಂಸ್ಥೆಗಳಿಗೆ ರಜೆ

ಪ್ರಧಾನಿ ನರೇಂದ್ರ ಮೋದಿಯವರು ಜೂನ್ 20 ಮತ್ತು 21ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಂಗಳೂರು, ಮೈಸೂರಿನಲ್ಲಿ ಇಂದು ಮತ್ತು ನಾಳೆ ಪ್ರಧಾನಿ ಭಾಗವಹಿಸಲಿರುವ ಕಾರ್ಯಕ್ರಮಗಳ ವಿವರ ಹೀಗಿದೆ.

PM Modi two day state tour
ಪ್ರಧಾನಿ ಮೋದಿ
author img

By

Published : Jun 19, 2022, 10:48 PM IST

Updated : Jun 20, 2022, 11:05 AM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದಿನಿಂದ ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಬೆಳಗ್ಗೆ 11.45ಕ್ಕೆ ವಿಶೇಷ ವಿಮಾನದ ಮೂಲಕ ಯಲಹಂಕ ವಾಯುನೆಲೆಗೆ ಪ್ರಧಾನಿ ಆಗಮಿಸಿ, ಸಂಜೆ 4ರ ವರೆಗೆ ಬೆಂಗಳೂರಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಸ್ವಾಗತಕ್ಕೆ ರಾಜಧಾನಿ ಸಿದ್ಧಗೊಂಡಿದ್ದು, ಭಾರಿ ಭದ್ರತೆ ಕೈಗೊಳ್ಳಲಾಗಿದೆ.

ಪ್ರಧಾನಿ ಕಾರ್ಯಕ್ರಮಗಳ ವಿವರ: ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಮಿದುಳು ಸಂಶೋಧನಾ ಕೇಂದ್ರ ಲೋಕಾರ್ಪಣೆಗೊಳಿಸಲಿದ್ದಾರೆ. ನಂತರ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಯ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 1.45 ಕ್ಕೆ ಪ್ರಧಾನಿಯವರು (ಬೇಸ್) ಕ್ಯಾಂಪಸ್​ಗೆ ತೆರಳಿ, ಡಾ.ಬಿ.ಆರ್.ಅಂಬೇಡ್ಕರ್ ಕಂಚಿನ ಪುತ್ಥಳಿ ಅನಾವರಣ, ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಕ್ಯಾಂಪಸ್ ಉದ್ಘಾಟನೆ ಹಾಗೂ ಮೇಲ್ದರ್ಜೆಗೇರಿಸಿದ 150 ಐಟಿಐ ಕಾಲೇಜುಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಮಧ್ಯಾಹ್ನ 2.45 ಕ್ಕೆ ಬೆಂಗಳೂರಿನ ಕೊಮ್ಮಘಟ್ಟದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಗೊಳಿಸಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮೈಸೂರಿಗೆ ತೆರಳಿದ್ದಾರೆ. ನಾಳೆ ಸಂಜೆ 5.30 ಕ್ಕೆ ಮೈಸೂರಿನ ಮಹಾರಾಜ ಮೈದಾನಕ್ಕೆ ತೆರಳಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ರಾತ್ರಿ 7 ಗಂಟೆಗೆ ಶ್ರೀ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ, ರಾತ್ರಿ 7.50 ಕ್ಕೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ಶ್ರೀ ಚಾಮುಂಡೇಶ್ವರಿ ದರ್ಶನ ಪಡೆಯಲಿದ್ದಾರೆ. ಜೂನ್ 21 ರಂದು ಮಂಗಳವಾರ ಬೆಳಗ್ಗೆ 6.30 ಕ್ಕೆ ಪ್ರಧಾನಿ ಮೋದಿಯವರು ಮೈಸೂರು ಅರಮನೆಯ ಮೈದಾನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಯೋಗಪಟುಗಳೊಂದಿಗೆ ಬೆರೆತು ಯೋಗ ಮಾಡಲಿದ್ದಾರೆ. ಬೆಳಗ್ಗೆ 8.10 ಕ್ಕೆ ವಸ್ತುಪ್ರದರ್ಶನ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 9.20 ಕ್ಕೆ ಮೈಸೂರು ಅರಮನೆ ಆವರಣದಿಂದ ನಿರ್ಗಮಿಸಿ, ಬೆಳಗ್ಗೆ 9.45ಕ್ಕೆ ಮೈಸೂರಿನ ವಿಮಾನ ನಿಲ್ದಾಣದಿಂದ ನವದೆಹಲಿಗೆ ತೆರಳಲಿದ್ದಾರೆ.

ಇದನ್ನೂ ಓದಿ: ನಾಳೆ ಚಾಮುಂಡಿ ಬೆಟ್ಟಕ್ಕೆ ಭಕ್ತಾದಿಗಳಿಗೆ ನಿರ್ಬಂಧ: ಈ ನಿಯಮಗಳನ್ನು ಪಾಲಿಸಿ..

ಶಿಕ್ಷಣ ಸಂಸ್ಥೆಗಳಿಗೆ ರಜೆ: ಪ್ರಧಾನಿ ಮೋದಿ ಇಂದು ನಗರಕ್ಕೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಭದ್ರತೆಯ ದೃಷ್ಠಿಯಿಂದ ಪ್ರಧಾನಿ ಸಂಚರಿಸಲಿರುವ ಮಾರ್ಗದಲ್ಲಿ ಬರುವ ನಗರದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ರಜೆ ಘೋಷಿಸಿದೆ. ಇದರಂತೆ ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆ ಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜ್‌ಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರದ ಆದೇಶ ಅನ್ವಯವಾಗಲಿದೆ.

ಸಿಎಂ ಕಾರ್ಯಕ್ರಮಗಳ ಡಿಟೇಲ್ಸ್
ಸಿಎಂ ಕಾರ್ಯಕ್ರಮಗಳ ಡಿಟೇಲ್ಸ್

(ಇದನ್ನೂ ಓದಿ: ಕೊಮ್ಮಘಟ್ಟದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ: ತಡರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಸಿಎಂ)

Last Updated : Jun 20, 2022, 11:05 AM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.