ETV Bharat / state

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ರಾಜ್ಯಪಾಲ, ಸಿಎಂರಿಂದ ಸ್ವಾಗತ - ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ

ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ತಾವರಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ಗಣ್ಯರು ಹಾಗೂ ಅಧಿಕಾರಿಗಳು ಬರಮಾಡಿಕೊಂಡರು.

Prime Minister Narendra Modi landed in Bengaluru  Prime Minister Narendra Modi news  PM Narendra Modi visit to vidhana soudha  ಬೆಂಗಳೂರಿಗೆ ಆಗಮಿಸಿದ ನಮೋ  ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ  ಕೆಂಪೇಗೌಡ ಪ್ರತಿಮೆ ಅನಾವರಣ  ಹೊಸ ಟರ್ಮಿನಲ್ ಉದ್ಘಾಟನೆ  ರಾಜ್ಯಕ್ಕೆ ಮೂರನೇ ಬಾರಿ ಆಗಮಿಸಿರುವ ಮೋದಿ  ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಬೆಂಗಳೂರಿಗೆ ಆಗಮಿಸಿದ ನಮೋ
author img

By

Published : Nov 11, 2022, 9:35 AM IST

ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಅನಾವರಣ, ಹೊಸ ಟರ್ಮಿನಲ್ ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವರ್ಷದಲ್ಲಿ ಇದು ಮೂರನೇ ಭೇಟಿಯಾಗಿದ್ದು ಇಂದು ಐದು ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

  • Karnataka | Prime Minister Narendra Modi landed in Bengaluru a short while ago, where he was received by Governor Thaawarchand Gehlot, CM Basavaraj Bommai, Union Minister & BJP's Dharwad MP Pralhad Joshi, along with other dignitaries as well as officials. pic.twitter.com/iDeubzZWpW

    — ANI (@ANI) November 11, 2022 " class="align-text-top noRightClick twitterSection" data=" ">

ಹೆಚ್​ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ವಿಧಾನಸೌಧ ಸಮೀಪದ ಹೆಲಿಪ್ಯಾಡ್​ಗೆ ಆಗಮಿಸಲಿರುವ ಮೋದಿ, ಶಾಸಕರ ಭವನದ ಆವರಣದಲ್ಲಿರುವ ಕನಕದಾಸ, ವಾಲ್ಮೀಕಿ ಪ್ರತಿಮೆಗಳಿಗೆ ಮಾಲಾರ್ಪಣೆ ನೆರವೇರಿಸುವರು. ನಂತರ ಮೆಜೆಸ್ಟಿಕ್​ಗೆ ರಸ್ತೆ ಮಾರ್ಗದ ಮೂಲಕ ತೆರಳಲಿದ್ದು, ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ರೈಲಿಗೆ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಕಾಶಿಯಾತ್ರೆಯ ವಿಶೇಷ ರೈಲಿಗೂ ಚಾಲನೆ ನೀಡಲಿದ್ದಾರೆ.

ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಹೆಬ್ಬಾಳ ಹಲಿಪ್ಯಾಡ್​ಗೆ ತೆರಳಿ ಹೆಲಿಕಾಪ್ಟರ್ ಮೂಲಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಮೊದಲು ಹೊಸದಾಗಿ ನಿರ್ಮಿಸಿರುವ ಟರ್ಮಿನಲ್ 2 ಉದ್ಘಾಟನೆ ಮಾಡಲಿದ್ದು, ನಂತರ ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪುತ್ಥಳಿ ಅನಾವರಣಗೊಳಿಸಲಿದ್ದಾರೆ. ಮಧ್ಯಾಹ್ನ 12.30-1.30 ರವರೆಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ 1.45 ಕ್ಕೆ ತಮಿಳುನಾಡಿಗೆ ಪ್ರಯಾಣಿಸುವರು.

ಇದನ್ನೂ ಓದಿ: ಬೆಂಗಳೂರಿಗಿಂದು ಮೋದಿ: ಸುಗಮ ಸಂಚಾರಕ್ಕೆ ಬದಲಿ ಮಾರ್ಗ ಬಳಸಲು ಮನವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.