ಬೆಂಗಳೂರು: ಹೆಚ್ಎಎಲ್ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಳಗ್ಗೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿಯವರು ಬಳಿಕ 9:30ರಿಂದ 12 ಗಂಟೆವರೆಗೆ ಹೆಚ್‍ಎಎಲ್ ಆವರಣದಲ್ಲಿ ಆಯೋಜನೆಗೊಂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಪ್ರಧಾನಿಯವರ ಆಗಮನದ ಹಿನ್ನೆಲೆಯಲ್ಲಿ ಎಚ್‌ಎಎಲ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಾಗಿದ್ದು, ವೈಟ್‌ಫೀಲ್ಡ್ ಡಿಸಿಪಿ ನೇತೃತ್ವದಲ್ಲಿ 4 ಎಸಿಪಿ, 8 ಇನಸ್ಪೆಕ್ಟರ್ ಸೇರಿದಂತೆ 500 ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ. ಮಧ್ಯಾಹ್ನದವರೆಗೆ ಹೆಚ್‌ಎಎಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ತೇಜಸ್ ಸೇರಿದಂತೆ ವಿವಿಧ ರಕ್ಷಣಾ ವಿಮಾನಗಳ ಉತ್ಪಾದನೆಯ ಕುರಿತು ಪ್ರಧಾನಿ ಮೋದಿ ಪರಿಶೀಲನೆ ನಡೆಸಲಿದ್ದಾರೆ.
ನಂತರ ಭಾರತೀಯ ವಾಯುಸೇನೆ ವಿಮಾನದ ಮೂಲಕ ತೆಲಂಗಾಣಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ. ಪ್ರಧಾನಿಯವರ ಬೆಂಗಳೂರು ಭೇಟಿ ಹಿನ್ನೆಲೆಯಲ್ಲಿ ಅಗತ್ಯ ಭದ್ರತಾ ಕ್ರಮಕಗಳನ್ನು ಕೈಗೊಳ್ಳಲಾಗಿದ್ದು, ಯಾವುದೇ ಲೋಪಗಳು ಸಂಭವಿಸಿದಂತೆ ಮುನ್ನೆಚ್ಚರಿಕೆ ವಹಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.
ಇದನ್ನೂ ಓದಿ: ಹುತಾತ್ಮ ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ