ETV Bharat / state

ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಅತ್ಯಂತ ಪ್ರಚೋದನಕಾರಿಯಾದುದು: ಸಿಎಂ ಸಿದ್ದರಾಮಯ್ಯ - ಈಟಿವಿ ಭಾರತ್ ಕನ್ನಡ ಸುದ್ದಿ

ಸಚಿವ ಉದಯನಿಧಿ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಕರೆ ಅತ್ಯಂತ ಪ್ರಚೋದನಕಾರಿಯಾದುದು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಪ್ರಧಾನಿ ನರೇಂದ್ರ ಮೋದಿ

author img

By ETV Bharat Karnataka Team

Published : Sep 7, 2023, 7:03 PM IST

Updated : Sep 7, 2023, 7:46 PM IST

ಬೆಂಗಳೂರು : ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಅತ್ಯಂತ ಪ್ರಚೋದನಕಾರಿಯಾದುದು, ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ನಾನು ಆಗ್ರಹಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

ವಿಷಯ - ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿ ಮಾಡಿದರೂ ಅಪರಾಧವೇ ಆಗುತ್ತದೆ ಎಂದು ಸಿಎಂ ಹೇಳಿದ್ದಾರೆ.

  • ‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ @narendramodi ಅವರ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು.
    ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕೆಂದು ನಾನು ಆಗ್ರಹಿಸುತ್ತೇನೆ.

    ವಿಷಯ - ವಿದ್ಯಮಾನಗಳೇನೇ ಇರಲಿ, ಯಾರಾದರೂ…

    — Siddaramaiah (@siddaramaiah) September 7, 2023 " class="align-text-top noRightClick twitterSection" data=" ">

ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ - ನುಡಿ ಮತ್ತು ಕ್ರಿಯೆ - ಪ್ರತಿಕ್ರಿಯೆ ಆ ಸ್ಥಾನದ ಘನತೆ - ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ ಎಂದಿದ್ದಾರೆ.

  • ಪ್ರಧಾನಿ @narendramodi ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ.

    ನರೇಂದ್ರ ಮೋದಿ ಅವರು ಇನ್ನೂ ಆರ್.ಎಸ್.ಎಸ್ ನ…

ನರೇಂದ್ರ ಮೋದಿ ಅವರು ಇನ್ನೂ ಆರ್.ಎಸ್.ಎಸ್​ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ. ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ. ಪ್ರಧಾನಿಯವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ ಎಂದು ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

  • ಪ್ರಧಾನಿ @narendramodi ಅವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು.
    ದಿವಂಗತ…

ಪ್ರಧಾನಿ ಮೋದಿ ಅವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ದಿಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಧಾನಿ ಹೇಳಿದ್ದೇನು? : ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂಬ ತಮಿಳುನಾಡು ಸಿಎಂ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆ ಅತ್ಯಂತ ಆಘಾತಕಾರಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಇತ್ತೀಚೆಗೆ ಸನಾತನ ಧರ್ಮದ ವಿರುದ್ಧ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಧಾನಿ ಮೋದಿ, ಸನಾತನ ಧರ್ಮದ ಮೇಲಿನ ಇಂತಹ ಟೀಕೆಗಳು ಅತ್ಯಂತ ಆಘಾತಕಾರಿ ಮತ್ತು ಅತ್ಯಂತ ಖಂಡನೀಯ ಎಂದಿದ್ದರು. ಅಲ್ಲದೇ, ಅವರಿಗೆ ನಮ್ಮೆಲ್ಲರಿಂದ ಸರಿಯಾದ ಮತ್ತು ಸಮರ್ಥನೀಯ ಪ್ರತಿಕ್ರಿಯೆಯ ಅಗತ್ಯವಿದೆ. ವಿಶೇಷವಾಗಿ ದಕ್ಷಿಣದಿಂದ ಬಂದವರ ಪ್ರತಿಕ್ರಿಯೆಯು ಘನತೆ, ತಾರ್ಕಿಕ ಮತ್ತು ಸತ್ಯ ಮತ್ತು ಅಂಕಿ ಅಂಶಗಳಿಂದ ತುಂಬಿರಬೇಕು ಎಂದು ಮೋದಿ ಸಲಹೆ ನೀಡಿದ್ದರು ಎಂಬುದಾಗಿ ತಿಳಿದು ಬಂದಿತ್ತು.

ಇದನ್ನೂ ಓದಿ: ಸಂಸತ್ ಚುನಾವಣೆ ಎದುರಿಸಲು ಅಪಪ್ರಚಾರ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್

Last Updated : Sep 7, 2023, 7:46 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.