ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಸಂವಾದ ನಡೆಸುತ್ತಿದ್ದು, ರಾಜ್ಯದಿಂದಲೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ದಾರೆ.
ಗೃಹ ಕಚೇರಿ ಕೃಷ್ಣಾದಿಂದ ಪ್ರಧಾನಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಿದ್ದು, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್, ಸಚಿವ ಸುರೇಶ್ ಕುಮಾರ್ ಭಾಗಿಯಾಗಿದ್ದಾರೆ. ಮೇ 3 ರಂದು ಎರಡನೇ ಹಂತದ ಲಾಕ್ಡೌನ್ ಮುಕ್ತಾಯವಾಗಲಿದ್ದು, ಪಿಎಂ ಮೋದಿ ವಿಡಿಯೋ ಕಾನ್ಫರೆನ್ಸ್ ಮಾಡಿ ಮಾಹಿತಿ ಪಡೆಯುತ್ತಿದ್ದಾರೆ.
ರಾಜ್ಯದಲ್ಲಿ ಈವರೆಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮ, ಲಾಕ್ಡೌನ್ ಸಡಿಲಿಕೆ ನಂತರದ ಬೆಳವಣಿಗೆ, ಕೃಷಿ ಸೇರಿದಂತೆ ಕೆಲ ಕ್ಷೇತ್ರಕ್ಕೆ ನೀಡಿರುವ ವಿನಾಯಿತಿ ನಂತರದ ಬೆಳವಣಿಗೆ ಬಗ್ಗೆ ಸಿಎಂ ಸಮಗ್ರವಾದ ಮಾಹಿತಿ ನೀಡುತ್ತಿದ್ದಾರೆ.