ETV Bharat / state

ಕೈಗಾರಿಕಾ ಪ್ರದೇಶಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಿ: ಸಚಿವ‌ ಶೆಟ್ಟರ್‌ - Minister Jagadish Shettar meeting

ನಗರದ ಖನಿಜ ಭವನದ ಕರ್ನಾಟಕ ಉದ್ಯೋಗ ಮಿತ್ರ ಸಭಾಂಗಣದಲ್ಲಿ ಆಯೋಜಿಸಿದ್ದ ಕೆಐಎಡಿಬಿ ವತಿಯಿಂದ ರಾಜೀವ್ ಗಾಂಧಿ ನಿಗಮ ಯೋಜನೆಗಾಗಿ ತಾಳಾಗುಪ್ಪೆ ಗ್ರಾಮದಲ್ಲಿ ಭೂ ಸ್ವಾಧೀನ ಕುರಿತ ಸಭೆಯಲ್ಲಿ ಸಚಿವ ಜಗದೀಶ್‌ ಶೆಟ್ಟರ್‌, ವಿ.ಸೋಮಣ್ಣ, ಕೆಐಎಡಿಬಿ ಸಿಇಒ ಡಾ. ಶಿವಶಂಕರ್ ಸೇರಿದಂತೆ ಪ್ರಮುಖ ಅಧಿಕಾರಿಗಳು ಪಾಲ್ಗೊಂಡಿದ್ದರು.

Meeting
ಸಭೆ
author img

By

Published : Nov 26, 2020, 6:39 PM IST

ಬೆಂಗಳೂರು: ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸುವುದಕ್ಕೂ ಮುನ್ನ ಆ ಪ್ರದೇಶಗಳಿಗೆ ರಸ್ತೆ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮೊದಲು ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಸೂಚನೆ ನೀಡಿದ್ದಾರೆ.

ನಗರದ ಖನಿಜ ಭವನದ ಕರ್ನಾಟಕ ಉದ್ಯೋಗ ಮಿತ್ರ ಸಭಾಂಗಣದಲ್ಲಿ ಆಯೋಜಿಸಿದ್ದ ಕೆಐಎಡಿಬಿ ವತಿಯಿಂದ ರಾಜೀವ್ ಗಾಂಧಿ ನಿಗಮ ಇವರ ಯೋಜನೆಗಾಗಿ ರಾಮನಗರ ಜಿಲ್ಲೆ ಮತ್ತು ಬಿಡದಿ ಹೋಬಳಿ ತಾಳಾಗುಪ್ಪೆ ಗ್ರಾಮದಲ್ಲಿ ಭೂ ಸ್ವಾಧೀನ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಾಗಿದೆ. ಅಲ್ಲದೆ ಕೈಗಾರಿಕಾ ಪ್ರದೇಶಕ್ಕೆ ತಲುಪಲು ಹಾಗೂ ಕೈಗಾರಿಕೆಗಳನ್ನು ಸ್ಥಾಪಿಸಲು ಅಗತ್ಯವಿರುವ ಮೂಲಭೂತ ಸೌಕರ್ಯಗಳು ಇಲ್ಲದೆ ಪ್ರದೇಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದರ ಬದಲಾಗಿ ಮೊದಲು ಪ್ರದೇಶಕ್ಕೆ ತಲುಪಲು ಅಗತ್ಯವಿರುವ ರಸ್ತೆಗಳು ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಅದ್ಯತೆ ನೀಡಬೇಕು. ನಂತರ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿಪಡಿಸುವುದು ಸೂಕ್ತ ಎಂದು ಹೇಳಿದರು.

ಸಭೆಯಲ್ಲಿ ಭಾಗವಹಿಸಿದ್ದ ವಸತಿ ಸಚಿವ ವಿ.ಸೋಮಣ್ಣ ಮಾತನಾಡಿ, ನೆಲಮಂಗಲದ ಬಳಿ ಸಣ್ಣ ಕೈಗಾರಿಕಾ ಇಲಾಖೆಯ ವತಿಯಿಂದ ಅಭಿವೃದ್ಧಿಪಡಿಸಲಾಗಿರುವ ಕೈಗಾರಿಕಾ ಪ್ರದೇಶದ ಬಳಿ ಸಮರ್ಪಕ ರಸ್ತೆ ಇಲ್ಲ. ಇದರ ಕಾಮಗಾರಿಯ ಪ್ರಾರಂಭದ ಸಂದರ್ಭದಲ್ಲಿ ಅಗತ್ಯ ಹಣಕಾಸಿನ ಸಹಾಯವನ್ನು ಮಾಡುವುದಾಗಿ ಭರವಸೆ ನೀಡಿದರು. ಅಲ್ಲದೆ ತಾಳಗುಪ್ಪೆ ಗ್ರಾಮದಲ್ಲಿ ಕೆಐಎಡಿಬಿ ವತಿಯಿಂದ ಭೂ ಸ್ವಾಧೀನ ಕುರಿತ ಸಮಸ್ಯೆಗಳನ್ನು ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.