ETV Bharat / state

ಗ್ರಾಪಂಗಳಲ್ಲಿ ರಾಜಕೀಯ ವಿಕೇಂದ್ರಿಕರಣದೊಂದಿಗೆ ಆರ್ಥಿಕ ವಿಕೇಂದ್ರೀಕರಣಕ್ಕೆ ಆದ್ಯತೆ: ಸಿಎಂ ಬೊಮ್ಮಾಯಿ - ಮಹಾತ್ಮಗಾಂಧಿ ನರೇಗಾ ಪ್ರಶಸ್ತಿ

ಕರ್ನಾಟಕದ ಪಂಚಾಯತ್ ರಾಜ್ ಇಲಾಖೆ ಅತ್ಯುತ್ತಮ ಕೆಲಸ ಮಾಡುತ್ತಿದೆ. ನರೇಗಾದಲ್ಲಿ ದೇಶಕ್ಕೆ ನಂಬರ್ ಒನ್ ಸ್ಥಾನ ಗಳಿಸಿ ಹೆಚ್ಚುವರಿ ಅನುದಾನವನ್ನು ರಾಜ್ಯ ಸರ್ಕಾರವು ನಿರಂತರ ಪಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Mahatma Gandhi Nrega Award Ceremony
ಗಾಂಧಿ ಗ್ರಾಮ ಪುರಸ್ಕಾರ, ಮಹಾತ್ಮಗಾಂಧಿ ನರೇಗಾ ಪ್ರಶಸ್ತಿ ಪ್ರದಾನ ಸಮಾರಂಭ
author img

By

Published : Mar 24, 2023, 10:02 PM IST

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರತಿ ಗ್ರಾಮ ಪಂಚಾಯಿತಿಗಳ ವಿವೇಚನೆಗೆ ತಕ್ಕಂತೆ ಆಸ್ತಿ ನಿರ್ವಹಣೆ ಮಾಡುವ ಸಲುವಾಗಿ ದುಪ್ಪಟ್ಟು ಅನುದಾನ ಎರಡು ಸಾವಿರ ಕೋಟಿ ರೂ ನೀಡಲಾಗುತ್ತಿದೆ. ರಾಜಕೀಯ ವಿಕೇಂದ್ರಿಕರಣದ ಜತೆಗೆ ಆರ್ಥಿಕ ವಿಕೇಂದ್ರೀಕರಣವನ್ನೂ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಆಯೋಜಿಸಿದ್ದ 2019-2020, 2020-2021 ಹಾಗೂ 2021-2022ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ಮಹಾತ್ಮಗಾಂಧಿ ನರೇಗಾ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪಂಚತಂತ್ರ 2.0 ಬಾಪೂಜಿ ಸೇವಾ ಕೇಂದ್ರ ತಂತ್ರಾಂಶ ತೆರಿಗೆ ಸಂಗ್ರಹದ ಉಪಕರಣಗಳ ಲೋಕಾರ್ಪಣೆ ಮತ್ತು ಜಲಶಕ್ತಿ ಅಭಿಯಾನಕ್ಕೆ ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮ ಪಂಚಾಯಿತಿಗಳಿಗೆ ಶಕ್ತಿ ಜನರ ಸುತ್ತಲೂ ಅಭಿವೃದ್ಧಿಯಾಗಬೇಕು. ಅಭಿವೃದ್ಧಿಗಾಗಿ ಜನ ಓಡಾಡುವಂತಾಗಬಾರದು. ಜನರಿದ್ದಲ್ಲಿ ಆಡಳಿತ, ಅಭಿವೃದ್ಧಿಯಾಗಬೇಕು. ಬಾಪೂಜಿ ಕೇಂದ್ರದ ತಂತ್ರಾಂಶಗಳ ಮೂಲಕ ಇನ್ನಷ್ಟು ವೇಗವಾಗಿ ಕೆಲಸಗಳನ್ನು ಮಾಡಲು ಬಾಪೂಜಿ 2 ಯಿಂದ ಅನುಕೂಲವಾಗಲಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಬಲವರ್ಧನೆಗೆ ಆದ್ಯತೆ : ಇದರ ಜತೆಗೆ ಸೇವಾ ಭತ್ಯೆಗಳನ್ನು ಒಂದು ಸಾವಿರದಿಂದ 2 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅಧ್ಯಕ್ಷರಿಗೆ ಆರು ಸಾವಿರ ದೊರೆಯುವಂತೆ ಮಾಡಲಾಗಿದೆ. ಹಲವಾರು ಬೇಡಿಕೆಗಳನ್ನು ಈಡೇರಿಸಲಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಬಹಳಷ್ಟು ಮಹತ್ವ ನೀಡಿದೆ. ಬರುವ ದಿನಗಳಲ್ಲಿ ಇದಕ್ಕೆ ಇನ್ನಷ್ಟು ಶಕ್ತಿಯನ್ನು ತುಂಬಲಾಗುವುದು. ಜನರಿಗೆ ಅತ್ಯಂತ ಹತ್ತಿರವಿರುವ ಸರ್ಕಾರ ಗ್ರಾಮ ಪಂಚಾಯಿತಿಯನ್ನು ಬಲಪಡಿಸಲಾಗುವುದು ಎಂದರು.

ದೇಶ ಸಮಗ್ರ ಅಭಿವೃದ್ಧಿ: ಗ್ರಾಮೀಣಾಭಿವೃದ್ಧಿ ಈ ದೇಶದ ಸಮಗ್ರ ಅಭಿವೃದ್ಧಿಯ ಮೂಲವಾಗಿದೆ. ಅಬ್ದುಲ್ ನಜೀರ್ ಸಾಬ್ ಕರ್ನಾಟಕದಲ್ಲಿ ಗ್ರಾಮೀಣಾಭಿವೃದ್ಧಿಯ ಹರಿಕಾರರು. ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ನೇತೃತ್ವದಲ್ಲಿ ಪ್ರಾರಂಭವಾಗಿ ಕಾನೂನು ರೂಪಿಸಲಾಯಿತು. 73 ನೇ ತಿದ್ದುಪಡಿ ತಂದು ದೇಶವ್ಯಾಪಿ ಕರ್ನಾಟಕದ ಮಾದರಿ ಅನುಷ್ಠಾನವಾಗಿದೆ. ಮೂರು ಹಂತದ ಪಂಚಾಯತ್ ವ್ಯವಸ್ಥೆ ಯಶಸ್ವಿಯಾಗಲು ಆರ್ಥಿಕ ಅಧಿಕಾರ ನೀಡಬೇಕೆಂಬ ಬೇಡಿಕೆ ಇತ್ತು ಎಂದು ಹೇಳಿದರು.

ಕರ್ನಾಟಕದ ಪಂಚಾಯತ್ ರಾಜ್ ಇಲಾಖೆ ನಂಬರ್ ಒನ್: ನರೇಗಾದಲ್ಲಿ ಕರ್ನಾಟಕದ ಪಂಚಾಯತ್ ರಾಜ್ ಇಲಾಖೆ ಅತ್ಯುತ್ತಮ ಕೆಲಸ ಮಾಡಿದ್ದು ದೇಶದಲ್ಲಿಯೇ ನಂಬರ್ ಒನ್ ಸ್ಥಾನದಲ್ಲಿದೆ. ನಿಗದಿಯಾದ ಗುರಿ ಮೀರಿ ಸಾಧನೆ ಮಾಡಿ ಹೆಚ್ಚುವರಿ ಅನುದಾನವನ್ನು ರಾಜ್ಯ ನಿರಂತರವಾಗಿ ಪಡೆದಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಬದಲಾವಣೆಯ ನಿರೀಕ್ಷೆ: ನರೇಗಾದಿಂದ ಸಾಕಷ್ಟು ಆಸ್ತಿ ನಿರ್ಮಾಣವಾಗಿದೆ. ಸಾಕಷ್ಟು ಜನರಿಗೆ ಕೆಲಸ ದೊರೆತಿದೆ. ಇದನ್ನು ಅರ್ಥಪೂರ್ಣವಾಗಿ ಅನುಷ್ಠಾನಕ್ಕೆ ತರಲು ಕಾನೂನಿನಲ್ಲಿ ಕೆಲವು ಬದಲಾವಣೆ ತರಬೇಕಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸಾಲೆ, ಆಸ್ಪತ್ರೆಗಳಿಗೆ ನರೇಗಾ ಬಳಕೆ ಅಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸಚಿವರ ಬಳಿ ಮಾತನಾಡಿದ್ದು, ಶೀಘ್ರದಲ್ಲಿ ಬದಲಾವಣೆ ನಿರೀಕ್ಷೆ ಮಾಡುತ್ತಿದ್ದೇವೆ. ಈ ವರ್ಷದ ಬಜೆಟ್ ದಲ್ಲಿ ಎ,ಬಿ,ಸಿ ವರ್ಗದ ಪಂಚಾಯಿತಿಗಳಿಗೆ ದುಪ್ಪಟ್ಟು ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.

ಇದನ್ನೂಓದಿ:ಅಮಿತ್ ಶಾ ಸಮ್ಮುಖದಲ್ಲಿ 'ರಕ್ಷಾ ವಿಶ್ವ ವಿದ್ಯಾಲಯ' ಸ್ಥಾಪನೆಗೆ ಒಡಂಬಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.