ETV Bharat / state

ಆಯವ್ಯಯದಲ್ಲಿ ಶಿಕ್ಷಣ, ನೀರಾವರಿ, ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳಿಗೆ ಆದ್ಯತೆ : ಡಿಸಿಎಂ ಕಾರಜೋಳ

2020-21ನೇ ಬಜೆಟ್​ನಲ್ಲಿ ಶಿಕ್ಷಣ, ನೀರಾವರಿ, ಕೌಶಲ್ಯಾಭಿವೃದ್ಧಿ ಹಾಗೂ ಪರಿಶಿಷ್ಟ ಜಾತಿ ಮತ್ತು ವರ್ಗಕ್ಕೆ ಅನುಕೂಲವಾಗುವಂತೆ ಆದ್ಯತೆ ನೀಡಲಾಗುವುದು ಎಂದು ಬಜೆಟ್​​ ಪೂರ್ವಭಾವಿ ಸಭೆಯಲ್ಲಿ ಡಿಸಿಎಂ ಗೋವಿಂದ​ ಕಾರಜೋಳ ತಿಳಿಸಿದರು.

DCm
ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆ
author img

By

Published : Jan 31, 2020, 7:53 PM IST

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯು 2020-21ನೇ ಆಯವ್ಯಯದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಶಿಕ್ಷಣ, ಸ್ವಯಂ ಉದ್ಯೋಗ, ಭೂ ಒಡೆತನ, ಗಂಗಾ ಕಲ್ಯಾಣ ಹೀಗೆ ಯುವ ಜನತೆಗೆ ಅನುಕೂಲವಾಗುವಂತೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದರು.

ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆ

2020-21ನೇ ಸಾಲಿನ ಆಯವ್ಯಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡ ಜನಾಂಗದ ಸರ್ವತೋಮುಖ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾಗಿರುವ ಮಹತ್ವದ ಕಾರ್ಯಕ್ರಮಗಳನ್ನು ರೂಪಿಸುವ ಕುರಿತು ಪರಿಶಿಷ್ಟ ಜಾತಿ ಮತ್ತು ಪಂಗಡದ ಸಂಘಟನೆಗಳ ಮುಖಂಡರೊಂದಿಗೆ ವಿಧಾನಸೌಧದಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸುಮಾರು 4 ಗಂಟೆಗಳ ಕಾಲ ಸುಧೀರ್ಘವಾಗಿ ಮುಖಂಡರೊಂದಿಗೆ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಗಿದೆ ಎಂದರು.

ಸಮಾಜಕ್ಕೆ ಆಡಳಿತಾತ್ಮಕ, ಕಲ್ಯಾಣ ಕಾರ್ಯಕ್ರಮಗಳು ಉಪಯುಕ್ತವಾಗುವಂತಹ ಅನೇಕ ಸಲಹೆಗಳನ್ನು ನೀಡಿದ್ದಾರೆ. ಅವರ ಸಲಹೆ ಸೂಚನೆಗಳನ್ನು ಸ್ವಾಗತಿಸುತ್ತೇನೆ. ಈ ಎಲ್ಲಾ ಸಲಹೆಗಳನ್ನು ಕ್ರೂಢೀಕರಿಸಿದ ವರದಿಯನ್ನು ಸಿದ್ದಪಡಿಸಿ, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಮುದಾಯಕ್ಕೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.