ETV Bharat / state

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಜಾ ಬಂದಿ ಸಾವು: 1500 ಸಜಾಬಂಧಿಗಳಿಂದ ಪ್ರತಿಭಟನೆ..!

author img

By

Published : Oct 7, 2021, 9:28 PM IST

ಕೊಲೆ ಪ್ರಕರಣವೊಂದರಲ್ಲಿ ಕಳೆದ 11 ವರ್ಷದಿಂದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಸಜಾ ಕೈದಿಯೊಬ್ಬ ಮೃತಪಟ್ಟಿದ್ದಾನೆ. ಇದರಿಂದ ಆಕ್ರೋಶಗೊಂಡ 1500 ಖೈದಿಗಳು ಮಧ್ಯಾಹ್ನದ ಊಟ ತ್ಯಜಿಸಿ ಪ್ರತಿಭಟನೆ ಮಾಡಿದರು.

prisoner-death-in-parappana-agrahara-central-jail
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ

ಆನೇಕಲ್/ಪರಪ್ಪನ ಅಗ್ರಹಾರ : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇಂದು ಮುಂಜಾನೆ ಸಜಾ ಕೈದಿಯೊಬ್ಬರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮೂಲದ ಆನಂದ್ (45) ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಇವನು ಕೊಲೆ ಪ್ರಕರಣವೊಂದರಲ್ಲಿ ಕಳೆದ 11 ವರ್ಷದಿಂದ ಜೈಲು ಶಿಕ್ಷೆ ಅನುಭವಿಸುತ್ತಿದ್ದ.

ಆನಂದ್​, ಹೃದಯಾಘಾತದಿಂದ ಮೃತಪಟ್ಟಿದ್ದರೂ, ಇತರ ಕೈದಿಗಳು ನ್ಯಾಯಕ್ಕಾಗಿ ಆಗ್ರಹಿಸಿ ಹೋರಾಟ ನಡೆಸಿರುವುದು ಜೈಲಿನಲ್ಲಿ ಏನೂ ಸರಿಯಿಲ್ಲ ಅನ್ನೋದು ಮತ್ತೆ ಸಾಬೀತಾದಂತಿದೆ.

ಕಾರಾಗೃಹದ ವೈದ್ಯಕೀಯ ಸೇವೆ ಏರುಪೇರಿನಿಂದ ಸಾವುಗಳು ಸಂಭವಿಸುತ್ತಿವೆ. ಮೂರು ತಿಂಗಳ ಹಿಂದೆ ಬೆಂಗಳೂರು ಟ್ಯಾನಿರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊಲೆ ಆರೋಪ ಹೊತ್ತು ವಿಚಾರಣಾಧೀನ ಕೈದಿಯಾಗಿದ್ದ ಪ್ರದೀಪ್ ಹೊಟ್ಟೆನೋವಿನಿಂದ ಮೃತಪಟ್ಟಿದ್ದರು.

ಕಳೆದ ಮೂರು ದಿನದ ಹಿಂದೆ ಇದೇ ರೀತಿ ಹೊಟ್ಟೆನೋವಿಗೆ 24 ವರ್ಷದ ವಿಚಾರಣಾ ಕೈದಿ ಮೃತಪಟ್ಟಿದ್ದ. ಇದೀಗ ಆನಂದ್ ಮೃತಪಟ್ಟಿರೋದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಹಿನ್ನೆಲೆ ಇತರ ಕೈದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರ ಬೇಡಿಕೆಯಂತೆ ಮುಖ್ಯ ಜೈಲಿನ ಅಧೀಕ್ಷಕರು ಹಾಗೂ ಆಸ್ಪತ್ರೆ ವೈದ್ಯರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.