ETV Bharat / state

ನಮ್ಮ ಕ್ಲಿನಿಕ್​​​​ಗಳನ್ನು ವಾರ್ಷಿಕ 36 ಲಕ್ಷ ರೂಪಾಯಿಯಲ್ಲಿ ಕ್ಲಿನಿಕ್‌ ನಡೆಸಲು ಹೇಗೆ ಸಾಧ್ಯ: ಪೃಥ್ವಿ ರೆಡ್ಡಿ - etv bharat karnataka

ರಾಜ್ಯ ಬಿಜೆಪಿ ಸರ್ಕಾರ ಆರಂಭಿಸಿರುವ ನಮ್ಮ ಕ್ಲಿನಿಕ್​ಗಳು ಬಿಜೆಪಿಯ ಪ್ರಚಾರ ಕೇಂದ್ರಗಳಾಗಿವೆ ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆರೋಪ ಮಾಡಿದ್ದಾರೆ.

Etv BharatPrithvi Reddy reaction on namma clinic
ನಮ್ಮ ಕ್ಲಿನಿಕ್‌ ಗಳನ್ನು ವಾರ್ಷಿಕ 36 ಲಕ್ಷ ರೂಪಾಯಿಯಲ್ಲಿ ಕ್ಲಿನಿಕ್‌ ನಡೆಸಲು ಹೇಗೆ ಸಾಧ್ಯ:ಪೃಥ್ವಿ ರೆಡ್ಡಿ
author img

By

Published : Feb 8, 2023, 5:59 PM IST

ಬೆಂಗಳೂರು: ರಾಜ್ಯ ಸರ್ಕಾರ ಆರಂಭಿಸಿರುವ ನಮ್ಮ ಕ್ಲಿನಿಕ್‌ಗಳು ಕೇವಲ ಬಿಜೆಪಿಯ ಪ್ರಚಾರ ಕೇಂದ್ರಗಳಾಗಿದ್ದು, ಸೂಕ್ತ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸದೇ ರೋಗಿಗಳ ಭಾವನೆ ಜೊತೆ ಚೆಲ್ಲಾಟವಾಡಲಾಗುತ್ತಿದೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು. ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರವು ಆರಂಭಿಸಿರುವ ನಮ್ಮ ಕ್ಲಿನಿಕ್‌ ಹೇಗಿದೆಯೆಂದು ಪರಿಶೀಲಿಸಲು ಆಮ್‌ ಆದ್ಮಿ ಪಾರ್ಟಿ ತಂಡ ಭೇಟಿ ನೀಡಿತ್ತು. ಆಗ ಅವು ನಮ್ಮ ಕ್ಲಿನಿಕ್‌ ಅಲ್ಲ, ಬದಲಾಗಿ ಅಲ್ಲಿರುವ ಅವ್ಯವಸ್ಥೆಗಳನ್ನು ನೋಡಿ ಈ ಆಸ್ಪತ್ರೆಗಳು ಹೇಗೆ ಕಾರ್ಯನಿರ್ವಹಿಸುತ್ತಿವೆ ಎಂಬುದು ತಿಳಿಯಿತು ಎಂದರು.

ದೆಹಲಿಯಲ್ಲಿ ಆಮ್‌ ಆದ್ಮಿ ಸರ್ಕಾರ ಈಗಾಗಲೇ 500 ಮೊಹಲ್ಲಾ ಕ್ಲಿನಿಕ್‌ಗಳನ್ನು ತೆರೆದು, ಇನ್ನೂ 500 ಕ್ಲಿನಿಕ್‌ಗಳನ್ನು ತೆರೆಯುವ ಪ್ರಯತ್ನದಲ್ಲಿದೆ. ಆದರೆ ಕರ್ನಾಟಕ ಎಂಬ ದೊಡ್ಡ ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಒಟ್ಟು 438 ನಮ್ಮ ಕ್ಲಿನಿಕ್‌ಗಳಿಗೆ ಮಾತ್ರ ಯೋಜನೆ ರೂಪಿಸಿದೆ. ಇದರಲ್ಲಿ ಬೆಂಗಳೂರಿನಲ್ಲಿ 243 ಹಾಗೂ ಬೆಂಗಳೂರಿನ ಹೊರಗಿನ ಬೃಹತ್‌ ಪ್ರದೇಶದಲ್ಲಿ ಕೇವಲ 195 ಕ್ಲಿನಿಕ್‌ಗೆ ಯೋಜನೆ ರೂಪಿಸಲಾಗಿದೆ. ಜನರಿಗೆ ಸಮೀಪದಲ್ಲೇ ಕ್ಲಿನಿಕ್‌ ಸಿಗಬೇಕು ಎಂಬ ಉದ್ದೇಶ ಈಡೇರಲು ಇದರಿಂದ ಸಾಧ್ಯವೇ ಎಂದು ಪ್ರಶ್ನಿಸಿದರು.

ಆಮ್‌ ಆದ್ಮಿ ಪಾರ್ಟಿಯು ಬೆಂಗಳೂರಿನ ಶಾಂತಿನಗರದಲ್ಲಿ ಎರಡು ವರ್ಷಗಳಿಂದ ಆಮ್‌ ಆದ್ಮಿ ಕ್ಲಿನಿಕ್‌ ನಡೆಸುತ್ತಿದೆ. ಇದು ಬೆಳಗ್ಗೆ ಮಾತ್ರ ತೆರೆದಿರುತ್ತಿದ್ದು, ತಿಂಗಳಿಗೆ 8ರಿಂದ 10 ಲಕ್ಷ ರೂಪಾಯಿ ಖರ್ಚಾಗುತ್ತಿದೆ. ಸರ್ಕಾರದ ನಮ್ಮ ಕ್ಲಿನಿಕ್‌ಗಳು ಸಂಜೆಯವರೆಗೂ ತೆರೆದಿರುವುದರಿಂದ ಎರಡು ಪಟ್ಟು ಹೆಚ್ಚು ಖರ್ಚು ಆಗಲಿದೆ. ಆದರೆ, ಸರ್ಕಾರವು ಪ್ರತಿ ಕ್ಲಿನಿಕ್‌ಗೆ ಇಡೀ ವರ್ಷಕ್ಕೆ ಕೇವಲ 36ಲಕ್ಷ ಹಣವನ್ನು ಮಾತ್ರ ಮೀಸಲಿಟ್ಟಿದೆ. ಇದು ಅಲ್ಲಿರುವ ಐದು ಮಂದಿಯ ಸಂಬಳ ಹಾಗೂ ಬಾಡಿಗೆಗೇ ಸಾಕಾಗುವುದಿಲ್ಲ. ಹೀಗಿರುವಾಗ, ಹೇಗೆ ಉಚಿತ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ಕಿಡಿಕಾರಿದರು.

ಮೂರು ಹಂತದ ವೈದ್ಯಕೀಯ ವ್ಯವಸ್ಥೆ ಜಾರಿಯಲ್ಲಿರಬೇಕು: ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಮೂರು ಹಂತದ ವೈದ್ಯಕೀಯ ವ್ಯವಸ್ಥೆ ಜಾರಿಯಲ್ಲಿರಬೇಕು. ಉದಾಹರಣೆಗೆ, ದೆಹಲಿಯಲ್ಲಿ ಮೊಹಲ್ಲಾ ಕ್ಲಿನಿಕ್‌, ಪಾಲಿಕ್ಲಿನಿಕ್‌ ಹಾಗೂ ಸುಸಜ್ಜಿತವಾದ ಆಸ್ಪತ್ರೆಗಳಿವೆ. ಮೊಹಲ್ಲಾ ಕ್ಲಿನಿಕ್‌ನಲ್ಲಿ ತಪಾಸಣೆ ನಡೆಸಿದಾಗ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ ಎನಿಸಿದರೆ ಮುಂದಿನ ಹಂತಗಳಿಗೆ ಶಿಫಾರಸು ಮಾಡಿ, ಅಲ್ಲಿ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ನಮ್ಮ ಕ್ಲಿನಿಕ್‌ ಕೇಂದ್ರಗಳಲ್ಲಿ ತಪಾಸಣೆ ನಡೆಸಿದಾಗ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎನಿಸಿದರೆ, ಅದನ್ನು ನೀಡಲು ಮುಂದಿನ ಹಂತದ ವ್ಯವಸ್ಥೆಯು ದುಃಸ್ಥಿತಿಯಲ್ಲಿವೆ ಎಂದು ಅವರು ಆರೋಪಿಸಿದರು.

ರೋಗಿಯನ್ನು ನೋಡದೇ ಟೆಲಿಮೆಡಿಸಿನ್‌ ವ್ಯವಸ್ಥೆ ಹೇಗೆ: ನಮ್ಮ ಕ್ಲಿನಿಕ್‌ಗಳಲ್ಲಿ ಟೆಲಿಮೆಡಿಸಿನ್‌ ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿಯವರು ಹೇಳಿದ್ದಾರೆ. ಆದರೆ, ವೈದ್ಯರು ರೋಗಿಯನ್ನು ನೋಡದೇ ಟೆಲಿಮೆಡಿಸಿನ್‌ ಮಾಡಲು ಹೇಗೆ ಸಾಧ್ಯ? ಮೊಹಲ್ಲಾ ಕ್ಲಿನಿಕ್‌ಗಳನ್ನು ನಕಲು ಮಾಡಲು ಹೋಗಿ ಮೋಸ ಕ್ಲಿನಿಕ್‌ಗಳನ್ನು ರಾಜ್ಯ ಬಿಜೆಪಿ ಸರ್ಕಾರ ತೆರೆಯುತ್ತಿದೆ. ಕೇವಲ ರಾಜಕೀಯ ಕಾರಣಗಳಿಗಾಗಿ ಇಂದಿರಾ ಕ್ಯಾಂಟೀನ್‌ಗಳನ್ನು ಕೂಡ ರಾಜ್ಯ ಬಿಜೆಪಿ ಸರ್ಕಾರ ಹಾಳುಗೆಡವಿದೆ. ಈಗ ನಮ್ಮ ಕ್ಲಿನಿಕ್‌ ಹೆಸರಿನಲ್ಲಿ ಜನರಿಗೆ ಮತ್ತೊಂದು ಮೋಸ ಮಾಡಲು ಹೊರಟಿದೆ ಎಂದು ಪೃಥ್ವಿ ರೆಡ್ಡಿ ಟೀಕಿಸಿದರು.

ಜನರ ಭಾವನೆಗಳ ಜೊತೆ ಚಲ್ಲಾಟ: ಕ್ಲಿನಿಕ್‌ಗಳನ್ನು ಹೇಗೆ ನಡೆಸಬೇಕೆಂದು ತಿಳಿಯಲು ರಾಜ್ಯ ಸರ್ಕಾರವು ದೂರದ ದೆಹಲಿಗೆ ಹೋಗುವುದು ಕೂಡ ಬೇಕಾಗಿಲ್ಲ. ಬೆಂಗಳೂರಿನ ಶಾಂತಿನಗರದಲ್ಲಿರುವ ಆಮ್‌ ಆದ್ಮಿ ಕ್ಲಿನಿಕ್‌ಗೆ ಬಂದರೆ ನಾವೇ ತೋರಿಸುತ್ತೇವೆ. ಈಗ ತೆರೆದಿರುವ ನಮ್ಮ ಕ್ಲಿನಿಕ್‌ಗಳಲ್ಲಿ ಮಂಚದ ಮೇಲೆ ಸರಿಯಾದ ಹಾಸಿಗೆಯಿಲ್ಲ, ಮಾತ್ರೆಗಳ ದಾಸ್ತಾನು ಕೂಡ ಇಲ್ಲ. ಜನರ ಆರೋಗ್ಯದ ವಿಚಾರದಲ್ಲಿ ಈ ರೀತಿ ಮೋಸ ಮಾಡಿ, ಅವರ ಭಾವನೆಗಳ ಜೊತೆ ಚೆಲ್ಲಾಡುವುದು ಸರಿಯಲ್ಲ ಎಂದರು.

ಇದನ್ನೂ ಓದಿ:ಅನುದಾನದಲ್ಲಿ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ: ಮೋದಿ ಸರ್ಕಾರದ ವಿರುದ್ಧ ಹೆಚ್​ಡಿಕೆ ಟೀಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.