ETV Bharat / state

ಪ್ರಯಾಣಿಕರಿಂದ ದುಪ್ಪಟ್ಟು ಟಿಕೆಟ್ ದರ ವಸೂಲಿ ​ಮಾಡುತ್ತಿರುವ ಖಾಸಗಿ ಬಸ್​ಗಳು : ಆರ್​​​​ಟಿಒ ದಾಳಿ

ಹಬ್ಬ ಮತ್ತು ವಾರಾಂತ್ಯದ ದಿನದ ಹತ್ತಿರ ಬಂದಿದ್ದರಿಂದ ನಗರಗಳಿಂದ ಊರಿಗೆ ಪ್ರಯಾಣಸುವವರ ಸಂಖ್ಯೆ ಹೆಚ್ಚಾಗಿದೆ. ಇದನ್ನೆ ಲಾಭಕ್ಕೆ ಬಳಸಿಕೊಂಡ ಖಾಸಗಿ ಬಸ್​ನವರು ಟಿಕೆಟ್​ ದರ ದುಪ್ಪಟ್ಟು ಮಾಡಿ ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿದ್ದಾರೆ.

Private buses
ಆರ್ ಟಿ ಓ ಅಧಿಕಾರಿಗಳ ದಾಳಿ
author img

By

Published : Aug 29, 2022, 8:16 AM IST

ಬೆಂಗಳೂರು: ಗೌರಿ ಗಣೇಶ ಹಬ್ಬದ ಹಿನ್ನೆಲೆ ಟಿಕೆಟ್‌ ದರವನ್ನು ದುಪ್ಪಟ್ಟು ಹೆಚ್ಚಿಸಿ ಪ್ರಯಾಣಿಕರನ್ನು ಸುಲಿಗೆ ಮಾಡುತ್ತಿದ್ದ ಮತ್ತು ಅನುಮತಿಯ ಮಿತಿಗಿಂತ ಹೆಚ್ಚಿನ ಲಗೇಜ್ ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್‌ಗಳ ಮೇಲೆ ಆರ್​ಟಿಒ ಅಧಿಕಾರಿಗಳು ಭಾನುವಾರ ರಾತ್ರಿ ದಾಳಿ ನಡೆಸಿದ್ದಾರೆ. ಹೆಚ್ಚುವರಿ ಟಿಕೆಟ್‌ ದರ ಪಡೆದ ಬಸ್‌ಗಳಿಗೆ ದಂಡ ವಿಧಿಸುತ್ತಿದ್ದಾರೆ. ಕೆಲವೆಡೆ ಪ್ರಯಾಣಿಕರಿಗೆ ಟಿಕೆಟ್‌ನ ಹೆಚ್ಚುವರಿ ಮೊತ್ತವನ್ನು ಹಿಂದಿರುಗಿಸಲಾಗುತ್ತಿದೆ.

ಹೆಚ್ಚು ಟಿಕೆಟ್‌ ದರ ಪಡೆದ ಬಸ್‌ ನಿರ್ವಾಹಕರು, ಏಜೆಂಟರ್‌ ಹಾಗೂ ಮಾಲೀಕರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಹಬ್ಬ ಎಂದು ಮನಬಂದಂತೆ ಪ್ರಯಾಣ ದರ ಏರಿಸಿ ಗ್ರಾಹಕರ ಸುಲಿಗೆ ಮಾಡುವಂತಿಲ್ಲ. ಒಂದು ವೇಳೆ ಹೆಚ್ಚು ದರ ಪಡೆದರೆ ಬಸ್‌ಗಳ ವಿರುದ್ಧ ಪ್ರಕರಣ ದಾಖಲಿಸಿ, ರಹದಾರಿ ರದ್ಧತಿಗೆ ರಾಜ್ಯ ಸಾರಿಗೆ ಪ್ರಾಧಿಕಾರಕ್ಕೆ (ಆರ್‌ಟಿಎ) ಶಿಫಾರಸು ಮಾಡುವುದಾಗಿ ಸಾರಿಗೆ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡುತ್ತಿದ್ದಾರೆ.

ದುಪ್ಪಟ್ಟು ಟಿಕೆಟ್ ದರ ವಸೂಲಿ ​ಮಾಡುತ್ತಿರುವ ಖಾಸಗಿ ಬಸ್​ಗಳ ಮೇಲೆ ಆರ್ ಟಿ ಓ ಅಧಿಕಾರಿಗಳ ದಾಳಿ

ಬಸ್‌ಗಳನ್ನು ಏಕಾಏಕಿ ನಿಲ್ಲಿಸುತ್ತಿರುವ ಅಧಿಕಾರಿಗಳು: ರಾಜ್ಯದ ವಿವಿಧ ಭಾಗಗಳಿಗೆ ತೆರಳುತ್ತಿದ್ದ ಬಸ್‌ಗಳನ್ನು ಏಕಾಏಕಿ ನಿಲ್ಲಿಸುತ್ತಿರುವ ಅಧಿಕಾರಿಗಳು ಬಸ್‌ ಒಳಗೆ ತೆರಳಿ ಪ್ರಯಾಣಿಕರ ಬಳಿ ಟಿಕೆಟ್‌ ದರದ ಬಗ್ಗೆ ವಿಚಾರಿಸುತ್ತಿದ್ದಾರೆ. ಬಳಿಕ ಹೆಚ್ಚು ಟಿಕೆಟ್‌ ದರ ಪಡೆದ ಬಸ್‌ ನಿರ್ವಾಹಕರು, ಏಜೆಂಟರ್‌ ಹಾಗೂ ಮಾಲೀಕರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಎಲ್ಲೆಲ್ಲಿ ದಾಳಿ?: ರಾಜ್ಯ ಸಾರಿಗೆ ಇಲಾಖೆ ಆಯುಕ್ತ ಕುಮಾರ್‌ ಸೂಚನೆ ಮೇರೆಗೆ ನಗರದ ಆನಂದರಾವ್‌ ಸರ್ಕಲ್‌, ಮೆಜೆಸ್ಟಿಕ್‌, ಕೆ.ಆರ್‌.ಪುರಂ, ಹೊಸೂರು ರಸ್ತೆಯ ಸಿಲ್ಕ್ ಬೋರ್ಡ್‌ ಜಂಕ್ಷನ್‌, ಗೊರಗುಂಟೆಪಾಳ್ಯ, ಕಲಾಸಿಪಾಳ್ಯ, ಕೆ.ಆರ್‌.ಮಾರುಕಟ್ಟೆ ಸೇರಿ ವಿವಿಧ ಕಡೆ ಖಾಸಗಿ ಬಸ್‌ ನಿಲ್ದಾಣಗಳಿಗೆ ತೆರಳಿದ ಸಾರಿಗೆ ಅಧಿಕಾರಿಗಳು ದುಬಾರಿ ಟಿಕೆಟ್‌ ದರ ಟಾಪ್ ಮೇಲೆ ಮಿತಿಗಿಂತ ಹೆಚ್ಚಿನ ಲಗೇಜ್ ಹಾಕಿರುವ ಕುರಿತು ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ ಎಂದು ದಾಳಿಯ ನೇತೃತ್ವ ವಹಿಸಿರುವ ಆರ್. ಟಿ. ಓ ಪ್ರಕಾಶ್ ತಿಳಿಸಿದರು.

ರಹದಾರಿ ರದ್ಧತಿಗೆ ಆರ್‌ಟಿಓಗೆ ಶಿಫಾರಸು: ಹಬ್ಬ ಎಂದು ಮನಬಂದಂತೆ ಪ್ರಯಾಣ ದರ ಏರಿಸಿ ಗ್ರಾಹಕರು ಸುಲಿಗೆ ಮಾಡುವಂತಿಲ್ಲ. ಒಂದು ವೇಳೆ ಹೆಚ್ಚು ದರ ಪಡೆದರೆ ಬಸ್‌ಗಳ ವಿರುದ್ಧ ಪ್ರಕರಣ ದಾಖಲಿಸಿ, ರಹದಾರಿ ರದ್ಧತಿಗೆ ಶಿಫಾರಸು ಮಾಡಲಾಗುತ್ತಿದೆ ಎಂದು ಆರ್. ಟಿ. ಓ ಪ್ರಕಾಶ್ ಹೇಳಿದರು.

ಇದನ್ನೂ ಓದಿ: ವೀರ ಸಾವರ್ಕರ್ ವೇದಿಕೆಯಲ್ಲಿ ಈ ಬಾರಿ ಕಾಶಿ ವಿಶ್ವನಾಥ ರಕ್ಷಕ ಗಣಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.