ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಖಾಸಗಿ ಬಸ್ಸುಗಳ ಓಡಾಟ ಜೋರಾಗಿದೆ. ಈಗಾಗಲೇ ಖಾಸಗಿ ಬಸ್ಸುಗಳಿಗೆ ಪರ್ಮಿಟ್ ವಿಸ್ತರಣೆ ಮಾಡಿದೆ. ಆದರೆ ಸಾರಿಗೆ ಮುಷ್ಕರವನ್ನು ಬಂಡವಾಳ ಮಾಡಿಕೊಂಡು ನಿಯಮ ಉಲ್ಲಂಘನೆ ಮಾಡುತ್ತಿದ್ದ 2 ಖಾಸಗಿ ಬಸ್‌ಗಳನ್ನ ಜಪ್ತಿ ಮಾಡಲಾಗಿದೆ.
ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದು, ನಿಯಮ ಉಲ್ಲಂಘನೆ ಮಾಡುತ್ತಿದ್ದ ಎರಡು ಖಾಸಗಿ ಬಸ್ಗಳನ್ನು ವಶಕ್ಕೆ ಪಡೆದಿದ್ದಾರೆ.
ರಾಜಾಜಿನಗರದ ಸಾರಿಗೆ ಇಲಾಖೆ ಅಧಿಕಾರಿ ಬಾಲಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.