ETV Bharat / state

4,500 ಬೆಡ್ ನೀಡಲು ಖಾಸಗಿ ವೈದ್ಯಕೀಯ ಕಾಲೇಜುಗಳಿಂದ ಒಪ್ಪಿಗೆ: ಸಿಎಂ

ಸಭೆಯಲ್ಲಿ ಪ್ರಸ್ತುತ ವರದಿಯಾಗುತ್ತಿರುವ ಪ್ರಕರಣಗಳನ್ನು ಗಮನಿಸಿದರೆ, 4500 ಹಾಸಿಗೆಗಳನ್ನು ಖಾಸಗಿ ಕಾಲೇಜುಗಳಿಂದ ಸರ್ಕಾರ ನಿರೀಕ್ಷಿಸುತ್ತಿದೆ. ಕಳೆದ ನಾಲ್ಕು ತಿಂಗಳಿಂದ ಹತ್ತು ವೈದ್ಯಕೀಯ ಕಾಲೇಜುಗಳು ಹೊರತುಪಡಿಸಿ, ಇತರೆ ಎಲ್ಲ ಕಾಲೇಜುಗಳು ಪ್ರಯೋಗಾಲಯ ವ್ಯವಸ್ಥೆ ಮಾಡಿವೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

CM
ಸಿಎಂ
author img

By

Published : Jun 30, 2020, 1:19 PM IST

ಬೆಂಗಳೂರು: 4,500 ಬೆಡ್​ಗಳನ್ನು ಕೋವಿಡ್ ಸೋಂಕಿತರಿಗೆ ಮೀಸಲಿರಿಸಲು ಖಾಸಗಿ ವೈದ್ಯಕೀಯ ಕಾಲೇಜುಗಳು ಒಪ್ಪಿಕೊಂಡಿವೆ ಎಂದು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ತಿಳಿಸಿದ್ದಾರೆ.

ಸಭೆ ಬಳಿಕ ಮಾತನಾಡಿದ ಸಿಎಂ

ವಿಧಾನಸೌಧದಲ್ಲಿ ವೈದ್ಯಕೀಯ ಶಿಕ್ಷಣ ಕಾಲೇಜುಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಖಾಸಗಿ ಮೆಡಿಕಲ್ ಕಾಲೇಜುಗಳ ಮುಖ್ಯಸ್ಥರ ಜೊತೆ ಚರ್ಚೆ ನಡೆಸಲಾಯಿತು. ಒಳ್ಳೆ ರೀತಿಯ ಸ್ಪಂದನೆ ಅವರಿಂದ ಸಿಕ್ಕಿದೆ. ಎಲ್ಲರೂ ಸಹಕಾರ ಕೊಡುತ್ತೇವೆ ಎಂದು ಖಾಸಗಿ ವೈದ್ಯಕೀಯ ಕಾಲೇಜಿನವರು ಭರವಸೆ ನೀಡಿದ್ದಾರೆ.‌ ಖಾಸಗಿ ಆಸ್ಪತ್ರೆಯ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿಗೂ ‌ವಿಮೆ ಅನ್ವಯ‌ 50 ಲಕ್ಷ ರೂ. ಮೊತ್ತದ ಆಗಲಿದೆ ಎಂದು ಇದೇ ವೇಳೆ ತಿಳಿಸಿದರು.

ಸಭೆಯಲ್ಲಿ ಪ್ರಸ್ತುತ ವರದಿಯಾಗುತ್ತಿರುವ ಪ್ರಕರಣಗಳನ್ನು ಗಮನಿಸಿದರೆ, 4500 ಹಾಸಿಗೆಗಳನ್ನು ಖಾಸಗಿ ಕಾಲೇಜುಗಳಿಂದ ಸರ್ಕಾರ ನಿರೀಕ್ಷಿಸುತ್ತಿದೆ. ಕಳೆದ ನಾಲ್ಕು ತಿಂಗಳಿಂದ 10 ವೈದ್ಯಕೀಯ ಕಾಲೇಜುಗಳನ್ನು ಹೊರತುಪಡಿಸಿ, ಇತರೆ ಎಲ್ಲ ಕಾಲೇಜುಗಳು ಪ್ರಯೋಗಾಲಯ ವ್ಯವಸ್ಥೆ ಮಾಡಿವೆ. ಸರ್ಕಾರಿ ಕಾಲೇಜುಗಳಲ್ಲಿ 2000 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 4500 ಸೇರಿದಂತೆ ಸುಮಾರು 6500 ಹಾಸಿಗೆಗಳು ಬೆಂಗಳೂರಿನ ವೈದ್ಯಕೀಯ ಕಾಲೇಜುಗಳಲ್ಲಿಯೇ ಲಭ್ಯವಾಗುತ್ತಿವೆ. ಇದಕ್ಕೆ ಖಾಸಗಿ ವೈದ್ಯಕೀಯ ಕಾಲೇಜುಗಳು ಸಹಕರಿಸುವಂತೆ ಸಿಎಂ ಮನವಿ ಮಾಡಿದರು.

ಕೋವಿಡ್ ರೋಗಿಗಳಿಗೆ ಹಾಸಿಗೆ ಹಂಚಿಕೆ ಕುರಿತಂತೆ ಕೇಂದ್ರೀಕೃತ ವ್ಯವಸ್ಥೆಯನ್ನು ಈಗಾಗಲೇ ಬಿಬಿಎಂಪಿಯಲ್ಲಿ ಮಾಡಲಾಗಿದೆ. ಎರಡು- ಮೂರು ದಿನಗಳಲ್ಲಿ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿದೆ. ಕೋವಿಡ್ ಚಿಕಿತ್ಸೆ ನೀಡುವ ಎಲ್ಲ ಆಸ್ಪತ್ರೆಗಳನ್ನು ಈ ವ್ಯವಸ್ಥೆಯ ವ್ಯಾಪ್ತಿಗೆ ತರಲಾಗುವುದು ಎಂದು ಸ್ಪಷ್ಟಪಡಿಸಿದರು.

ಖಾಸಗಿಯವರೊಂದಿಗೆ ಸಮನ್ವಯಕ್ಕೆ ಸಮಿತಿ ರಚನೆ ಮಾಡಲಾಗುವುದು. ಇದಲ್ಲದೆ ಟೆಲಿಮೆಡಿಸಿನ್ ಮೂಲಕ ಚಿಕಿತ್ಸೆ ನೀಡಲು ಸಹ ಕ್ರಮ ವಹಿಸಲಾಗುವುದು. ಇದಲ್ಲದೆ ಕೋವಿಡ್ ಕೇರ್ ಸೆಂಟರ್​ಗಳಿಗೆ ಅಗತ್ಯ ಸಿಬ್ಬಂದಿ ಒದಗಿಸುವಂತೆ ಮುಖ್ಯಮಂತ್ರಿ ಮನವಿ ಮಾಡಿದರು.

ಸಭೆಯಲ್ಲಿ ಡಿಸಿಎಂ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.