ಬೆಂಗಳೂರು: ವಿವಿಧ ಬೇಡಿಕೆಗಳನ್ನ ಈಡೇರಿಸಬೇಕು ಎಂದು ಒತ್ತಾಯಿಸಿ ಖಾಸಗಿ ಶಾಲಾ ಆಡಳಿತ ಮಂಡಳಿ ಸದಸ್ಯರು ಪ್ರತಿಭಟನೆ ನಡೆಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿ ಎದುರು ಪ್ರತಿಭಟನೆ ಮಾಡಿದ ಪ್ರತಿಭಟನಾಕಾರರು ಆರ್ಟಿಇ ಶುಲ್ಕ ಬಾಕಿ ಮರು ಪಾವತಿ, ತರಗತಿಗಳನ್ನು ಅವೈಜ್ಞಾನಿಕವಾಗಿ ಕಡಿತಗೊಳಿಸಿರುವುದು ಹಾಗೂ ಹೊಸ ಶಾಲೆಗಳ ಆರಂಭಕ್ಕೆ ಷರತ್ತು ಹಾಕಿರೋದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
ಅಲ್ಲದೇ 2 ಲಕ್ಷ ರೂ. ಠೇವಣಿ ಇಡಬೇಕು ಎಂಬ ಒತ್ತಾಯಕ್ಕೆ ಖಾಸಗಿ ಶಾಲಾ ಆಡಳಿತ ಮಂಡಳಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಯಾಟ್ಸ್ ತಂತ್ರಾಂಶದಲ್ಲಿ ದಾಖಲಾಗದಿದ್ರೂ, ಬಿಇಒಗಳು ಬಲವಂತವಾಗಿ ದಾಖಲಾತಿ ಪ್ರಕ್ರಿಯೆ ಪೂರ್ಣಗೊಳಿಸಿರುವುದು. ಎಲ್ಲ ಸಮಸ್ಯೆಗಳನನ್ನು ಬಗೆಹರಿಸುವಂತೆ ಹಾಗೂ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಮಾಡಿದ್ದಾರೆ. ಇನ್ನು ಪ್ರತಿಭಟನೆಯಲ್ಲಿ ಮಾಜಿ ಎಂಎಲ್‌ಸಿ ಪುಟ್ಟಣ್ಣ, ಮರಿತಿಬ್ಬೇಗೌಡ, ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಭಾಗವಹಿಸಿದ್ದರು.