ETV Bharat / state

ಖಾಸಗಿ ಶಾಲೆ ಸಂಘಟನೆಗಳ ಸಮಸ್ಯೆ.. ನ.27ರಂದು ಸಭೆ ನಡೆಸಲು ಸಚಿವರ ಸೂಚನೆ - ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿ

ಖಾಸಗಿ ಶಾಲೆಗಳ ಸಂಘಟನೆಗಳ ಸಮಸ್ಯೆಯನ್ನು ವಿವರಿಸುವ ಹೇಳಿಕೆ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಸಂಘಟನೆಯ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಪರಿಹಾರ ಸೂಚಿಸಲು ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದೇನೆ..

ಶಿಕ್ಷಣ ಸಚಿವ ಸುರೇಶ್ ಕುಮಾರ್
ಶಿಕ್ಷಣ ಸಚಿವ ಸುರೇಶ್ ಕುಮಾರ್
author img

By

Published : Nov 25, 2020, 9:13 PM IST

ಬೆಂಗಳೂರು : ಶುಲ್ಕ ಕಟ್ಟಿಲ್ಲವೆಂಬ ಕಾರಣಕ್ಕೆ ವಿದ್ಯಾರ್ಥಿಗಳನ್ನ ಫೇಲ್ ಮಾಡಬಾರದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ನೀಡಿರುವ ಸೂಚನೆಯನ್ನು ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟ ಖಂಡಿಸಿತ್ತು‌‌. ಇತ್ತ ಶುಲ್ಕ ಕಟ್ಟದೇ ಇರುವ ವಿದ್ಯಾರ್ಥಿಗಳಿಗೆ ಆನ್​ಲೈನ್ ಕ್ಲಾಸ್‌ನ ನವೆಂಬರ್ 30ರಿಂದ ನೀಡುವುದಿಲ್ಲ ಅಂತಾ ತಿಳಿಸಿದ್ದರು.

ಈ ಸಂಬಂಧ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರತಿಕ್ರಿಯಿಸಿದ್ದು, ಖಾಸಗಿ ಶಾಲೆಗಳ ಸಂಘಟನೆಗಳ ಸಮಸ್ಯೆಯನ್ನು ವಿವರಿಸುವ ಹೇಳಿಕೆ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಸಂಘಟನೆಯ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಪರಿಹಾರ ಸೂಚಿಸಲು ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದರು.

ಇನ್ನು ಆಯುಕ್ತರು ನವೆಂಬರ್​ 27ರಂದು ಸಭೆ ನಡೆಸಲಿದ್ದಾರೆ. ಅವರು ಸಲ್ಲಿಸುವ ವರದಿಯನ್ನು ನಿಯಮಗಳ ವ್ಯಾಪ್ತಿಯಲ್ಲಿ ಪರಿಶೀಲಿಸಿ ಎಲ್ಲರ ಹಿತ ಕಾಯುವ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.