ಬೆಂಗಳೂರು : ರಾಜ್ಯ ಸರ್ಕಾರದ 'ಶಕ್ತಿ ಯೋಜನೆ'ಯಿಂದಾಗಿ ನಷ್ಟಕ್ಕೊಳಗಾಗಿದ್ದೇವೆ ಎನ್ನುತ್ತಿರುವ ಖಾಸಗಿ ಸಾರಿಗೆ ಚಾಲಕರು ಮತ್ತು ಮಾಲೀಕರು, ನಮಗೆ ಪರಿಹಾರ ಒದಗಿಸಬೇಕು ಮತ್ತು ನಮ್ಮ ಪರ್ಯಾಯ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನಾಳೆ ನಗರದಲ್ಲಿ ಬಂದ್‌ಗೆ ಕರೆ ಕೊಟ್ಟಿದ್ದಾರೆ.
ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪಟ್ಟು ಹಿಡಿದಿವೆ. ಚಾಲಕರಿಗೆ ಸಹಾಯಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ಮಧ್ಯರಾತ್ರಿಯಿಂದಲೇ ಖಾಸಗಿ ವಾಹನಗಳ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಹೀಗಾಗಿ, ದೂರದೂರುಗಳಿಗೆ ಸಂಚರಿಸುವ ಪ್ರಯಾಣಿಕರಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ.
ಆಟೋ, ಕಂಪನಿ ಕ್ಯಾಬ್, ಏರ್‌ಪೋರ್ಟ್ ಕ್ಯಾಬ್, ಸ್ಕೂಲ್ ಬಸ್, ಖಾಸಗಿ ಬಸ್ ಚಾಲಕರ ಮತ್ತು ಮಾಲೀಕರ ಒಕ್ಕೂಟಗಳು ಬಂದ್‌ಗೆ ಸಂಪೂರ್ಣ ಬೆಂಬಲ ನೀಡಿವೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ನಮ್ಮ ಮೆಟ್ರೋ, ಬೈಕ್, ಟ್ಯಾಕ್ಸಿ ಸೇವೆಗಳು ಎಂದಿನಂತೆ ಇರಲಿದೆ.
ಇದನ್ನೂ ಓದಿ : ಅಧ್ಯಯನ ನಡೆಸದೆ ಶಕ್ತಿ ಯೋಜನೆ ಪ್ರಶ್ನಿಸಿದ್ದ ಕಾನೂನು ವಿದ್ಯಾರ್ಥಿಗಳ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ
ಬಂದ್‌ಗೆ 30ಕ್ಕೂ ಹೆಚ್ಚು ಸಂಘಟನೆಗಳು ಕೈ ಜೋಡಿಸಿವೆ. ಸುಮಾರು 4 ಲಕ್ಷ ಆಟೋ, 2 ಲಕ್ಷ ಟ್ಯಾಕ್ಸಿ, 30 ಸಾವಿರ ಗೂಡ್ಸ್ ವಾಹನಗಳು, 6 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲಾ ವಾಹನಗಳು, 90 ಸಾವಿರ ಸಿಟಿ ಟ್ಯಾಕ್ಸಿ, ಕಾರ್ಪೋರೇಟ್ ಕಂಪನಿ ಬಸ್‌ಗಳು ಬಂದ್ ಆಗುವುದರಿಂದ ಸಾರ್ವಜನಿಕ ಸಂಚಾರಕ್ಕೆ ತೊಂದರೆಯಾಗಲಿದೆ.
ಇದನ್ನೂ ಓದಿ : ಹುಬ್ಬಳ್ಳಿಯಲ್ಲಿ ಬಸ್ ಟಿಕೆಟ್ಗಾಗಿ ಜಗಳ.. ಪೊಲೀಸ್ ಠಾಣೆಗೆ ಬಸ್ ತೆಗೆದುಕೊಂಡು ಹೋದ ಚಾಲಕ
ಶಕ್ತಿ ಯೋಜನೆಯ ಮೊದಲು ನಿತ್ಯ 17.48 ಲಕ್ಷ ಜನರು ಬಸ್ಗಳಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ಯೋಜನೆ ಜಾರಿಯಾದ ನಂತರ ಪ್ರಯಾಣಿಕರ ಸಂಖ್ಯೆ 24 ರಿಂದ 26 ಲಕ್ಷದಷ್ಟಾಗಿದೆ. ಇನ್ನೊಂದೆಡೆ, ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಬಳಿಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಚಹರೆಯೇ ಬದಲಾಗುತ್ತಿದೆ. ನಿಗಮಗಳು ಲಾಭದತ್ತ ಮುಖಮಾಡುತ್ತಿರುವುದು ಮಾತ್ರವಲ್ಲದೇ, ಇವಿ ವಾಹನಗಳ ಕಾರ್ಯಾಚರಣೆಗೂ ಮುಂದಾಗಿವೆ. ಬೆಂಗಳೂರಿನಿಂದ ಬಹುತೇಕ ಜಿಲ್ಲಾ ಕೇಂದ್ರಗಳಿಗೆ ಕೆಎಸ್‌ಆರ್‌ಟಿಸಿ ಇವಿ ಬಸ್‌ಗಳು ಕಾರ್ಯಾಚರಣೆ ನಡೆಸುತ್ತಿವೆ. ಬಿಎಂಟಿಸಿಯೂ ಕೂಡ ಇವಿ ಬಸ್ಗಳನ್ನು ರಸ್ತೆಗಿಳಿಸಿದೆ. ಎರಡೂ ನಿಗಮಗಳ ಇವಿ ಬಸ್ಗಳಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಪರಿಸರ ಮಾಲಿನ್ಯ ರಹಿತದ ಜೊತೆಗೆ ಬಂಡವಾಳ ಹೂಡಿಕೆ ರಹಿತ ಕಾರ್ಯಾಚರಣೆಯಿಂದಾಗಿ ಹಣ ಉಳಿತಾಯ ಆಗುತ್ತಿದೆ. ಹಾಗಾಗಿ, ಇವಿ ಬಸ್ಗಳ ಕಾರ್ಯಾಚರಣೆಯನ್ನು ವಾಯುವ್ಯ ರಸ್ತೆ ಸಾರಿಗೆ ನಿಗಮಕ್ಕೂ ವಿಸ್ತರಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಸಾರಿಗೆ ನಿಗಮಗಳಲ್ಲಿ ಇವಿ ದುನಿಯಾ ಆರಂಭ : ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಳಿಕ ವಾಯುವ್ಯ ಸಾರಿಗೆಯಲ್ಲೂ ವಿದ್ಯುತ್ ಚಾಲಿತ ಬಸ್‌ಗಳು