ETV Bharat / state

ಸರ್ಕಾರವನ್ನು ಪ್ರಶ್ನೆ ಮಾಡಿದವರನ್ನು ರಾಜಕೀಯವಾಗಿ ಮುಗಿಸಲಾಗುತ್ತದೆ: ಪ್ರಿಯಾಂಕ್ ಖರ್ಗೆ

ಪ್ರತಿಪಕ್ಷವಾಗಲಿ, ಸಾರ್ವಜನಿಕರಾಗಲಿ, ಸರ್ಕಾರದ ವಿರುದ್ಧ ಮಾತನಾಡಿದರೆ ಪೊಲೀಸರ ಮೂಲಕ ದೌರ್ಜನ್ಯ, ಪ್ರಕರಣ ದಾಖಲಿಸಲಾಗುವುದು ಎಂಬ ಸಂದೇಶವನ್ನು ಈ ಸರ್ಕಾರ ಅಶ್ವತ್ಥನಾರಾಯಣ ಅವರ ಮೂಲಕ ಕಳುಹಿಸುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

Etv Bharatpriyank karge reaction on bjp
ಸರ್ಕಾರವನ್ನು ಪ್ರಶ್ನೆ ಮಾಡಿದವರನ್ನು ರಾಜಕೀಯವಾಗಿ ಮುಗಿಸಲಾಗುತ್ತದೆ
author img

By

Published : Apr 2, 2023, 3:54 PM IST

ಬೆಂಗಳೂರು: ಸರ್ಕಾರದ ವಿರುದ್ಧ ಏನೂ ಮಾತನಾಡಬಾರದು, ಪ್ರಶ್ನೆ ಕೇಳಬಾರದು. ಪ್ರಶ್ನೆ ಮಾಡಿದರೆ ರಾಜಕೀಯವಾಗಿ ಮುಗಿಸುತ್ತೇವೆ ಅಂತ ಸಚಿವ ಅಶ್ವತ್ಥನಾರಾಯಣ ಮೂಲಕ ಮೆಸೇಜ್ ಪಾಸ್ ಮಾಡಿದ್ದಾರೆ ಎಂದು ಕೆಪಿಸಿಸಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಸರ್ಕಾರದಿಂದ ದಬ್ಬಾಳಿಕೆ- ಪ್ರಿಯಾಂಕ್​ ಖರ್ಗೆ.. ಮಲ್ಲೇಶ್ವರಂದಲ್ಲಿ ಎಐಸಿಸಿ ಸಂಶೋಧನ ವಿಭಾಗದ ಅಧ್ಯಕ್ಷ ಪ್ರೋ. ರಾಜೀವ್ ಗೌಡ, ಎಐಸಿಸಿ ಕಾರ್ಯದರ್ಶಿ ಅಭಿಶೇಖ್ ದತ್ ಹಾಗೂ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅನೂಪ್ ಐಯ್ಯಂಗಾರ್ ಜತೆ ಜಂಟಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಸಿಎಂ ಬೊಮ್ಮಾಯಿ ಅವರು ಪದೇ ಪದೆ ಹೇಳುತ್ತಿರುವಂತೆ ಕರ್ನಾಟಕ ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿ ಜಾರಿ ಮಾಡಲಾಗುತ್ತಿದೆ. ಉತ್ತರ ಪ್ರದೇಶದ ಮಾದರಿಯಲ್ಲೇ ಯಾರೂ ಸರ್ಕಾರದ ವಿರುದ್ಧ ಮಾತನಾಡಬಾರದು, ಪ್ರಶ್ನೆ ಕೇಳಬಾರದು, ಪ್ರತಿಭಟನೆ ಮಾಡಬಾರದು ಎಂಬ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರತಿಪಕ್ಷವಾಗಲಿ, ಸಾರ್ವಜನಿಕರಾಗಲಿ, ಸರ್ಕಾರದ ವಿರುದ್ಧ ಮಾತನಾಡಿದರೆ ಪೊಲೀಸರ ಮೂಲಕ ದೌರ್ಜನ್ಯ, ಪ್ರಕರಣ ದಾಖಲಿಸಲಾಗುವುದು ಎಂಬ ಸಂದೇಶವನ್ನು ಈ ಸರ್ಕಾರ ಸಚಿವ ಅಶ್ವತ್ಥನಾರಾಯಣ ಅವರ ಮೂಲಕ ಕಳುಹಿಸುತ್ತಿದೆ. ಮಲ್ಲೇಶ್ವರಂನ 60-70 ಜನರ ವಿರುದ್ಧ ಈಗ ಪ್ರಕರಣ ದಾಖಲಾಗಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವರು ಮಾಡಿರುವ ತಪ್ಪು ಏನೆಂದರೆ, ಸ್ಯಾಂಕಿ ಮೇಲ್ಸೇತುವೆ ಯೋಜನೆ ವಿರೋಧಿಸಿ ಪರಿಸರ ಉಳಿಸಲು ಹೋರಾಟ ಮಾಡಿರುವುದು ಎಂದು ಹೇಳಿದರು.

ಸ್ಯಾಂಕಿ ಮೇಲ್ಸೆತುವೆ ರಸ್ತೆ ಅಗಲೀಕರಣ ಬೇಡ ಎಂಬ ಮನವಿಗೆ ಸಿಎಂ ಕಿವಿಗೊಟ್ಟಿಲ್ಲ- ಖರ್ಗೆ.. ಈ ಸಾರ್ವಜನಿಕರು 22 ಸಾವಿರ ಜನ ಸಹಿ ಹಾಕಿರುವ ಅರ್ಜಿಯಲ್ಲಿ ಸ್ಯಾಂಕಿ ಮೇಲ್ಸೇತುವೆ ರಸ್ತೆ ಅಗಲೀಕರಣ ಬೇಡ ಎಂದು ಹೇಳಿದ್ದಾರೆ. 2 ಸಾವಿರ ಶಾಲಾ ಮಕ್ಕಳು ಬೊಮ್ಮಾಯಿ ಅಂಕಲ್ ಗೆ ಪತ್ರ ಬರೆದು ಈ ಯೋಜನೆಯಿಂದ ಪರಿಸರ ನಾಶವಾಗಲಿದೆ, ನಮ್ಮ ಶಾಲೆಗೆ ತೊಂದರೆಯಾಗಲಿದೆ ಎಂದು ತಮ್ಮ ಮನವಿ ಸಲ್ಲಿಸಿದ್ದಾರೆ. ಆದರೂ ಮುಖ್ಯಮಂತ್ರಿಗಳು ಇವರ ಮನವಿಗೆ ಕಿವಿಗೊಟ್ಟಿಲ್ಲ. ಈ ಸಾರ್ವಜನಿಕರು ಸರ್ಕಾರಕ್ಕೆ 5 ಪ್ರಶ್ನೆ ಕೇಳಿದ್ದಾರೆ. ಅವುಗಳೆಂದರೆ

1. ಈ ಯೋಜನೆ ಉತ್ತಮ ಹಾಗೂ ಜನಪರವಾಗಿದ್ದರೆ ಈ ಯೋಜನೆ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿಲ್ಲ ಯಾಕೆ?.

2. 2020ರಲ್ಲಿ ಸರ್ಕಾರ ಮಾಡಿರುವ ಕಾಂಪ್ರಹೆನ್ಸ್ ಮೊಬಿಲಿಟಿ ಪ್ಲಾನ್ ನೀತಿಗೆತ್ತವಿರುದ್ಧವಾಗಿದೆಯಾ? ಬಿಎಂಎಲ್​ಟಿಎ ಗೆ (ಭೂಮಿ ಹಸ್ತಾಂತರ ಪ್ರಾಧಿಕಾರ)ಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿ ಅದರ ಅನುಮತಿ ಸಿಕ್ಕಿದೆಯಾ? ಇದರ ಮುಖ್ಯಸ್ಥರು ಯಾರೆಂದರೆ ಮುಖ್ಯಮಂತ್ರಿಗಳು. ಇದಕ್ಕೆ ಸರಿಯಾದ ಸಮಿತಿಯೇ ಇಲ್ಲ.
3. ಕೆರೆ ಮೇಲೆ ಮೇಲ್ಸೇತುವೆ ನಿರ್ಮಾಣದಿಂದ ಪರಿಸರದ ಮೇಲೆ ಆಗುವ ಪರಿಣಾಮದ ಕುರಿತು ಅದ್ಯಯನ ಮಾಡಬೇಕು. ಅದರ ವರದಿ ಎಲ್ಲಿದೆ?
4. ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ಆದೇಶ ಪಾಲನೆಯಾಗಿದೆಯಾ? ನ್ಯಾಯಾಧಿಕರಣದ ಆದೆಶದ ಪ್ರಕಾರ ಕೆರೆ ಸುತ್ತ 30 ಮೀಟರ್ ಬಫರ್ ಜೋನ್ ನಿರ್ವಹಣೆ ಮಾಡಬೇಕು. ಇದರ ಬಗ್ಗೆ ಸರ್ಕಾರ ಸಾರ್ವಜನಿಕ ದಾಖಲೆಯನ್ನು ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಯಾರಿಗೂ ಮಾಹಿತಿ ನೀಡುತ್ತಿಲ್ಲ.
5. ಇಷ್ಟು ದೊಡ್ಡ ಯೋಜನೆಗೆ ಡಿಪಿಆರ್ ಎಲ್ಲಿದೆ? ಈ ಬಗ್ಗೆ ತಜ್ಞರ ಅಭಿಪ್ರಾಯಕೇಳಿಲ್ಲ ಯಾಕೆ? ಎಂಬ ಪ್ರಶ್ನೆಗಳನ್ನು ಕೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಅನೂಪ್ ಐಯ್ಯಂಗಾರ್ ಮಾತನಾಡಿ, ಕಳೆದ ತಿಂಗಳು ಸ್ಯಾಂಕಿ ಫ್ಲೈಓವರ್ ವಿರುದ್ಧ ಮಲ್ಲೇಶ್ವರಂ ನಿವಾಸಿಗಳು ಶಾಂತಿಯುತ ನಡೆ ಹಮ್ಮಿಕೊಂಡು ಸರ್ಕಾರದ ಜನವಿರೋಧಿ ಯೋಜನೆಯನ್ನು ವಿರೋಧಿಸುತ್ತಾರೆ. ಯಾರಿಗೂ ತೊಂದರೆಯಾಗದಂತೆ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗಿ, ಈ ಮೇಲ್ಸೇತುವೆ ಅಗತ್ಯವಿಲ್ಲ, ಇದು ಪರಿಸರಕ್ಕೆ ಪೂರಕವಾಗಿಲ್ಲ ಎಂದು ತಜ್ಞರ ಅಭಿಪ್ರಾಯವಿದ್ದರೂ 40% ಕಮಿಷನ್ ಗಾಗಿ ಈ ಯೋಜನೆ ಮಾಡುತ್ತಿದ್ದೀರಾ ಎಂದು ಹೇಳಿದಾಗ, ಸ್ಥಳೀಯ ಶಾಸಕ ಅಶ್ವತ್ಥನಾರಾಯಣ ಅವರು ಪೊಲೀಸರನ್ನು ದುರ್ಬಳಕೆ ಮಾಡಿಕೊಂಡು ಮೌನ ಪ್ರತಿಭಟನೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆಮೂಲಕ ಸಾರ್ವಜನಿಕರ ವಿರುದ್ಧ ದೌರ್ಜನ್ಯ ನಡೆಸುತ್ತಿದ್ದಾರೆ ಎಂದರು.

ದುರಾಡಳಿತ, ಭ್ರಷ್ಟ ಯೋಜನೆ ಬಯಲಿಗೆಳೆದು ಹೋರಾಟ- ಪ್ರಿಯಾಂಕ್​ ಖರ್ಗೆ: ಪದೇ ಪದೆ ಅಶ್ವತ್ಥನಾರಾಯಣ ಅವರ ವಿರುದ್ಧ ಇಂತಹ ಆರೋಪ ಕೇಳಿಬರುತ್ತಿದ್ದು, ಕ್ಷೇತ್ರದಲ್ಲಿ ಪಕ್ಷದ ವತಿಯಿಂದ ಹೋರಾಟ ಮಾಡುತ್ತೀರಾ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ ಅವರು, ‘ಅನೂಪ್ ಐಯ್ಯಂಗಾರ್ ಅವರು ಪಕ್ಷದ ಅಭ್ಯರ್ಥಿಯಾಗಿದ್ದು, ಅವರು ಅಶ್ವತ್ಥನಾರಾಯಣ ಅವರ ದುರಾಡಳಿತ, ಭ್ರಷ್ಟ ಯೋಜನೆ ಬಯಲಿಗೆಳೆದು ಅದರ ವಿರುದ್ಧ ಹೋರಾಟ ಮಾಡಲಿದ್ದಾರೆ ಎಂದು ತಿಳಿಸಿದರು.

ಇದೇ ಪ್ರಶ್ನೆಗೆ ಉತ್ತರಿಸಿದ ಅನೂಪ್ ಐಯ್ಯಂಗಾರ್, ಇಂತಹ ಬೆದರಿಕೆ ಇದೇ ಮೊದಲಲ್ಲ, ಅನೇಕ ವಿಚಾರವಾಗಿ ಹೆದರಿಸುತ್ತಿದ್ದಾರೆ. ಇತ್ತೀಚೆಗೆ ಸಾರ್ವಜನಿಕ ಸಭೆಯಲ್ಲಿ ಅಸ್ವತ್ಥನಾರಾಯಣ ಅವರು ಮೇ 13ರ ನಂತರ ನಾನು ಯಾರು ಎಂದು ತೋರಿಸುತ್ತೇನೆ ಎಂದು ಹೇಳಿಕೊಂಡು ಬರುತ್ತಿದ್ದಾರೆ. ಹಾಗಿದ್ದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆ ಮಾಡುವುದೇಕೆ? ಎಂದು ಪ್ರತಿಕ್ರಿಯಿಸಿದರು.

ಇದನ್ನೂ ಓದಿ:ಕಾಂಗ್ರೆಸ್​ಗೆ ಬಸ್ಸಿನಲ್ಲಿ ಕೂರುವಷ್ಟು ಸೀಟು ಬರಲ್ಲ: ಅಶ್ವತ್ಥ್​ ನಾರಾಯಣ ವ್ಯಂಗ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.