ETV Bharat / state

ಅತಿಥಿ ಉಪನ್ಯಾಸಕರಿಗೆ ವೇತನ ಬಿಡುಗಡೆ ಮಾಡುವಂತೆ ಬಿಎಸ್‌ವೈಗೆ ಪ್ರಿಯಾಂಕ ಖರ್ಗೆ ಒತ್ತಾಯ

author img

By

Published : Jan 5, 2021, 6:01 AM IST

ಮೊದಲೇ ಕಡಿಮೆ ವೇತನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರಿಗೆ ಕಳೆದ ಆರು ತಿಂಗಳಿನಿಂದ ಸಂಬಳ ನೀಡದೇ ನಿಷ್ಕಾಳಜಿ ತೋರಿಸಿರುವುದರಿಂದ ಉಪನ್ಯಾಸಕರ ಕುಟುಂಬ ನಿರ್ವಹಣೆ ಮಾಡಲು ಬಹಳ ಕಷ್ಟವಾಗುತ್ತಿದೆ..

Priyank Kharge urge to BSY, Priyank Kharge urge to BSY for guest lecturer salary issue, Priyank Kharge, Priyank Kharge news, ಬಿಎಸ್ವೈಗೆ ಪ್ರಿಯಾಂಕ ಖರ್ಗೆ ಒತ್ತಾಯ, ವೇತನ ಬಿಡುಗಡೆ ಮಾಡುವಂತೆ ಬಿಎಸ್ವೈಗೆ ಪ್ರಿಯಾಂಕ ಖರ್ಗೆ ಒತ್ತಾಯ, ಅತಿಥಿ ಉಪನ್ಯಾಸಕರಿಗೆ ವೇತನ ಬಿಡುಗಡೆ ಮಾಡುವಂತೆ ಬಿಎಸ್ವೈಗೆ ಪ್ರಿಯಾಂಕ ಖರ್ಗೆ ಒತ್ತಾಯ, ಪ್ರಿಯಾಂಕ ಖರ್ಗೆ, ಪ್ರಿಯಾಂಕ ಖರ್ಗೆ ಸುದ್ದಿ,
ಅತಿಥಿ ಉಪನ್ಯಾಸಕರಿಗೆ ವೇತನ ಬಿಡುಗಡೆ ಮಾಡುವಂತೆ ಬಿಎಸ್ವೈಗೆ ಪ್ರಿಯಾಂಕ ಖರ್ಗೆ ಒತ್ತಾಯ

ಬೆಂಗಳೂರು : ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುವ ಅತಿಥಿ ಉಪನ್ಯಾಸಕರಿಗೆ ಕೂಡಲೇ ವೇತನ ಬಿಡುಗಡೆ ಮಾಡುವಂತೆ ಸಿಎಂಗೆ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪರಿಗೆ ಈ ಸಂಬಂಧ ಪತ್ರ ಬರೆದಿರುವ ಅವರು, ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಬೆಂಗಳೂರು ವಿಶ್ವವಿದ್ಯಾಲಯ ಹಾಗೂ ರಾಜ್ಯದ ಇತರೆ ವಿಶ್ವವಿದ್ಯಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಕಳೆದ ಆರು ತಿಂಗಳಿನಿಂದ ವೇತನ ಬಿಡುಗಡೆ ಮಾಡಿರುವುದಿಲ್ಲ.

ಮುಂದುವರೆದು ವಿಶ್ವವಿದ್ಯಾಲಯಗಳಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ಹತ್ತಾರು ವರ್ಷಗಳಿಂದ ಕಡಿಮೆ ವೇತನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅದಲ್ಲದೇ 2019ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಯುಜಿಸಿಯು ನಿಗಧಿ ಪಡಿಸಿದ ವೇತನವನ್ನು ನೀಡಲು ಸರ್ಕಾರವು ಯಾವುದೇ ಕ್ರಮ ತೆಗೆದುಕೊಂಡಿರುವುದಿಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ.

ಮೊದಲೇ ಕಡಿಮೆ ವೇತನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರಿಗೆ ಕಳೆದ ಆರು ತಿಂಗಳಿನಿಂದ ಸಂಬಳ ನೀಡದೇ ನಿಷ್ಕಾಳಜಿ ತೋರಿಸಿರುವುದರಿಂದ ಉಪನ್ಯಾಸಕರ ಕುಟುಂಬ ನಿರ್ವಹಣೆ ಮಾಡಲು ಬಹಳ ಕಷ್ಟವಾಗುತ್ತಿದೆ ಎಂದು ವಿವರಿಸಿದ್ದಾರೆ.

ಆದ್ದರಿಂದ ಸರ್ಕಾರವು ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಕಷ್ಟವನ್ನು ಅರಿತು, ಕಳೆದ ಆರು ತಿಂಗಳಿನಿಂದ ಬಾಕಿ ಉಳಿಸಿಕೊಂಡಿರುವ ವೇತನವನ್ನು ತಕ್ಷಣವೇ ಬಿಡುಗಡೆ ಮಾಡಿ 2019ರಲ್ಲಿ ಯುಜಿಸಿ ನೀಡಿರುವ ನಿರ್ದೇಶನದಂತೆ ವೇತನವನ್ನು ಹೆಚ್ಚಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಈ ಪತ್ರದ ಮೂಲಕ ಒತ್ತಾಯಿಸುತ್ತೇನೆ ಅಂತಾ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.