ETV Bharat / state

ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆಗಳ ಭರ್ತಿಗೆ ಎಲ್ಲ ಸಚಿವರಿಗೆ ಪತ್ರ ಬರೆದ ಪ್ರಿಯಾಂಕ್‌ ಖರ್ಗೆ

ಕಲ್ಯಾಣ ಕರ್ನಾಟಕದಲ್ಲಿ ಭಾರತ ಸಂವಿಧಾನದ ಅನುಚ್ಛೇದ 371 (ಜೆ) ಅಡಿ ಇಲಾಖಾವಾರು ಭರ್ತಿ ಆಗಬೇಕಿರುವ ನೇರ ನೇಮಕಾತಿ, ಮುಂಬಡ್ತಿ ಹುದ್ದೆಗಳ ವಿವರವನ್ನು ಸಚಿವ ಪ್ರಿಯಾಂಕ್‌ ಖರ್ಗೆ ಪತ್ರದೊಂದಿಗೆ ನೀಡಿದ್ದಾರೆ.

ಸಚಿವ ಪ್ರಿಯಾಂಕ್‌ ಖರ್ಗೆ
ಸಚಿವ ಪ್ರಿಯಾಂಕ್‌ ಖರ್ಗೆ
author img

By ETV Bharat Karnataka Team

Published : Oct 20, 2023, 8:06 PM IST

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ನೇರ ನೇಮಕಾತಿ ಹಾಗೂ ಬಡ್ತಿ ಮೂಲಕ ತುಂಬಬೇಕಾಗಿರುವ ಹುದ್ದೆಗಳ ತ್ವರಿತ ಭರ್ತಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ಎಲ್ಲ ಸಚಿವರಿಗೆ ಸಚಿವ ಸಂಪುಟ ಉಪ ಸಮಿತಿ ಅಧ್ಯಕ್ಷ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ.

ಭಾರತ ಸಂವಿಧಾನ ಅನುಚ್ಚೇದ 371 (ಜೆ) ಅಡಿ ಹೊರಡಿಸಲಾಗಿರುವ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶಿಸುವ ಕುರಿತು ರಚಿಸಲಾಗಿರುವ ಸಚಿವ ಸಂಪುಟ ಉಪಸಮಿತಿ ಅಧ್ಯಕ್ಷರು ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ.

2023ರ ಆಗಸ್ಟ್ 17ರಂದು ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ತೆಗೆದುಕೊಳ್ಳಲಾದ ತೀರ್ಮಾನದಂತೆ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಸ್ಥಳೀಯ ವೃಂದದಲ್ಲಿನ ಮೀಸಲಿರಿಸಿರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಬೇಕೆಂದು ಪ್ರಿಯಾಂಕ್‌ ಖರ್ಗೆ ಈ ಪತ್ರಗಳನ್ನು ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ರವಾನಿಸಿದ್ದಾರೆ. ಅನುಚ್ಛೇದ 371 (ಜೆ) ಅಡಿ ಇಲಾಖೆವಾರು ಭರ್ತಿ ಮಾಡಲು ಬಾಕಿ ಇರುವ ನೇರ ನೇಮಕಾತಿ ಹಾಗೂ ಮುಂಬಡ್ತಿಯಲ್ಲಿ ಹುದ್ದೆಗಳ ವಿವರಗಳನ್ನು ಪತ್ರದ ಜತೆ ನೀಡಲಾಗಿದೆ.

28,023 ಹುದ್ದೆಗಳು: ಕಲ್ಯಾಣ ಕರ್ನಾಟಕ ಭಾಗದಲ್ಲಿ ನೇರ ನೇಮಕಾತಿ ಮೂಲಕ 28,023 ಹುದ್ದೆಗಳನ್ನು ಭರ್ತಿ ಮಾಡಬೇಕಿದ್ದು, ಅವುಗಳಲ್ಲಿ 12,945 ಹುದ್ದೆಗಳನ್ನು ಭರ್ತಿ ಮಾಡುವ ಕ್ರಮ ಲೋಕಸೇವಾ ಆಯೋಗ ಹಾಗೂ ಇನ್ನಿತರ ಸಂಸ್ಥೆಗಳ ಮೂಲಕ ನಡೆಯುತ್ತಿದೆ. ಉಳಿದಂತೆ 15,078 ಹುದ್ದೆಗಳು ಖಾಲಿ ಇದ್ದು ಭರ್ತಿ ಪ್ರಕ್ರಿಯೆ ಆರಂಭಗೊಳ್ಳಬೇಕಿದೆ. ಅವುಗಳಲ್ಲಿ ಎ,ಬಿ,ಸಿ ಹಾಗೂ ಡಿ ವೃಂದದ ಹುದ್ದೆಗಳು ಸೇರಿವೆ ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ 9,905 ವಿವಿಧ ಹುದ್ದೆಗಳನ್ನು ಬಡ್ತಿ ಮೂಲಕ ತುಂಬಬೇಕಿದ್ದು, ಈ ಹುದ್ದೆಗಳನ್ನು ಬಡ್ತಿ ಮೂಲಕ ತುಂಬಲು ಕ್ರಮ ಕೈಗೊಳ್ಳುವಂತೆಯೂ ಪ್ರಿಯಾಂಕ್‌ ಖರ್ಗೆ ಸಂಪುಟದ ಎಲ್ಲ ಸಚಿವರಿಗೂ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ. ಇಲಾಖೆಯ ಅಧಿಕಾರಗಳ ಸಭೆ ಕರೆದು ಈ ನಿಟ್ಟಿನಲ್ಲಿ ಪ್ರಗತಿ ಸಾಧಿಸಲು ಸಹಕಾರ ನೀಡಬೇಕೆಂದೂ ಹೇಳಿದ್ದಾರೆ.

ಇದನ್ನೂಓದಿ: ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆಯುವ ವಿಚಾರ: ಕಡತ ಕ್ಯಾಬಿನೆಟ್ ಮುಂದಿಡಲು ಸಿಎಂ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.