ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮ ಆಯೋಜಕರಲ್ಲಿ ಒಬ್ಬರಾದ ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾ ಅವರನ್ನ ಎಸ್ಐಟಿ ಏಳು ಗಂಟೆಗಳ ಕಾಲ ವಿಚಾರಣೆ ನಡೆಸಿದೆ.
ಸುದೀರ್ಘ ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸರು ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ್ದೇನೆ. ಮತ್ತೆ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ ಎಂದರು. ಚಿಕ್ಕಪೇಟೆ ಎಸಿಪಿ ಮಹಾಂತ ರೆಡ್ಡಿ ನೇತೃತ್ವದಲ್ಲಿ ಮೂವರು ಇನ್ಸ್ಪೆಕ್ಟರ್ ಗಳು ಮಧ್ಯಾಹ್ನದಿಂದ ತ್ರೀವ ವಿಚಾರಣೆಗೆ ಒಳಪಡಿಸಿದ್ದರು. ಕಾರ್ಯಕ್ರಮಕ್ಕೆ ಅಮೂಲ್ಯಳನ್ನ ಆಹ್ವಾನಿಸಿದ್ದೀರಾ ? ಗೊತ್ತಿಲ್ಲ ಎಂಬುದಾದರೆ ವೇದಿಕೆ ಮೇಲೆ ಅಮೂಲ್ಯ ಹೇಗೆ ಬಂದಳು ? ಎಂದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಹಾಗೇ ಇಮ್ರಾನ್ ಅವರಿಗೆ ಇನ್ನೂ ಹಲವು ಪ್ರಶ್ನೆಗಳನ್ನ ಕೇಳಲಾಯಿತು ಎನ್ನಲಾಗಿದೆ.
ತನಿಖಾಧಿಕಾರಿಗಳ ಪ್ರಶ್ನೆಗಳಿಗೆ ಸಮಾಧಾನದಿಂದಲೇ ಉತ್ತರಿಸಿದ ಇಮ್ರಾನ್, ಅಮೂಲ್ಯ ಯಾರು ? ಅವಳು ವೇದಿಕೆ ಮೇಲೆ ಹೇಗೆ ಬಂದಳು ಎಂಬುವುದು ನನಗೆ ಗೊತ್ತಿಲ್ಲ ಎಂದು ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ.