ETV Bharat / state

ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ವೇತನಾನುದಾನ ಸಮಸ್ಯೆ ಪರಿಹರಿಸಲು ಪ್ರಯತ್ನ: ಸಚಿವ ಈಶ್ವರ ಖಂಡ್ರೆ - ಆರ್​ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘ

ಕಲ್ಯಾಣ ಕರ್ನಾಟಕ ವಿಭಾಗೀಯ ಖಾಸಗಿ ಶಿಕ್ಷಣ ಮಂಡಳಿಗಳ ಒಕ್ಕೂಟ ಮತ್ತು ಆರ್​ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘದ ಪದಾಧಿಕಾರಿಗಳ ನಿಯೋಗವು ಸಚಿವರೊಂದಿಗೆ ಸಂವಾದ ನಡೆದಿದೆ.

ಸಚಿವ ಈಶ್ವರ ಖಂಡ್ರೆ
ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ವೇತನಾನುದಾನ ಸಮಸ್ಯೆ ಪರಿಹರಿಸಲು ಪ್ರಯತ್ನ: ಸಚಿವ ಈಶ್ವರ ಖಂಡ್ರೆ
author img

By

Published : Jul 11, 2023, 11:07 PM IST

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ 1995ರ ನಂತರ ಪ್ರಾರಂಭವಾದ ಖಾಸಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ವೇತನಾನುದಾನ ಒದಗಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ಮಾತನಾಡಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ಸಚಿವರಾದ ಈಶ್ವರ ಖಂಡ್ರೆ, ಭೋಸರಾಜ್, ರಹೀಂ ಖಾನ್, ಶರಣ ಬಸಪ್ಪ ದರ್ಶನಾಪುರ ಅವರೊಂದಿಗೆ ಕಲ್ಯಾಣ ಕರ್ನಾಟಕ ವಿಭಾಗೀಯ ಖಾಸಗಿ ಶಿಕ್ಷಣ ಮಂಡಳಿಗಳ ಒಕ್ಕೂಟ ಮತ್ತು ಆರ್​ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘದ ಪದಾಧಿಕಾರಿಗಳ ನಿಯೋಗ ಸಂವಾದ ನಡೆಸಿತು. ಈ ಸಂದರ್ಭದಲ್ಲಿ ಮಾತನಾಡಿದ ಈಶ್ವರ ಖಂಡ್ರೆ, ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ಎಲ್ಲರಿಗೂ ದೊರಕಿಸುವಲ್ಲಿ ವೇತನಾನುದಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ : Karnataka Budget: ರಾಷ್ಟ್ರೀಯ ಶಿಕ್ಷಣ ನೀತಿಗೆ ಕೊಕ್; 10ನೇ ತರಗತಿವರೆಗೂ ಮಕ್ಕಳಿಗೆ ಮೊಟ್ಟೆ/ ಬಾಳೆಹಣ್ಣು ವಿತರಣೆ

ಹಿಂದಿನ ಸರ್ಕಾರದ ಅವಧಿಯಲ್ಲಿ ಶಿಕ್ಷಣದ ಹಕ್ಕು ಕಾಯ್ದೆಯ ನಿಯಮ 4ಕ್ಕೆ ತಿದ್ದುಪಡಿ ತಂದಿರುವ ಪರಿಣಾಮ ಇಂದು 9 ಲಕ್ಷಕ್ಕೂ ಅಧಿಕ ಮಕ್ಕಳು ಖಾಸಗಿ ಶಾಲೆಗಳಲ್ಲಿ ಶಿಕ್ಷಣ ಪಡೆಯುವುದರಿಂದ ವಂಚಿತರಾಗಿದ್ದಾರೆ ಎಂದು ನನಗೆ ತಿಳಿಸಲಾಗಿದೆ. ಈ ಬಗ್ಗೆ ಅಂಕಿ-ಅಂಶ ತರಿಸಿಕೊಂಡು ಸಿದ್ದರಾಮಯ್ಯ ಅವರ ಜೊತೆಗೆ ಚರ್ಚಿಸಿ ನ್ಯಾಯ ಒದಗಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ : ಸಭಾಪತಿಗಳ ಅಧ್ಯಕ್ಷತೆಯಲ್ಲಿ ಶಿಕ್ಷಣ ಇಲಾಖೆ ಸಭೆ ನಡೆಸಿದ್ದೇವೆ: ಮಧು ಬಂಗಾರಪ್ಪ

ಕೇಂದ್ರದಲ್ಲಿ ಯುಪಿಎ ಸರ್ಕಾರದ ಕಾರ್ಯಕಾಲದಲ್ಲಿ ಬಡ ಮಕ್ಕಳಿಗೂ ಉತ್ತಮ ಶಿಕ್ಷಣ ಒದಗಿಸುವ ಮಹತ್ವಾಕಾಂಕ್ಷೆಯೊಂದಿಗೆ ಆರ್​ಟಿಇ ಕಾಯ್ದೆ ಜಾರಿಗೆ ತರಲಾಗಿದೆ. ಇದರಿಂದ ಲಕ್ಷಾಂತರ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗಕ್ಕಂತೂ ಈ ಕಾಯ್ದೆ ವರದಾನವಾಗಿತ್ತು. ಈ ಬಗ್ಗೆ ಪುನರ್ ಪರಿಶೀಲಿಸುವ ಅಗತ್ಯವಿದೆ. ಆರ್​ಟಿಇ ನಿಯಮ ಬದಲಾವಣೆಯಿಂದ ಆಗಿರುವ ತೊಡಕು ನಿವಾರಿಸಿ ಕಾಂಗ್ರೆಸ್ ಸರ್ಕಾರ ಬಡವರ ಪರವಾದ ಸರ್ಕಾರ ಎಂಬುದನ್ನು ನಿರೂಪಿಸುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಆರ್​ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎನ್. ಯೋಗಾನಂದ, ಕಲ್ಯಾಣ ಕರ್ನಾಟಕ ವಿಭಾಗೀಯ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಒಕ್ಕೂಟದ ಅಧ್ಯಕ್ಷ ಸುನೀಲ್ ಹುಡುಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ : 10ನೇ ತರಗತಿ ವರೆಗೆ ಮೊಟ್ಟೆ ನೀಡುವ ಕಾರ್ಯಕ್ರಮ ವಿಸ್ತರಣೆಯಿಂದ ಮಕ್ಕಳ ದೈಹಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿ: ಸಚಿವ ಮಧು ಬಂಗಾರಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.