ETV Bharat / state

ಹಾಸ್ಟೆಲ್ ವಾರ್ಡನ್ ಹುದ್ದೆ ಭರ್ತಿಗೆ ಕ್ರಮ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ ಜಿಲ್ಲೆಗೆ 200 ಹಾಸಿಗೆ ಸಾಮರ್ಥ್ಯವುಳ್ಳ ಹೈಟೆಕ್ ಆಸ್ಪತ್ರೆ ಮಂಜೂರು ಮಾಡಲಾಗಿದೆ. ಜಾಗ ಗುರುತಿಸುವಂತೆ ನಾವು ಅಲ್ಲಿನ ಡಿಸಿಗೆ ಸೂಚಿಸಿದ್ದೇವೆ. ಬಳಿಕ ಈ ಆಸ್ಪತ್ರೆಯು ಆರಂಭವಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಯಲ್ಲಿ ಆಸ್ಪತ್ರೆಗಳ ಕೊರತೆ ಇಲ್ಲ. ಅಲ್ಲಿ ಇಎಸ್‍ಐ ಆಸ್ಪತ್ರೆ, ಕರಾವಳಿ ಭಾಗದಲ್ಲಿ ಆಸ್ಪತ್ರೆಗಳ ಸಮಸ್ಯೆ ಇಲ್ಲ ಎಂದು

author img

By

Published : Sep 21, 2022, 8:21 PM IST

procedure-for-filling-up-hostel-warden-posts
ಹಾಸ್ಟೆಲ್ ವಾರ್ಡನ್ ಹುದ್ದೆ ಭರ್ತಿಗೆ ಕ್ರಮ : ಸಚಿವ ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಧಾನಸಭೆಯಲ್ಲಿ ತಿಳಿಸಿದರು.

ಪ್ರಶ್ನೋತ್ತರ ವೇಳೆ ಕುಮಾರ ಬಂಗಾರಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗದಿಂದ 1142 ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲು ಪತ್ರ ಬರೆಯಲಾಗಿದೆ. ಅದರನ್ವಯ 190 ಪುರುಷ ಹಾಗೂ 202 ಮಹಿಳಾ ನಿಲಯ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಿ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಲೋಕಸೇವಾ ಆಯೋಗವು ಪ್ರಕಟಿಸಿದೆ. ಆದಷ್ಟು ಶೀಘ್ರ ಇವರುಗಳಿಗೆ ಸ್ಥಳ ನಿಯುಕ್ತಿ ಮಾಡಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಈಗ ಕೆಪಿಎಸ್​ಸಿ ನೀಡುವ ಪಟ್ಟಿಯ ಪ್ರಕಾರ ಮೇಲ್ವಿಚಾರಕರನ್ನು ವಿದ್ಯಾರ್ಥಿನಿಲಯಗಳಿಗೆ ಸ್ಥಳ ನಿಯುಕ್ತಿ ಮಾಡುತ್ತೇವೆ. ಇದಾದ ನಂತರವೂ ಖಾಲಿ ಉಳಿದರೆ ಗುತ್ತಿಗೆ ಆಧಾರದ ಮೇಲೆ ಮೇಲ್ವಿಚಾರಕರನ್ನು ನೇಮಿಸಿಕೊಳ್ಳುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.

ಈಗ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗಳಿಗೆ ನಿಯೋಜನೆ ಮೇಲೆ ಮೇಲ್ವಿಚಾರಕರನ್ನು ನೇಮಿಸಿ ವಿದ್ಯಾರ್ಥಿ ನಿಲಯಗಳ ಮಕ್ಕಳ ಸುರಕ್ಷತೆ, ವಿದ್ಯಾಭ್ಯಾಸ ಹಾಗೂ ಇನ್ನಿತರ ಚಟುವಟಿಕೆಗಳ ಬಗ್ಗೆ ಗಮನ ಹರಿಸಲಾಗಿದೆ ಎಂದು ಅವರು ಹೇಳಿದರು.

ಗ್ರಾಮ ಗ್ರಂಥಾಲಯ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಉಪಯೋಗಿಸದ ಅಂಬೇಡ್ಕರ್ ಭವನವನ್ನು ಗ್ರಾಮ ಗ್ರಂಥಾಲಯವಾಗಿ ಪರಿವರ್ತಿಸಲಾಗುವುದು ಎಂದು ಪೂಜಾರಿ ಅವರು, ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದರು.

ಅಪೂರ್ಣಗೊಂಡಿರುವ ಅಂಬೇಡ್ಕರ್ ಭವನವನ್ನು ಅನುದಾನದ ಕೊರತೆಯಾಗದಂತೆ ಪೂರ್ಣಗೊಳಿಸಲಾಗುವುದು. ಇದಕ್ಕೆ ಹೆಚ್ಚುವರಿ ಅನುದಾನ ನೀಡಬೇಕೆಂಬ ಬೇಡಿಕೆ ನ್ಯಾಯಯುತವಾಗಿದೆ. ಅರಕಲಗೂಡು ವಿಧಾನಸಭಾ ಕ್ಷೇತ್ರಗಳಲ್ಲಿ ಐದು ಅಪೂರ್ಣಗೊಂಡ ಅಂಬೇಡ್ಕರ್ ಭವನಗಳಿಗೆ ಹೆಚ್ಚಿನ ಅನುದಾನದ ಆವಶ್ಯಕತೆ ಇದೆ. ಈ ಅಧಿವೇಶನ ಮುಗಿದ ಒಂದು ವಾರದಲ್ಲಿ ಕ್ಷೇತ್ರಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.

ಅರಕಲಗೂಡು ವಿಧಾನಸಭಾ ಕ್ಷೇತ್ರ 25 ಅಂಬೇಡ್ಕರ್ ಭವನ ಮಂಜೂರಾಗಿದ್ದು, 18 ಭವನಗಳು ಪೂರ್ಣಗೊಂಡಿವೆ. ಐದು ಪ್ರಗತಿಯಲ್ಲಿದ್ದು, ಒಂದು ಭವನದ ನಿರ್ಮಾಣ ಸ್ಥಗಿತಗೊಂಡಿದೆ. ಹಳ್ಳಿ ಮೈಸೂರು ಹೋಬಳಿ ಕೇಂದ್ರದಲ್ಲಿ ನಿವೇಶನ ಪಡೆದು ಭವನ ನಿರ್ಮಾಣ ಮಾಡಬೇಕಿದೆ ಎಂದರು. ಪಕ್ಷಭೇದ ಮರೆತು ಹಲವು ಶಾಸಕರು ಅಪೂರ್ಣಗೊಂಡ ಅಂಬೇಡ್ಕರ್ ಭವನಕ್ಕೆ ಅನುದಾನದ ಕೊರತೆ ಇದೆ ಎಂದು ಸಚಿವರ ಗಮನ ಸೆಳೆದರು.

ತೋಟಗಾರರ ಹುದ್ದೆ ನೇಮಕಾತಿ ಪ್ರಕ್ರಿಯೆ: 200 ತೋಟಗಾರರ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ತೋಟಗಾರಿಕೆ ಸಚಿವ ಮುನಿರತ್ನ ಅವರು, ಕಾಂಗ್ರೆಸ್ ಸದಸ್ಯ ಅಮರೇಗೌಡ ಬಯ್ಯಾಪುರ ಅವರ ಪ್ರಶ್ನೆಗೆ ಉತ್ತರಿಸಿದರು. ಇಲಾಖೆಯಲ್ಲಿ 200 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಕಳೆದ ಮೇ 8ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿ ಮೇಲೆ ಸಲ್ಲಿಸಿರುವ ಆಕ್ಷೇಪಗಳ ಅರ್ಜಿಗಳು ಪರಿಶೀಲನಾ ಹಂತದಲ್ಲಿದೆ ಎಂದರು.

ಈ ವೇಳೆ ಕೋಪಗೊಂಡ ಸ್ಪೀಕರ್ ಕಾಗೇರಿ ಅವರು, ನೀವು ಅಭ್ಯರ್ಥಿಗಳಿಗೆ ನೇಮಕಾತಿ ಹುದ್ದೆಗಳನ್ನು ಕೊಡುವುದಿಲ್ಲ. ಕಡೆಪಕ್ಷ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ಕೊಡುವುದಿಲ್ಲ ಎಂದರೆ ಅವರು ಎಲ್ಲಿಗೆ ಹೋಗಬೇಕು, ಏನು ಮಾಡಬೇಕು ವಯೋಮಿತಿ ಹೆಚ್ಚಾದರೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ಆಗ ಮುನಿರತ್ನ ಅವರು, ಇನ್ನು ಒಂದು ತಿಂಗಳೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ವಿಳಂಬವಾಗುವುದಿಲ್ಲ ಎಂದು ಭರವಸೆ ನೀಡಿದರು.

19 ಚಿಕಿತ್ಸಾಲಯ ಕೇಂದ್ರ ಮಂಜೂರು : ಕೇಂದ್ರದಿಂದ ರಾಜ್ಯಕ್ಕೆ 19 ಚಿಕಿತ್ಸಾಲಯ ಕೇಂದ್ರಗಳು ಮಂಜೂರಾಗಿದ್ದು, ಶೀಘ್ರದಲ್ಲೇ ಉದ್ಘಾಟನೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು. ಕಾಂಗ್ರೆಸ್ ಸದಸ್ಯ ಯು.ಟಿ. ಖಾದರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ರಾಜ್ಯಕ್ಕೆ 19 ಚಿಕಿತ್ಸಾಲಯ ಕೇಂದ್ರಗಳನ್ನು ಮಂಜೂರು ಮಾಡಿರುವುದರಿಂದ ನಮಗೆ ಹೆಚ್ಚಿನ ಅನುಕೂಲವಾಗಲಿದೆ. ಶೀಘ್ರದಲ್ಲೇ ಇವುಗಳನ್ನು ಉದ್ಘಾಟಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಲಾಗುವುದು ಎಂದು ತಿಳಿಸಿದರು.

ಉಡುಪಿ ಜಿಲ್ಲೆಗೆ 200 ಹಾಸಿಗೆ ಸಾಮರ್ಥ್ಯವುಳ್ಳ ಹೈಟೆಕ್ ಆಸ್ಪತ್ರೆ ಮಂಜೂರು ಮಾಡಲಾಗಿದೆ. ಜಾಗ ಗುರುತಿಸುವಂತೆ ನಾವು ಅಲ್ಲಿನ ಡಿಸಿಗೆ ಸೂಚಿಸಿದ್ದೇವೆ. ಬಳಿಕ ಈ ಆಸ್ಪತ್ರೆಯು ಆರಂಭವಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆ, ಉಡುಪಿಯಲ್ಲಿ ಆಸ್ಪತ್ರೆಗಳ ಕೊರತೆ ಇಲ್ಲ.

ಅಲ್ಲಿ ಇಎಸ್‍ಐ ಆಸ್ಪತ್ರೆ, ಕರಾವಳಿ ಭಾಗದಲ್ಲಿ ಆಸ್ಪತ್ರೆಗಳ ಸಮಸ್ಯೆ ಇಲ್ಲ. ಇಲ್ಲಿ ಖಾಸಗಿಯವರು ಅತ್ಯುತ್ತಮ ಚಿಕಿತ್ಸೆ ಕೊಡುತ್ತಿದ್ದಾರೆ. ಇಎಸ್‍ಐ ಆಸ್ಪತ್ರೆ ಬೇಕು ಎಂಬ ಬೇಡಿಕೆ ಇದೆ. ಇಎಸ್‍ಐ ಆಸ್ಪತ್ರೆ ಬಂದರೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಹೇಳಿದರು

ಇಎಸ್‍ಐ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರ ಪ್ರತಿ ಮೂರು ತಿಂಗಳಿಗೊಮ್ಮೆ ನಾವು ಹಣವನ್ನು ಬಿಡುಗಡೆ ಮಾಡುತ್ತೇವೆ. ಕಳೆದ ವರ್ಷ 150 ಕೋಟಿ ಹಣ ಬಿಡುಗಡೆ ಮಾಡಿದ್ದೆವು. ಕೇಂದ್ರ ಸರ್ಕಾರ ನಮಗೆ ಕಾಲಕಾಲಕ್ಕೆ ಹಣ ಬಿಡುಗಡೆ ಮಾಡುತ್ತದೆ. ಯಾವ ಆಸ್ಪತ್ರೆಯಲ್ಲೂ ಚಿಕಿತ್ಸೆ ಸ್ಥಗಿತಗೊಂಡಿಲ್ಲ ಎಂದು ತಿಳಿಸಿದರು.

ವಿಮಾ ಆಸ್ಪತ್ರೆಗಳು ಇಲ್ಲದ ಕಡೆಗಳಲ್ಲಿ ಖಾಸಗಿ ಆಸ್ಪತ್ರೆಗಳ ಜೊತೆ ನಾವು ಒಪ್ಪಂದ ಮಾಡಿಕೊಂಡಿದ್ದೇವೆ. ಆಸ್ಪತ್ರೆಗಳು ಸಲ್ಲಿಸುವ ಬಿಲ್‍ಗಳನ್ನು ಕಾಲಕಾಲಕ್ಕೆ ನಿಯಮಾನುಸಾರ ಪಾವತಿಸಿದ್ದೇವೆ. ಇದು ಸಂಪೂರ್ಣ ಪಾರದರ್ಶಕವಾಗಿದ್ದು, ಆನ್‍ಲೈನ್ ಮೂಲಕ ನಡೆಸಲಾಗುತ್ತದೆ ಎಂದರು.

ಇದನ್ನೂ ಓದಿ: ಜಿಎಸ್​ಟಿ ಸೇರಿ ಐದು ತಿದ್ದುಪಡಿ ವಿಧೇಯಕಗಳಿಗೆ ಪರಿಷತ್​ನಲ್ಲಿ ಅಂಗೀಕಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.