ಬೆಂಗಳೂರು: ಕೆಎಸ್ಒಯು ಅವ್ಯವಹಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಹೊತ್ತಿರುವ ವಿಶ್ರಾಂತ ಕುಲಪತಿ ಪ್ರೊ.ರಂಗಪ್ಪ ಅವರು ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶದಲ್ಲಿ ಮೋದಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭಕ್ತವತ್ಸಲಂ ಸಮಿತಿ ವರದಿ ಆಧಾರದ ಮೇಲೆ ಮೈಸೂರಿನ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ರಂಗಪ್ಪ ವಿರುದ್ಧ ಗುರುವಾರವಷ್ಟೇ ಎಫ್ಐಆರ್ ದಾಖಲಾಗಿದೆ. ಹಾಗೆಯೇ ಜಾಮೀನು ಕೋರಿ ರಂಗಪ್ಪ ಅರ್ಜಿ ಸಲ್ಲಿಸಿದ್ದರೂ ಕೂಡ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ನಕಲಿ ಅಂಕಪಟ್ಟಿ, ಭ್ರಷ್ಟಾಚಾರ ಪ್ರಕರಣ: ಪ್ರೊ.ರಂಗಪ್ಪ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ
ಪ್ರೊ. ರಂಗಪ್ಪ ಅವರು ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ನ ಅಧ್ಯಕ್ಷರು ಆಗಿರುವುದರಿಂದ 107 ನೇ ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.