ETV Bharat / state

ಕೃಷ್ಣಾ ಮೇಲ್ದಂಡೆ 3ನೇ ಹಂತ.. ಡಿಸೆಂಬರ್​ದೊಳಗೆ 3,000 ಕೋಟಿ ರೂ. ವೆಚ್ಚಕ್ಕೆ ಸಚಿವ ಕಾರಜೋಳ ಸೂಚನೆ - ಕೃಷ್ಣಾ ಮೇಲ್ದಂಡೆ 3ನೇ ಹಂತ

ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಭೂಸ್ವಾಧೀನ ಮತ್ತು ಪುನರ್ವಸತಿ, ಪುನರ್​ನಿರ್ಮಾಣ ಕಾಮಗಾರಿಗಳನ್ನು ಡಿಸೆಂಬರ್ ದೊಳಗೆ ಮುಗಿಸಬೇಕು. ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524.256 ಮೀ. ಮಟ್ಟಕ್ಕೆ ನೀರು ನಿಲ್ಲಿಸಲು ಪ್ರಸಕ್ತ 11,000 ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ರೈತರ ಜಮೀನು ನೇರ ಖರೀದಿ ಮತ್ತು ಭೂಸ್ವಾಧೀನ ಕಾಯ್ದೆಯಡಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.

Progress review by Minister  Karajola
ಪ್ರಗತಿ ಪರಿಶೀಲನೆ ನಡೆಸಿದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ
author img

By

Published : Oct 27, 2022, 5:08 PM IST

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಭೂಸ್ವಾಧೀನ ಮತ್ತು ಪುನರ್ವಸತಿ, ಪುನರ್​ನಿರ್ಮಾಣ ಕಾಮಗಾರಿಗಳಿಗೆ ಡಿಸೆಂಬರ್ ಅಂತ್ಯದೊಳಗೆ 3,000 ಕೋಟಿ ರೂ.ಗಳನ್ನು ವೆಚ್ಚ ಮಾಡಲು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದರು.

ವಿಕಾಸಸೌಧದಲ್ಲಿಂದು ಪ್ರಗತಿ ಪರಿಶೀಲನೆ ನಡೆಸಿದ ಅವರು, ಪ್ರಸಕ್ತ ಸಾಲಿನಲ್ಲಿ 11,000 ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು 524.256 ಮೀ. ಮಟ್ಟಕ್ಕೆ ನೀರು ನಿಲ್ಲಿಸಲು ಅಗತ್ಯವಿರುವ 76,000 ಎಕರೆಗಳ ಪೈಕಿ 37,000 ಎಕರೆ ಪ್ರದೇಶದ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವಂತಾಗಕು ಎಂದು ಹೇಳಿದರು.

ಭೂಸ್ವಾಧೀನ ಪ್ರಕ್ರಿಯೆ ಶೀಘ್ರ ಮುಗಿಸಿ: ಅಣೆಕಟ್ಟೆಯ ಎತ್ತರವನ್ನು 524.256 ಮೀ. ಹೆಚ್ಚಿಸಲು ಮುಳುಗಡೆಯಾಗುವ 20 ಹಳ್ಳಿಗಳ ಪೈಕಿ 4 ಹಳ್ಳಿಗಳ 3700 ಕಟ್ಟಡಗಳಿಗೂ ಪರಿಹಾರ ಹಣವನ್ನು ಪಾವತಿಸಬೇಕು. ಹಳೆಯ ಭೂಸ್ವಾಧೀನ ಕಾಯ್ದೆ4(1)ರ ಅಥವಾ ಪ್ರಸ್ತುತ ಭೂಸ್ವಾಧೀನ ಕಾಯ್ದೆ 11(1)ರಡಿಯಲ್ಲಿ ಅಧಿಸೂಚಿಸಲ್ಪಟ್ಟು ಕಾರಣಾಂತರದಿಂದ ನಿಷ್ಕ್ರಿಯಗೊಂಡಿರುವ ಅಧಿಸೂಚನೆಗಳ ರೈತರ ಜಮೀನು ನೇರ ಖರೀದಿ ಮತ್ತು ಐತೀರ್ಪಿಗೆ ಒಪ್ಪಿದಲ್ಲಿ ಅಂಥವುಗಳನ್ನು ಕೂಡ ಜಿಲ್ಲಾಧಿಕಾರಿ ಮೂಲಕ ಭೂಸ್ವಾಧೀನ ಕಾಯ್ದೆಯಡಿ ಪರಿಹಾರ ನೀಡಲು ಕ್ರಮ ಕೈಗೊಂಡು ತ್ವರಿತವಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕೆಂದರು.

20 ಬಾಧಿತ ಹಳ್ಳಿಗಳಿಗೆ ಪುನರ್ವಸತಿ:20 ಬಾಧಿತ ಹಳ್ಳಿಗಳ ಪೂರ್ಣ ಪುನರ್ವಸತಿ ಕಾರ್ಯಕ್ರಮ ಪೂರ್ಣಗೊಳಿಸಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಈ ಪುನರ್ವಸತಿ ಕೇಂದ್ರಗಳ ಸ್ಥಾಪನೆಗೆ ಅಗತ್ಯವಿರುವ 6437 ಎಕರೆ ಪೈಕಿ 3278 ಎಕರೆ ಪ್ರದೇಶವನ್ನು ಈಗಾಗಲೇ ಭೂ ಸ್ವಾಧೀನಪಡಿಸಿಕೊಳ್ಳಲಾಗಿದೆ. ಪುನರ್ವಸತಿ ಕೇಂದ್ರಗಳಿಗೆ ಅಗತ್ಯವಿರುವ ವಿದ್ಯುತ್ ಪೂರೈಕೆಗೆ ಪ್ರತ್ಯೇಕ ಉಪ ಕೇಂದ್ರದ ಅಗತ್ಯವಿಲ್ಲ ಎಂದು ಇಂಧನ ಇಲಾಖೆಯ ಅಧಿಕಾರಿಗಳಿಗೆ ಸಚಿವರು ಸಲಹೆ ನೀಡಿದರು.

ಕಂದಾಯ ಅಧಿಕಾರಿಗಳ ಬಳಕೆ ಅನುಮೋದನೆ: ಭೂಸ್ವಾಧೀನ ಪ್ರಕ್ರಿಯೆ ಸಂದರ್ಭದಲ್ಲಿ ಸಿಬ್ಬಂದಿ ಕೊರತೆಯಾಗದಂತೆ ನಿವೃತ್ತ ಕಂದಾಯ ಅಧಿಕಾರಿಗಳನ್ನು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ತೊಡಗಿಸಲು ಅನುಮೋದನೆ ಪಡೆಯಲಾಯಿತು.

ಇದನ್ನೂ ಓದಿ:ಕಲುಷಿತ ನೀರು ಸೇವಿಸಿ ಸಾವನ್ನಪ್ಪಿದ ವೃದ್ಧ.. ಹತ್ತು ಲಕ್ಷ ಪರಿಹಾರ ಘೋಷಿಸಿದ ಸರ್ಕಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.